Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕಿರುಕುಳ ಆರೋಪ : 4 ತಿಂಗಳ...

Kalaburagi | ಕಿರುಕುಳ ಆರೋಪ : 4 ತಿಂಗಳ ಗರ್ಭಿಣಿ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ21 May 2026 11:10 PM IST
share
Kalaburagi | ಕಿರುಕುಳ ಆರೋಪ : 4 ತಿಂಗಳ ಗರ್ಭಿಣಿ ಆತ್ಮಹತ್ಯೆ

ಕಲಬುರಗಿ : ಪ್ರೀತಿಸಿ ಮದುವೆಯಾದ ಪತ್ನಿಗೆ ನಿರಂತರ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿದ ಪರಿಣಾಮ ಮನನೊಂದ ನಾಲ್ಕು ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲೂಕಿನ ಔರಾದ್ (ಬಿ) ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಗ್ರಾಮದ ನಿವಾಸಿ ಶೃತಿ ಗಂಡ ಗೋಪಾಲಸಿಂಗ್ ತಿವಾರಿ (24) ಎಂದು ಗುರುತಿಸಲಾಗಿದೆ.

ಶೃತಿ ಹಾಗೂ ಗೋಪಾಲ್ ಇಬ್ಬರೂ ಎರಡು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ಆದರೆ ಮದುವೆಯಾದ ಮೂರು ತಿಂಗಳಲ್ಲೇ ಗೋಪಾಲ್ ಕುಡಿತ, ಜೂಜಾಟ ಸೇರಿದಂತೆ ಹಲವು ದುಶ್ಚಟಗಳಿಗೆ ಒಳಗಾಗಿದ್ದು, ತನ್ನ ಜಮೀನನ್ನೂ ಮಾರಾಟ ಮಾಡಿದ್ದಾನೆ ಎನ್ನಲಾಗಿದೆ. ಅಲ್ಲದೆ ದುಶ್ಚಟಗಳಿಗಾಗಿ ಸುಮಾರು 3 ಲಕ್ಷ ರೂ. ಸಾಲ ಮಾಡಿಕೊಂಡಿದ್ದನು ಎಂದು ತಿಳಿದುಬಂದಿದೆ.

ಸಾಲ ತೀರಿಸಲು ತಾವು ವಾಸವಾಗಿದ್ದ ಮನೆಯನ್ನು ಮಾರಾಟ ಮಾಡಲು ಗೋಪಾಲ್ ಮುಂದಾಗಿದ್ದನು. ಆದರೆ ಪತ್ನಿ ಶೃತಿ ಸಹಿ ಹಾಕಲು ನಿರಾಕರಿಸಿದ್ದರಿಂದ ಆಕ್ರೋಶಗೊಂಡ ಆತ, ಆಕೆಗೆ ಹಲ್ಲೆ ನಡೆಸಿ, ಕೊರಳಿನಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಕ್ರೌರ್ಯ ಮೆರೆದಿದ್ದಾನೆ ಎಂದು ಆರೋಪಿಸಲಾಗಿದೆ.

ಗಂಡನ ದೌರ್ಜನ್ಯದಿಂದ ಬೇಸತ್ತ ಶೃತಿ ಕಳೆದ 15 ದಿನಗಳ ಹಿಂದೆ ಔರಾದ್ (ಬಿ) ಗ್ರಾಮದಲ್ಲಿರುವ ತನ್ನ ತವರು ಮನೆಗೆ ಬಂದು ವಾಸವಾಗಿದ್ದರು. ಬುಧವಾರ ಶೃತಿ ಇದ್ದ ಮನೆಗೆ ಬಂದ ಗೋಪಾಲ್ ಮತ್ತೆ ಗಲಾಟೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಇದರಿಂದ ಮನನೊಂದ ಶೃತಿ, ಬುಧವಾರ ರಾತ್ರಿ ತವರು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಬಳಿಕ ತಲೆಮರೆಸಿಕೊಳ್ಳಲು ಯತ್ನಿಸುತ್ತಿದ್ದ ಆರೋಪಿ ಗೋಪಾಲ್‌ನನ್ನು ಮಹಿಳಾ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X