Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸಮಾಜದಲ್ಲಿನ ಅನಿಷ್ಟ ಪದ್ಧತಿ...

ಕಲಬುರಗಿ | ಸಮಾಜದಲ್ಲಿನ ಅನಿಷ್ಟ ಪದ್ಧತಿ ವಿರುದ್ಧ ಹೋರಾಟ ಅಗತ್ಯ : ಯಲ್ಲಪ್ಪ ನಾಯಿಕೊಡಿ

ವಾರ್ತಾಭಾರತಿವಾರ್ತಾಭಾರತಿ14 Feb 2025 4:50 PM IST
share
ಕಲಬುರಗಿ | ಸಮಾಜದಲ್ಲಿನ ಅನಿಷ್ಟ ಪದ್ಧತಿ ವಿರುದ್ಧ ಹೋರಾಟ ಅಗತ್ಯ : ಯಲ್ಲಪ್ಪ ನಾಯಿಕೊಡಿ

ಕಲಬುರಗಿ : ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ ವೇದಿಕೆ ಸಾಮಾಜಿಕ ಚಳವಳಿಯನ್ನು ಉಂಟು ಮಾಡುತ್ತಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಯಲ್ಲಪ್ಪ ನಾಯಿಕೊಡಿ ಹೇಳಿದರು.

ಮಾನವ ಬಂಧುತ್ವ ವೇದಿಕೆ ವತಿಯುಂದ ನಗರದ ಜಿಲ್ಲಾ ಪತ್ರಕರ್ತರ ಸಾಂಸ್ಕೃತಿಕ ಭವನದಲ್ಲಿ ಶುಕ್ರವಾರ ನಡೆದ ಒಂದು ದಿನದ ವಿದ್ಯಾರ್ಥಿ ಯುವ ಜನರ ನಾಯಕತ್ವ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಪಾಲಿಕೆ ವತಿಯಿಂದ ಸ್ಮಶಾನಗಳ ಸ್ವಚ್ಛತೆಗೆ ಹೆಚ್ವಿನ ಗಮನ ಕೊಡಲಾಗುತ್ತಿದೆ. ಸಂಜೀವ ನಗರದಲ್ಲಿನ ಸ್ಮಶಾನಭೂಮಿಗೆ ಹೊಸ ಕಾಯಕಲ್ಪ ನೀಡಲಾಗುತ್ತಿದೆ. ಸಮಾಜದಲ್ಲಿನ ಅನಿಷ್ಟ ಪದ್ಧತಿ ಹೋಗಲಾಡಿಸಲು ಯುವಕರು ಮುಂದಾಗಬೇಕು ಎಂದು ಅವರು ತಿಳಿಸಿದರು.

ಮುಖ್ಯ ಅತಿಥಿಗಳಾಗಿದ್ದ ಮಹಾನಗರ ಪಾಲಿಕೆ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಜಿ. ಶೆಟಗಾರ, ಸಾಮಾಜಿಕ ಮುಖಂಡರಾದ ಶೌಕತ್ ಅಲಿ ಆಲೂರ ಮಾತನಾಡಿ, ಹೋರಾಟ ಮನೊಭಾವನೆ ಜೊತೆಗೆ ವಿದ್ಯಾರ್ಥಿಗಳು-ಯುವಕರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಸಮಯ ನಿರ್ವಹಣೆ ಮಾಡುವವರು ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ತಿಳಿಸಿದರು.

ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡು ಬರಬೇಕು. ವಿದ್ಯಾರ್ಥಿಗಳು ರಾಜಕೀಯ ಪ್ರವೇಶಿಸಿ ಕಲುಷಿತ ವ್ಯವಸ್ಥೆಯನ್ನು ಸರಿಪಡಿಸಬೇಕು ಎಂದು ಕರೆ ನೀಡಿದರು.

ಭೋವಿ ಸಮಾಜದ ಹಿರಿಯ ಮುಖಂಡ ಸಿದ್ರಾಮ ದಂಡಗುಲಕರ್, ಬಂಜಾರ ಸಮಾಜದ ಹಿರಿಯ ಮುಖಂಡ ಶಾಮರಾವ್ ಪವಾರ ವೇದಿಕೆಯಲ್ಲಿದ್ದರು.

ವಚನ ಸಾಹಿತ್ಯ- ಸಂವಿಧಾನದ ಅಧ್ಯಯನ ಅಗತ್ಯ :

ನಂತರ ನಡೆದ ಮೊದಲ ಗೋಷ್ಠಿಯಲ್ಲಿ ಸಂವಿಧಾನ ಮತ್ತು ವಿದ್ಯಾರ್ಥಿ - ಯುವಜನರ ಜವಾಬ್ದಾರಿ ಕುರಿತು ನಿವೃತ್ತ ಪ್ರಾಧ್ಯಾಪಕ ಡಾ.ಐ.ಎಸ್.ವಿದ್ಯಾಸಾಗರ ಮಾತನಾಡಿ, ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆಗಳ ಮೂಲಕ ಬದುಕು ಕಟ್ಟಿಕೊಳ್ಳಬೇಕು. ಆ ಮೂಲಕ ಸಮಾಜ, ದೇಶ ಕಟ್ಟುವ ಕೆಲಸ ಮಾಡಬೇಕು ಎಂದು ಹೇಳಿದರು.

