ಕಲಬುರಗಿ | ಮಳೆಯಿಂದ ಅಪಾರ ಬೆಳೆ ನಷ್ಟ : ಎಕರೆಗೆ 25 ಸಾವಿರ ರೂ. ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ಆಗಿರುವ ಬೆಳೆನಷ್ಟಕ್ಕೆ ಪ್ರತಿ ಎಕರೆಗೆ 25 ಸಾವಿರ ರೂ. ನಷ್ಟಪರಿಹಾರ ಘೋಷಣೆ ಮಾಡಬೇಕು ಸೇರಿದಂತೆ ಇನ್ನಿತರ ಬೇಡಿಕೆಗಳಿಗಾಗಿ ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಕಲಬುರಗಿ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟಿಸಿ, ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಗಣಪತರಾವ್ ಕೆ.ಮಾನೆ, ಜಿಲ್ಲಾ ಕಾರ್ಯದರ್ಶಿ ಮಹೇಶ್ ಎಸ್.ಬಿ., ಜಿಲ್ಲಾ ನಾಯಕರಾದ ಭಾಗಣ್ಣ, ವಿಶ್ವನಾಥ್ ಸಿಂಗೆ, ನೀಲಕಂಠ ಎಂ ಹುಲಿ, ಮಲ್ಲಯ್ಯ ಗುತ್ತೇದಾರ್, ಹುಲಿರಾಜ್, ಚೌಡಪ್ಪ ಗಂಜಿ, ಶಿವರಾಜ್ ಗಂಗಾಣಿ, ಭೀಮಾಶಂಕರ ಆಂದೋಲಾ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Next Story





