ಕಲಬುರಗಿ| ಸಿಯುಕೆ ಕ್ಯಾಂಪಸ್ ನಲ್ಲಿ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ಜನ್ ಜಾತಿಯ ಗೌರವ ವರ್ಷ 2025, ಭಗವಾನ್ ಬಿರ್ಸಾ ಮುಂಡಾ ಅವರ 150 ನೇ ಜನ್ಮ ದಿನಾಚರಣೆಯ ಅಂಗವಾಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಆ.26ರ, 2025 ರಂದು ಸಿಯುಕೆಯ ಬಹುಪಯೋಗಿ ಸಭಾಂಗಣದಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿತ್ತು.
ಉಪಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಗಳು ಮತ್ತು ಅದರ ಬಳಕೆಯ ಬಗ್ಗೆಯೂ ಅವರು ಬೆಳಕು ಚೆಲ್ಲಿದರು. ಪ್ರತಿಯೊಬ್ಬ ವ್ಯಕ್ತಿಯು ತನ್ನ ಆರೋಗ್ಯಕ್ಕಾಗಿ ಸ್ವಲ್ಪ ಸಮಯವನ್ನು ನೀಡಬೇಕು, ನೀವು ಆರೋಗ್ಯವನ್ನು ಕಾಪಾಡಿಕೊಂಡರೆ ಆರೋಗ್ಯವು ನಿಮ್ಮನ್ನು ನೋಡಿಕೊಳ್ಳುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಾ.ಜ್ಯೋತಿ, ಡಾ.ರೋಹಿತ, ಡಾ.ಮಹೇಂದರ ರೆಡ್ಡಿ, ಡಾ.ಎಂ.ಎಸ್ ಪಸೋಡಿ, ಡಾ.ಜಗದೀಶ ಬಿರಾದಾರ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಡಾ.ರಂಗನಾಥ್ ಪ್ರಸ್ತಾವಿಕ ನುಡಿಗಳನ್ನಾಡಿದರು, ಡಾ.ಡಿ.ಗೌತಮ ವಂದನಾರ್ಪಣೆ ಮಾಡಿದರು.
Next Story





