Kalaburagi | ಅಂತರ್ ಮಹಾವಿದ್ಯಾಲಯ ಚೆಸ್ ಪಂದ್ಯಾವಳಿ: ಗೋದುತಾಯಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ

ಕಲಬುರಗಿ: ಅಂತರ್ ಮಹಾವಿದ್ಯಾಲಯ ಚೆಸ್ ಕ್ರೀಡಾಕೂಟದಲ್ಲಿ ನಗರದ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ನಗರದ ಬಿಬಿ ರಜಾ ಮಹಾವಿದ್ಯಾಲಯ ಮತ್ತು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಡೆದ ಚೆಸ್ ಪಂದ್ಯಾವಳಿಯಲ್ಲಿ ಗೋದುತಾಯಿ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಭಾಗ್ಯವಂತಿ, ದೀಪಿಕಾ, ಪ್ರೇಮಾ, ಶ್ವೇತಾ, ಅಂಬಿಕಾ ಹಾಗೂ ರಾಧಿಕಾ ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ವಿದ್ಯಾರ್ಥಿನಿಯರಿಗೆ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕಿ ಡಾ. ರಾಜಲಕ್ಷ್ಮೀ ಡಿ. ಅವರು ತರಬೇತಿ ನೀಡಿದ್ದರು.
ವಿದ್ಯಾರ್ಥಿನಿಯರ ಸಾಧನೆಗೆ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಸೀಮಾ ಪಾಟೀಲ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
Next Story




