Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಪ್ರವಾಸಿ ಮಿತ್ರರಿಗೆ...

ಕಲಬುರಗಿ | ಪ್ರವಾಸಿ ಮಿತ್ರರಿಗೆ ಸಮವಸ್ತ್ರ ವಿತರಿಸಿದ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ4 July 2025 6:24 PM IST
share
ಕಲಬುರಗಿ | ಪ್ರವಾಸಿ ಮಿತ್ರರಿಗೆ ಸಮವಸ್ತ್ರ ವಿತರಿಸಿದ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರವಾಸಿ ಮಿತ್ರ ಯೋಜನೆಯಡಿ 40 ಪ್ರವಾಸಿ ಮಿತ್ರರಿಗೆ ಸಮವಸ್ತ್ರವನ್ನು ವಿತರಣೆ ಮಾಡಿದರು.

ಪ್ರವಾಸಿಗರ ಸುರಕ್ಷತೆ, ಭದ್ರತೆ ಹಾಗೂ ಪ್ರವಾಸಿ ತಾಣಗಳ ಸಂರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ತರಬೇತಿ ಪಡೆದ ಗೃಹರಕ್ಷಕ ಸಿಬ್ಬಂದಿಗಳನ್ನು ಕಲಬುರಗಿ ಜಿಲ್ಲೆಯ ಪ್ರವಾಸಿತಾಣಗಳಲ್ಲಿ ಪ್ರವಾಸಿ ಮಿತ್ರ (ಟೂರಿಸ್ಟ್ ಪೊಲೀಸ್) ಹೆಸರಿನಡಿ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿದ್ದು, ಪ್ರವಾಸಿಗರಿಗೆ ಪ್ರವಾಸಿ ಮಿತ್ರರನ್ನು ಗುರುತಿಸಲು ಅನುಕೂಲವಾಗುವಂತೆ ಪ್ರವಾಸೋದ್ಯಮ ಇಲಾಖೆಯ ಅನುದಾನದಡಿ ಇಂದಿಲ್ಲಿ ಸಮವಸ್ತ್ರ ವಿತರಿಸಲಾಯಿತು.

ಕಲಬುರಗಿ ಜಿಲ್ಲೆಯ ಪ್ರವಾಸಿ ತಾಣಗಳಾದ ಶ್ರೀಶರಣಬಸವೇಶ್ವರ ದೇವಸ್ಥಾನ, ಬುದ್ದ ವಿಹಾರ, ಕಲಬುರಗಿ ಕೋಟೆ, ಪ್ರಾಣಿ ಸಂಗ್ರಹಾಲಯ, ಪ್ರಾಚ್ಯ ವಸ್ತು ಸಂಗ್ರಹಾಲಯ, ಘತ್ತರಗಿ ಭಾಗ್ಯವಂತಿ ದೇವಸ್ಥಾನ, ಗಾಣಗಾಪೂರ ದತ್ತ ದೇವಸ್ಥಾನ, ಲಾಡ್ಲೆ ಮಶಾಕ್ ದರ್ಗಾ, ಮಳಖೇಡ ಕೋಟೆ, ಚಂದ್ರಂಪಳ್ಳಿ ಜಲಾಶಯ ಹೀಗೆ ಪ್ರವಾಸೋದ್ಯಮ ಇಲಾಖೆಯಿಂದ ಗುರುತಿಸಲಾದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಪ್ರವಾಸಿ ಮಿತ್ರ ಯೋಜನೆಯಡಿ ತರಬೇತಿ ಪಡೆದ 48 ಪ್ರವಾಸಿ ಮಿತ್ರ ಸಿಬ್ಬಂದಿಗಳನ್ನು ಹಂತ ಹಂತವಾಗಿ ದೇಶಿ ಹಾಗೂ ವಿದೇಶಿಯ ಪ್ರವಾಸಿಗರ ಸೂಕ್ತ ಭದ್ರತೆಗೆ ನಿಯೋಜಿಸಲಾಗುತ್ತಿದೆ.

2015ರಲ್ಲಿ ಪ್ರಾರಂಭವಾದ ಈ ಯೋಜನೆಯುಡಿ ಗೃಹ ರಕ್ಷಕದಳದ ಅರ್ಹ ಸಿಬ್ಬಂದಿಯನ್ನು ಆಯ್ಕೆ ಮಾಡಿ ಒಂದು ತಿಂಗಳುಗಳ ಕಾಲ ಪ್ರವಾಸಿ ತಾಣಗಳ ಕುರಿತು, ಪ್ರವಾಸಿಗರೊಂದಿಗೆ ಸೌಜನ್ಯದಿಂದ ವರ್ತನೆ ಹಾಗೂ ಪೊಲೀಸ್‌ ನಿಯಮಾವಳಿಗಳಾದಿಯಾಗಿ ವಿಶೇಷ ತರಬೇತಿ ನೀಡಲಾಗಿದೆ.

ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್‌, ವಿಧಾನ ಪರಿಷತ್ ಶಾಸಕರಾದ ಜಗದೇವ ಗುತ್ತೇದಾರ್‌, ತಿಪ್ಪಣ್ಣಪ್ಪ ಕಮಕನೂರ, ಕಲಬುರಗಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕ ಡಾ.ತಿಪ್ಪೆಸ್ವಾಮಿ, ಉಪನಿರ್ದೇಶಕಿ ಬೇಬಿ ಮೋಗೇರ್, ಸಹಾಯಕ ಅಭಿಯಂತ ಯೋಗೇಶ ಅಣದೂರೆ ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X