ಕಲಬುರಗಿ | ಸಾಮಾಜಿಕ ಜಾಲತಾಣಗಳಲ್ಲಿ ಅಂಬೇಡ್ಕರ್ ಗೆ ಅವಹೇಳನ : ಓರ್ವನ ಬಂಧನ

ಕಲಬುರಗಿ : ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಕುರಿತು ಅವಹೇಳನ ಹಾಗೂ ಅನ್ಯ ಧರ್ಮಿಯರ ಕುರಿತು ಟೀಕೆ ಮತ್ತು ದಲಿತರಿಗೆ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಪೋಲಿಸರು ಆರೋಪಿಯೊರ್ವನನ್ನು ಬಂಧಿಸಿದ್ದಾರೆ.
ಚಿತ್ತಾಪುರ ತಾಲ್ಲೂಕಿನ ದಂಡೋತಿ ಗ್ರಾಮದ ಹಿಟ್ಟಿನ ಗಿರಣಿ ವ್ಯಾಪಾರಿ ಮತ್ತು ರೇಶನ್ ಡೀಲರ್ ಜಗನ್ನಾಥ್ (32) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಪತ್ರಕರ್ತ ಪೃಥ್ವಿರಾಜ್ ಅವರು ನೀಡಿದ ದೂರಿನ ಆಧಾರದ ಮೇಲೆ ಪೋಲಿಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಕುರಿತು ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
Next Story





