Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಮಧುಮೇಹ ರೋಗಿಗಳಲ್ಲಿ...

Kalaburagi | ಮಧುಮೇಹ ರೋಗಿಗಳಲ್ಲಿ ಪಿಎಡಿ ಅಪಾಯ ಹೆಚ್ಚಳ, ನಿರ್ಲಕ್ಷ್ಯ ಬೇಡ : ಡಾ.ವಿನಯ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ8 May 2026 5:07 PM IST
share
Kalaburagi | ಮಧುಮೇಹ ರೋಗಿಗಳಲ್ಲಿ ಪಿಎಡಿ ಅಪಾಯ ಹೆಚ್ಚಳ, ನಿರ್ಲಕ್ಷ್ಯ ಬೇಡ : ಡಾ.ವಿನಯ್ ಕುಮಾರ್

ಕಲಬುರಗಿ : ಮಧುಮೇಹ ರೋಗಿಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಪೆರಿಫೆರಲ್ ಆರ್ಟೀರಿಯಲ್ ಡಿಸೀಸ್ (ಪಿಎಡಿ) ಕುರಿತು ಎಚ್ಚರಿಕೆ ನೀಡಿರುವ ಯಶೋದಾ ಆಸ್ಪತ್ರೆಯ ಹಿರಿಯ ವಾಸ್ಕುಲರ್ ಮತ್ತು ಎಂಡೋವಾಸ್ಕ್ಯುಲರ್ ಶಸ್ತ್ರಚಿಕಿತ್ಸಕರಾದ ಡಾ. ವಿನಯ್ ಕುಮಾರ್ ಕೆ, ಸಮಯಕ್ಕೆ ಸರಿಯಾಗಿ ಪತ್ತೆಹಚ್ಚದಿದ್ದರೆ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗಬಹುದು ಎಂದು ತಿಳಿಸಿದ್ದಾರೆ.

ನಗರದ ಯಶೋಧ ಮೆಡಿಕಲ್ ಸೆಂಟರ್‌ನ ವೈಷ್ಣವಿ ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲು ಮತ್ತು ಪಾದಗಳಿಗೆ ರಕ್ತವನ್ನು ಸರಬರಾಜು ಮಾಡುವ ರಕ್ತನಾಳಗಳು ಇಳಿಕೆಯಾಗುವುದು ಅಥವಾ ತಡೆಯಾಗುವುದರಿಂದ ಪಿಎಡಿ ಉಂಟಾಗುತ್ತದೆ ಎಂದು ವಿವರಿಸಿದರು. ಇದರಿಂದ ಕಾಲುಗಳಿಗೆ ರಕ್ತಸಂಚಾರ ಕಡಿಮೆಯಾಗಿ ವಿವಿಧ ತೊಂದರೆಗಳು ಕಾಣಿಸಿಕೊಳ್ಳುತ್ತವೆ ಎಂದರು.

ನಡೆಯುವಾಗ ಕಾಲಿನಲ್ಲಿ ನೋವು, ಕಾಲುಗಳಲ್ಲಿ ದೌರ್ಬಲ್ಯ, ಪಾದಗಳು ತಣ್ಣಗಾಗುವುದು, ಗಾಯಗಳು ತಡವಾಗಿ ಗುಣಮುಖವಾಗುವುದು ಹಾಗೂ ಬೆರಳುಗಳ ಬಣ್ಣ ಬದಲಾವಣೆ ಪಿಎಡಿನ ಪ್ರಮುಖ ಲಕ್ಷಣಗಳಾಗಿವೆ. ವಿಶೇಷವಾಗಿ ಮಧುಮೇಹಿಗಳಲ್ಲಿ ಸಣ್ಣ ಗಾಯಗಳೂ ಗಂಭೀರವಾಗುವ ಸಾಧ್ಯತೆ ಹೆಚ್ಚಿದ್ದು, ನರ ಹಾನಿಯಿಂದ ನೋವು ಅರಿಯದ ಪರಿಸ್ಥಿತಿಯೂ ಉಂಟಾಗಬಹುದು ಎಂದು ಹೇಳಿದರು.

ಕಾಲಿನ ರಕ್ತದೊತ್ತಡ ಪರೀಕ್ಷೆ ಹಾಗೂ ಡಾಪ್ಲರ್ ಸ್ಕ್ಯಾನ್‌ನಂತಹ ಸರಳ ಪರೀಕ್ಷೆಗಳ ಮೂಲಕ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಬಹುದು. ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿ ಇಡುವುದು, ಧೂಮಪಾನದಿಂದ ದೂರವಿರುವುದು ಹಾಗೂ ಪಾದಗಳಲ್ಲಿ ಗಾಯಗಳಿರುವುದನ್ನು ನಿಯಮಿತವಾಗಿ ಪರಿಶೀಲಿಸುವುದರಿಂದ ಗಂಭೀರ ಸಮಸ್ಯೆಗಳನ್ನು ತಡೆಯಬಹುದು ಎಂದು ಸಲಹೆ ನೀಡಿದರು.

ರೋಗದ ತೀವ್ರತೆಗೆ ಅನುಗುಣವಾಗಿ ಔಷಧ ಚಿಕಿತ್ಸೆ ಮತ್ತು ಆಂಜಿಯೋಪ್ಲಾಸ್ಟಿ ಸೇರಿದಂತೆ ವಿವಿಧ ಚಿಕಿತ್ಸೆಗಳು ಲಭ್ಯವಿದ್ದು, ಸಮಯಕ್ಕೆ ಸರಿಯಾದ ಚಿಕಿತ್ಸೆ ಪಡೆದರೆ ಅಂಗವಿಚ್ಛೇದನದಂತಹ ಗಂಭೀರ ಪರಿಸ್ಥಿತಿಯನ್ನು ತಪ್ಪಿಸಬಹುದು ಎಂದು ತಿಳಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಕೇಶವ್ ಕುಲಕರ್ಣಿ, ಸತೀಶ್ ಸಿ.ಎಚ್. ಇದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X