Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ: ಕನಿಷ್ಠ ವೇತನ ಜಾರಿಗೆ...

ಕಲಬುರಗಿ: ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಹಾಸ್ಟೆಲ್ ಹೊರಗುತ್ತಿಗೆ ನೌಕರರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ30 July 2026 7:12 PM IST
share
ಕಲಬುರಗಿ: ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಹಾಸ್ಟೆಲ್ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಕಲಬುರಗಿ: ಜಿಲ್ಲೆಯ ವಿವಿಧ ಹಾಸ್ಟೆಲ್‌ಗಳು ಹಾಗೂ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ತಕ್ಷಣ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಬಳಿಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ ಸಂಘದ ಪದಾಧಿಕಾರಿಗಳು, ಹಾಸ್ಟೆಲ್ ಹಾಗೂ ವಸತಿ ನಿಲಯಗಳ ಹೊರಗುತ್ತಿಗೆ ನೌಕರರು ಹಲವು ದಿನಗಳಿಂದ ಕನಿಷ್ಠ ವೇತನಕ್ಕಾಗಿ ಹೋರಾಟ ನಡೆಸುತ್ತಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಸ್ಯೆ ಬಗೆಹರಿದಿಲ್ಲ ಎಂದು ಆರೋಪಿಸಿದರು.

ಬಿ.ಸಿ.ಎಂ. ಇಲಾಖೆಯ ಹಾಸ್ಟೆಲ್‌ಗಳ ನೌಕರರಿಗೆ ಇತ್ತೀಚಿನ ತಿಂಗಳ ವೇತನವನ್ನು ಕನಿಷ್ಠ ವೇತನದಂತೆ ಪಾವತಿಸಲಾಗಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕೂಡ ಒಂದು ತಿಂಗಳ ವೇತನ ಜಾರಿಯಾಗಿದೆ. ಆದರೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಇಂದಿರಾಗಾಂಧಿ, ಏಕಲವ್ಯ ಸೇರಿದಂತೆ ಕ್ರೈಸ್ ವಸತಿ ನಿಲಯಗಳ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ದೊರೆಯದೆ, ಮೂರು ತಿಂಗಳ ವೇತನ ಬಾಕಿ ಉಳಿದಿದೆ ಎಂದು ಸಂಘದ ಮುಖಂಡರು ದೂರಿದರು.

ಕಲಬುರಗಿ ನಗರದ ಖಜಾನೆಯಲ್ಲಿ ಹೊರಗುತ್ತಿಗೆ ನೌಕರರ ವೇತನ ಬಿಲ್‌ಗಳನ್ನು ಪಾವತಿಸಲು ವಿಳಂಬ ಮಾಡಲಾಗುತ್ತಿದ್ದು, ಭ್ರಷ್ಟಾಚಾರದ ಆರೋಪಗಳ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಹಾಸ್ಟೆಲ್ ನೌಕರರಿಗೆ ವಾರಕ್ಕೊಂದು ರಜೆ ನೀಡಬೇಕು ಎಂಬ ಬೇಡಿಕೆಯನ್ನೂ ಈಡೇರಿಸಬೇಕು. ಸಮಾಜ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಕುರಿತು ಪರಿಶೀಲನೆ ನಡೆಸಬೇಕು. ನೌಕರರ ಸಮಸ್ಯೆಗಳ ಕುರಿತು ಚರ್ಚಿಸಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆಯಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಪ್ರತಿಭಟನೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ, ಮುಹಮ್ಮದ್ ಝಮೀರುದ್ದೀನ್, ಅಲ್ಲಾ ಪಟೇಲ್, ನಾಗರತ್ನ ಮದನಕರ್, ಪರಶುರಾಮ, ಮೇಘರಾಜ ಕಟಾರೆ, ಬಾಬು ಹೊಸಮನಿ, ನರಸಮ್ಮ ಚಂದನಕೇರಾ, ಲಕ್ಷ್ಮೀಪುತ್ರ ಕಲ್ಯಾಣಿ, ನರಸಮ್ಮ ಕೋಡಂಪಳ್ಳಿ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Kalaburagihostel
share
ವಾರ್ತಾಭಾರತಿ
ವಾರ್ತಾಭಾರತಿ
Next Story
X