ಕಲಬುರಗಿ | ನಕಲಿ ವೈದ್ಯರ ಕ್ಲಿನಿಕ್ ಗಳ ಮೇಲೆ ಆರೋಗ್ಯ ಅಧಿಕಾರಿಗಳಿಂದ ಧಿಡೀರ್ ದಾಳಿ

ಕಲಬುರಗಿ: ಜೇವರ್ಗಿ ಪಟ್ಟಣ ಹಾಗೂ ಜೇವರ್ಗಿ ತಾಲ್ಲೂಕು ವ್ಯಾಪ್ತಿಯಲ್ಲಿರುವ ನಕಲಿ ವೈದ್ಯರ ಕ್ಲಿನಿಕ್ ಗಳ ಮೇಲೆ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಕಲ್ಯಾಣ ಅಧಿಕಾರಿ ಶರಣಬಸಪ್ಪ ಕ್ಯಾತನಾಳ ಮತ್ತು ತಾಲ್ಲೂಕು ಅರೋಗ್ಯ ಅಧಿಕಾರಿ ಡಾ.ಉಮೇಶ ಶರ್ಮಾ, ಜಂಟಿಯಾಗಿ ಕ್ಲಿನಿಕ್ ಗಳ ಮೇಲೆ ದಾಳಿ ನಡೆಸಿದರು.
ಜಿಲ್ಲಾಧಿಕಾರಿಗಳ ಆದೇಶದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡದೊಂದಿಗೆ ಜೇವರ್ಗಿ ಪಟ್ಟಣ ಹಾಗೂ ನೆಲೋಗಿ, ಸೊನ್ನಾ, ಗ್ರಾಮದಲ್ಲಿರುವ ಕ್ಲಿನಿಕ್ ಗಳ ಮೇಲೆ ಅನಿರೀಕ್ಷಿತವಾಗಿ ದಾಳಿ ಮಾಡಿ ಮುಚ್ಚಿಸಿ ಸೂಕ್ತವಾದ ಕ್ರಮ ಕೈಗೊಳ್ಳಲು ಸೂಚಿಸಿದರು.
ನೆಲೋಗಿ ಸಮುದಾಯದ ಅರೋಗ್ಯ ಕೇಂದ್ರದ ಆಡಳಿತ ವೈದ್ಯಧಿಕಾರಿ ಡಾ.ಬಸವರಾಜ ಕವಲಗಿ, ವಿಷಯ ನಿರ್ವಾಹಕರಾದ ಆಕಾಶ್ ರೆಡ್ಡಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಾಮರಾವ್, ಸೇರಿದಂತೆ ಸಿಬ್ಬಂದಿಯವರು ದಾಳಿಯಲ್ಲಿ ಇದ್ದರು.
Next Story





