ಕಲಬುರಗಿ| ಎರಡು ಲಾರಿಗಳ ನಡುವೆ ಭೀಕರ ಅಪಘಾತ: ಇಬ್ಬರು ಚಾಲಕರ ಸ್ಥಿತಿ ಗಂಭೀರ

ಕಲಬುರಗಿ: ಎರಡು ಲಾರಿಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಚಾಲಕರು ಗಂಭೀರವಾಗಿ ಗಾಯಗೊಂಡ ಘಟನೆ ಸೇಡಂ ತಾಲೂಕಿನ ಮಳಖೇಡ ಪೊಲೀಸ್ ಠಾಣೆ ವ್ಯಾಪ್ತಿಯ ಬೀರನಳ್ಳಿ ಕ್ರಾಸ್ ಬಳಿ ಬುಧವಾರ ರಾತ್ರಿ ನಡೆದಿದೆ.
ಕಲಬುರಗಿ ಕಡೆಗೆ ಬರುತ್ತಿದ್ದ ಟ್ಯಾಂಕರ್ ಹಾಗೂ ಈರುಳ್ಳಿ ತುಂಬಿಕೊಂಡು ಹೈದರಾಬಾದ್‌ಗೆ ತೆರಳುತ್ತಿದ್ದ ಲಾರಿಗಳ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಎರಡೂ ಲಾರಿಗಳ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಮಳಖೇಡ ಠಾಣೆಯ ಪಿಎಸ್‌ಐ ಶರಣಪ್ಪ ಜಾಕನಳ್ಳಿ ನೇತೃತ್ವದ ಪೊಲೀಸ್ ತಂಡದ ಸಂಜಯ್ ಬಿರಾದಾರ, ಬಸವರಡ್ಡಿ, ಆನಂದಪ್ಪ, ಜಗದೀಶ್ ಹಾಗೂ ಆಸೀಫಮಿಯಾ ಅವರು ಚಾಲಕರನ್ನು ತುರ್ತು ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದೆ.
Next Story




