Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕ್ರೀಡಾ ಕ್ಷೇತ್ರದಲ್ಲಿ...

Kalaburagi | ಕ್ರೀಡಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಗುರುನಮನ

ವಾರ್ತಾಭಾರತಿವಾರ್ತಾಭಾರತಿ24 May 2026 9:34 PM IST
share
Kalaburagi | ಕ್ರೀಡಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಗುರುನಮನ

ಕಲಬುರಗಿ : ಅಥ್ಲೆಟಿಕ್ಸ್ ಗೆಳೆಯರ ಬಳಗ ಹಾಗೂ ಶಿಷ್ಯವೃಂದದ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ಹಿರಿಯ ಗುರುಗಳನ್ನು ಗೌರವಿಸುವ ಉದ್ದೇಶದಿಂದ “ಗುರುನಮನ” ಕಾರ್ಯಕ್ರಮವನ್ನು ನಗರದ ಹೊಸ ಜೇವರ್ಗಿ ರಸ್ತೆಯಲ್ಲಿರುವ ಆಮಂತ್ರಣ ನೆಕ್ಸ್ ಹೋಟೆಲ್‌ನಲ್ಲಿ ರವಿವಾರ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರೊ.ಎಂ.ಎಸ್.ದೇವರಮನಿ, ನಿವೃತ್ತ ಹಿರಿಯ ಅಥ್ಲೆಟಿಕ್ಸ್ ತರಬೇತಿದಾರರಾದ ಡಾ.ವಸಂತ ಕುಮಾರ ಹಾಗೂ ನಿವೃತ್ತ ಹಿರಿಯ ವಾಲಿಬಾಲ್ ತರಬೇತಿದಾರರು ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಬಂಡೆಪ್ಪ ಗಡ್ಡಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಶರಣಬಸವೇಶ್ವರ ಪದವಿ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರೊ. ಎಸ್.ಎಂ. ಹೊಳಿ, “ಕ್ರೀಡಾ ಕ್ಷೇತ್ರದಲ್ಲಿ ಗುರುಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಅವರ ಮಾರ್ಗದರ್ಶನ ಮತ್ತು ಶ್ರಮದಿಂದ ಅನೇಕ ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗಿದೆ” ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಡಾ. ಪ್ರತಾಪ್ ಸಿಂಗ್ ತಿವಾರಿ ಅವರು ಗುರು-ಶಿಷ್ಯ ಸಂಬಂಧದ ಮಹತ್ವವನ್ನು ವಿವರಿಸಿ, ವ್ಯಕ್ತಿತ್ವ ನಿರ್ಮಾಣದಲ್ಲಿ ಗುರುಗಳ ಮಾರ್ಗದರ್ಶನ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಎಂ.ಎಸ್. ಪಾಸೋಡಿ, ಉದ್ಯಮಿದಾರ ಹಾಗೂ ಕಲಬುರಗಿ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಮೆಹಬೂಬ್ ಪಟೇಲ್, ಜಿಲ್ಲಾ ಒಲಿಂಪಿಕ್ ಅಸೋಸಿಯೇಷನ್ ಉಪಾಧ್ಯಕ್ಷ ಸಿ.ಎನ್. ಬಾಬಳಗಾಂವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕ್ರೀಡಾ ಕ್ಷೇತ್ರದ ಗಣ್ಯರು, ತರಬೇತಿದಾರರು, ಹಳೆಯ ಹಾಗೂ ಹಾಲಿ ಕ್ರೀಡಾಪಟುಗಳು ಮತ್ತು ಶಿಷ್ಯರು ಭಾಗವಹಿಸಿ ಗುರುಗಳಿಗೆ ಕೃತಜ್ಞ ನಮನ ಸಲ್ಲಿಸಿದರು.

ಅಥ್ಲೆಟಿಕ್ ತರಬೇತಿದಾರ ನಾಗರಾಜ ಮಾಳಗೆ, ಜಿಲ್ಲಾ ಹ್ಯಾಂಡ್‌ಬಾಲ್ ಅಸೋಸಿಯೇಷನ್‌ನ ದತ್ತಾತ್ರೇಯ ಜೇವರ್ಗಿ, ವಾಸುದೇವ ಕುಲಕರ್ಣಿ, ಚಿನ್ನಮ್ಮ, ದೇವರಾಜ, ಸಂಜು ಕುಮಾರ, ಶೇಖರ ಹಿರೇಸೋಮನೂರ್, ಬಸವರಾಜ ಸಜ್ಜನ್, ವಿನೋದ, ಮನೀಶ ತಿವಾರಿ ಹಾಗೂ ಪ್ರವೀಣ ಪುಣೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾಧ ಲೋಕೇಶ್ ಕಾರ್ಯಕ್ರಮ ನಿರೂಪಿಸಿದರು. ನಾಗರಾಜ ಮಾಳಗೆ ಸ್ವಾಗತ ಕೋರಿದರು. ದತ್ತಾತ್ರೇಯ ಜೇವರ್ಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿದ್ದು ವಂದಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X