ಕಲಬುರಗಿ | ಅಂತರ ಮಹಾವಿದ್ಯಾಲಯಗಳ ಮಹಿಳಾ ಕಬಡ್ಡಿ ಪಂದ್ಯಾವಳಿ : ಸೇಡಂ ಕಾಲೇಜಿಗೆ ಪ್ರಥಮ ಸ್ಥಾನ

ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಅಂತರ ಮಹಾವಿದ್ಯಾಲಯಗಳ ಮಹಿಳಾ ಕಬಡ್ಡಿ ಪಂದ್ಯಾವಳಿಯಲ್ಲಿ ಸೇಡಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ಸಮಗ್ರ ಪ್ರಶಸ್ತಿ ಪಡೆದುಕೊಂಡರು.
ಬೆಳಗಾವಿಯಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪುರುಷರ ಕಬಡ್ಡಿಯ ಅಂತರ ಮಹಾವಿದ್ಯಾಲಯಗಳ ದಕ್ಷಿಣ ವಲಯ ಪಂದ್ಯಾವಳಿಯಲ್ಲಿ ಕಾಲೇಜಿನ ಎರಡು ವಿದ್ಯಾರ್ಥಿಗಳು ಆಯ್ಕೆ ಆಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸೇಡಂ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮತ್ತು ವೈದ್ಯಕೀಯ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ.
ಕಾಲೇಜಿನ ಪ್ರಾಂಶುಪಾಲ ಡಾ.ಪಂಡಿತ ಬಿ.ಕೆ., ದೈಹಿಕ ಶಿಕ್ಷಣ ನಿರ್ದೇಶಕ ಡಾ.ಜೆ.ಎಸ್.ಪಟ್ಟಣಕರ್, ಡಾ.ಸುದರ್ಶನ್, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
Next Story





