ಕಲಬುರಗಿ| ಧಾರಾಕಾರ ಮಳೆ; ಎರಡು ದಿನ ಶಾಲೆಗಳಿಗೆ ರಜೆ ಘೋಷಣೆ

ಕಲಬುರಗಿ: ಜಿಲ್ಲೆಯಾದ್ಯಂತ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಹಿನ್ನೆಲೆ ದಸರಾ ರಜೆ ನಡುವೆಯೂ ಕೆಲವು ಆಡಳಿತ ಮಂಡಳಿಯವರು ಶಾಲೆ ನಡೆಸುತ್ತಿದ್ದು, ಮಕ್ಕಳ ಹಿತದೃಷ್ಟಯಿಂದ ಸದರಿ ಶಾಲೆಗಳಿಗೆ ಸೆಪ್ಟೆಂಬರ್ 27 & 28 ರಂದು ರಜೆ ಘೋಷಿಸಿ ಡಿ.ಡಿ.ಪಿ.ಐ ಸೂರ್ಯಕಾಂತ ಮದಾನೆ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶದಂತೆ ಹವಾಮಾನ ಇಲಾಖೆಯು ಮುಂದಿನ 48 ಗಂಟೆಗಳ ಕಾಲ ಕಲಬುರಗಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿರುತ್ತದೆ. ಪ್ರಯುಕ್ತ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಶಾಲೆಗಳಿಗೆ ಈಗಾಗಲೇ ದಸರಾ ರಜೆ ಇದ್ದು ಜಿಲ್ಲೆಯ ಕೆಲವು ಶಾಲೆಗಳ ಆಡಳಿತ ಮಂಡಳಿಯವರು ದಸರಾ ರಜೆಯಿಂದ ವಿನಾಯತಿ ಪಡೆದುಕೊಂಡು ಶಾಲೆಗಳನ್ನು ನಡೆಸುತ್ತಿರುವ, ಸದರಿ ಶಾಲೆಗಳಿಗೆ ಮುಂಜಾಗೃತ ಕ್ರಮವಾಗಿ ಮತ್ತು ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ದಿನಾಂಕ: 27-09-2025 ಮತ್ತು 28-09-2025ರಂದು ಎರಡು ದಿನಗಳ ಕಾಲ ರಜೆ ಘೋಷಿಸಿ ಆದೇಶಿಸಿದೆ.
ರಜಾ ಅವಧಿಯ ಪಾಠ ಬೋಧನೆಯನ್ನು ಮುಂದಿನ ರಜಾ ದಿನಗಳಂದು ಸರಿದೂಗಿಸುವಂತೆ ತಿಳಿಸಿದ್ದಾರೆ.