ಜಾತಿ ವ್ಯವಸ್ಥೆ, ವರ್ಗ ಅಸಮಾನತೆ, ಲಿಂಗ ಅಸಮಾನತೆ ತೊಡೆದು ಹಾಕಿ ಸಮಾಜಕ್ಕೆ ಹೊಸ ದಿಕ್ಕು, ಭರವಸೆ ಮಾಡುವವರು ನಾಯಕರಾಗಲು ಸಾಧ್ಯ ಎಂದು ಹೇಳಿದರು. ದೇಶ, ಧರ್ಮ, ಲಿಂಗ, ಜಾತಿಯನ್ನು ಒಂದುಗೂಡಿಸಿದ ಸಂವಿಧಾನವೆಂಬ ಸರ್ವೋಚ್ಛ ಕಾನೂನು ಎಲ್ಲರಿಗೂ ಸಮಾನ ಹಕ್ಕು, ಸಮಾನ ಅವಕಾಶ, ಸಮಾನ ಸ್ವಾತಂತ್ರ್ಯ ಕಲ್ಪಿಸಿದೆ. ಹೀಗಾಗಿ ಸಂವಿಧಾನವನ್ನು ಪ್ರತಿಯೊಬ್ಬರೂ ಪಾಲನೆ ಮಾಡಬೇಕು ಎಂದರು.

ಮುಖ್ಯ ಅತಿಥಿಗಳಾಗಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೇಲ್ವಿಚಾರಕ ನೀಲಕಂಠ ಶಿಂಧೆ, ಸಾಮಾಜ ಕಲ್ಯಾಣ ಇಲಾಖೆ ಮೇಲ್ವಿಚಾರಕ ಸಂಜೂಕುಮಾರ್ ಯಳವಂತಗಿ, ಜಾಗತಿಕ ಲಿಂಗಾಯತ ಮಹಾಸಭಾದ ಶಾಂತಪ್ಪ ಪಾಟೀಲ ವೇದಿಕೆಯಲ್ಲಿ ಇದ್ದರು. ಬಂಜಾರ ಸಮಾಜದ ಮುಖಂಡ ಚಂದು ಜಾಧವ ಅಧ್ಯಕ್ಷತೆ ವಹಿಸಿದ್ದರು.

ಎರಡನೇ ಗೋಷ್ಠಿಯಲ್ಲಿ ವಚನ ಸಾಹಿತ್ಯ ಮತ್ತು ಇಂದಿನ ತಲ್ಲಣಗಳು ವಿಷಯ ಕುರಿತು ಪತ್ರಕರ್ತ ಹಾಗೂ ಲೇಖಕ ಡಾ.ಶಿವರಂಜನ ಸತ್ಯಂಪೇಟೆ ಮಾತನಾಡಿ, 12ನೇ ಶತಮಾನದ ವಚನ ಸಾಹಿತ್ಯ ಇಂದಿಗೂ ಪ್ರಸ್ತುತವಾಗಿದ್ದು, ಇಂದಿನ ಜಾಗತಿಕ ತಲ್ಲಣಗಳಿಗೆ ವಚನ ಸಾಹಿತ್ಯ ದಿವ್ಯ ಔಷಧಿಯಾಗಿದೆ. ಜಾತಿ ವ್ಯವಸ್ಥೆ, ನಿರುದ್ಯೋಗ, ರೈತರ ಆತ್ಮಹತ್ಯೆ, ಕೋಮುವಾದ, ಮೂಢನಂಬಿಕೆ, ಅಂಧಶ್ರದ್ಧೆ, ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯಗಳಿಗೆ ವಚನ ಸಾಹಿತ್ಯದಲ್ಲಿ ಸೂಕ್ತ ಪರಿಹಾರವಿದೆ ಎಂದು ಅವರು ತಿಳಿಸಿದರು.

ಬದುಕಿನ ಹಕ್ಕಿನ ಜೊತೆಗೆ ಮಾನವನ ಗೌರವ, ಘನತೆಯನ್ನು ಎತ್ತಿ ಹಿಡಿದ ವಚನ ಸಾಹಿತ್ಯ ಮತ್ತು ಭಾರತದ ಸಂವಿಧಾನದ ಆಶಯ ಎರಡೂ ಒಂದೇ ಆಗಿದೆ ಎಂದು ವಿವರಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೇಲ್ವಿಚಾರಕ ವಿನೋದಕುಮಾರ ಕಾಂಬ್ಳೆ ಉಪಸ್ಥಿತರಿದ್ದರು. ಅಪಜಲಪುರ ಅನುದಾನಿತ ಫ್ರೌಡ ಶಾಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಂಘದ ಅಧ್ಯಕ್ಷ ಎಸ್.ಎಂ.ಕರಿಕಲ್ ಅಧ್ಯಕ್ಷತೆ ವಹಿಸಿದ್ದರು.

ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ನಾಗೇಂದ್ರ ಜವಳಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯ ವಿಭಾಗೀಯ ಸಂಚಾಲಕ ಸುನಿಲ ಮಾರುತಿ ಮಾನಪಡೆ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ರೇಣುಕಾ ಸರಡಗಿ ನಿರೂಪಿಸಿದರು. ದಿನೇಶ ದೊಡ್ಡಮನಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X