Kalaburagi | ಅತಿಥಿ ಉಪನ್ಯಾಸಕ/ ಸಂಪನ್ಮೂಲ ವ್ಯಕ್ತಿಗಳಾಗಿ ಬೋಧನೆ ಮಾಡಲು ಅರ್ಜಿ ಆಹ್ವಾನ

ಕಲಬುರಗಿ: ಮೈಸೂರು(ಕಾವಾ) ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಸಂಸ್ಥೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಮಾತ್ರ ಗೌರವ ಸಂಭಾವನೆ ಆಧಾರದ ಮೇಲೆ (ಷರತ್ತು ಹಾಗೂ ನಿಬಂಧನೆಗೊಳಪಟ್ಟು) ಅತಿಥಿ ಉಪನ್ಯಾಸಕ/ ಸಂಪನ್ಮೂಲ ವ್ಯಕ್ತಿಗಳಾಗಿ ಬೋಧನೆ ಮಾಡಲು ಇಚ್ಛೆಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೈಸೂರು (ಕಾವಾ) ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜಿನ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅನ್ವಯಕಲೆ, ಚಿತ್ರಕಲೆ, ಶಿಲ್ಪಕಲೆ, ಅಚ್ಚುಕಲೆ(ಗ್ರಾಫಿಕ್ಸ್), ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ, ಕಲಾ ಇತಿಹಾಸ, ಕನ್ನಡ, ಇಂಗ್ಲೀಷ್, ಹಿಂದಿ, ಭಾರತ ಮತ್ತು ಭಾರತೀಯ ಸಂವಿಧಾನ ಹಾಗೂ ಸಂವಿಧಾನದ ಮೌಲ್ಯಗಳು, ಪರಿಸರ ಅಧ್ಯಯನ ವಿಷಯಗಳಲ್ಲಿ ಬೋಧನೆ ಮಾಡಲು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು https://www.cavamysore.karnataka.gov.in ವೆಬ್‍ಸೈಟ್ ನಲ್ಲಿ ಆನ್‍ಲೈನ್ ಮೂಲಕ 2026ರ ಮೇ 15 ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ಮೇ 19 ರಂದು ಬೆಳಿಗ್ಗೆ 11 ಗಂಟೆಗೆ ಸಂಸ್ಥೆಯಲ್ಲಿ ಸಂದರ್ಶನ ನಡೆಯಲಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು www.mysore.nic.in ಹಾಗೂ https://www.cavamysore.karnataka.gov.in ವೆಬ್‍ಸೈಟ್ ಅನ್ನು ಹಾಗೂ ಕಚೇರಿ ಸಹಾಯವಾಣಿಗೆ ಕಚೇರಿ ಸಮಯದಲ್ಲಿ 0821-2438931 ಗೆ ಸಂಪರ್ಕಿಸಲು ಕೋರಲಾಗಿದೆ.




