Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಎಲಿಫಂಟಿಯಾಸಿಸ್ ತಡೆಗೆ...

ಕಲಬುರಗಿ | ಎಲಿಫಂಟಿಯಾಸಿಸ್ ತಡೆಗೆ ತ್ರಿವಳಿ ಮಾತ್ರೆ ಸೇವನೆ ಅವಶ್ಯ: ಡಾ.ಸಂಗೀತಾ

ವಾರ್ತಾಭಾರತಿವಾರ್ತಾಭಾರತಿ11 Feb 2025 7:09 PM IST
share
Photo of Program

ಕಲಬುರಗಿ : ಆರೋಗ್ಯ ಇಲಾಖೆಯ ಮೂಲಕ ಎಂಡಿಎ ಮತ್ತು ಐಡಿಎ ಕಾರ್ಯಕ್ರಮವು ಫೆ.10 ರಿಂದ 28ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಶಾಲೆಗಳು, ಕಾಲೇಜುಗಳು, ಅಂಗನವಾಡಿ ಕೇಂದ್ರಗಳಲ್ಲಿ ಈ ತ್ರಿವಳಿ ಮಾತ್ರೆ ಉಚಿತವಾಗಿ ವಿತರಣೆ ಮಾಡಲಾಗುತ್ತದೆ. ಸಾರ್ವಜನಿಕರು ಈ ಅಭಿಯಾನದಲ್ಲಿ ಭಾಗವಹಿಸಿ ಎಲಿಫಂಟಿಯಾಸಿಸ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಂಗೀತಾ ಪಾಟೀಲ್ ಮನವಿ ಮಾಡಿದರು.

ಆಳಂದ ಪಟ್ಟಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಎಂಡಿಎ ಮತ್ತು ಐಡಿಎ ಕಾರ್ಯಕ್ರಮದ ಉದ್ಘಾಟನೆ ಸರಕಾರಿ ಎನ್ಎಚ್ಪಿ ಶಾಲೆ, ಶರಣನಗರದಲ್ಲಿ ಮಾತ್ರೆ ನುಂಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಎಲಿಫಂಟಿಯಾಸಿಸ್ (ಫೈಲೇರಿಯಾಸಿಸ್) ಎಂಬುದು ಸೋಂಕಿತ ಮಹಿಳಾ ಕುಲೆಕ್ಸ್ ಕೊರಹು ದಂಶಿಸಿದಾಗ ಹರಡುವ ಒಂದು ಜೀವಾಣು ಸೋಂಕು. ಈ ರೋಗದ ಪರಿಣಾಮವಾಗಿ ಶರೀರದ ಕೆಲವೊಂದು ಭಾಗಗಳಲ್ಲಿ, ಮುಖ್ಯವಾಗಿ ಕಾಲುಗಳು ಮತ್ತು ಕೈಗಳಲ್ಲಿ ವಿಸ್ತಾರವಾದ ಉಬ್ಬರವಾಗುತ್ತದೆ. ಹೆಚ್ಚಿನ ಹಂತದಲ್ಲಿ ಈ ರೋಗ ಶಾರೀರಿಕ ಅಸ್ವಸ್ಥತೆಯನ್ನು ಉಂಟುಮಾಡಿ, ದಿನನಿತ್ಯದ ಚಟುವಟಿಕೆಗಳಲ್ಲಿ ತೊಂದರೆ ಉಂಟು ಮಾಡಬಹುದಾಗಿದೆ ಎಂದು ಹೇಳಿದರು.

ಇದನ್ನು ತಡೆಗಟ್ಟಲು ಈ ತ್ರಿವಳಿ ಮಾತ್ರೆ ಶರೀರದಲ್ಲಿ ರೋಗದ ಕಾರಕ ಜೀವಾಣುಗಳನ್ನು ನಾಶಪಡಿಸುವಲ್ಲಿ ಸಹಾಯ ಮಾಡುತ್ತದೆ. ಸೊಳ್ಳೆಗಳ ಜನನ ತಡೆಗಟ್ಟಲು ನೀರಿನ ಸ್ತೋತ್ರಗಳನ್ನು ಶುಚಿಗೊಳಿಸುವುದು, ಸೋಳ್ಳೆ ಪರೆದೆ ಬಳಸುವುದು ಮತ್ತು ಪ್ರತಿನಿತ್ಯ ಸ್ವಚ್ಛತೆಯನ್ನು ಕಾಪಾಡುವುದು ಅಗತ್ಯ,ಅಲ್ಲದೆ, ರೋಗದ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಆರೋಗ್ಯ ಕೇಂದ್ರಕ್ಕೆ ಹೋಗಿ ಚಿಕಿತ್ಸೆಗೆ ಒಳಗಾಗಬೇಕು ಎಂದು ಹೇಳಿದರು.

ಈ ರೋಗದ ನಿವಾರಣೆಗೆ ಆರೋಗ್ಯ ಸುರಕ್ಷಿತ ಜೀವನಕ್ಕಾಗಿ ಮುನ್ನೆಚ್ಚರಿಕೆ ಅಗತ್ಯವಿದೆ. ಮಾತ್ರೆಗಳ ಸೇವನೆಯ ನಂತರ ಕೆಲವರಿಗೆ ತಾತ್ಕಾಲಿಕವಾದ ಅಸ್ವಸ್ಥತೆ ಕಾಣಿಸಬಹುದು. ಆದರೆ ಇದು ಯಾವುದೇ ಗಂಭೀರ ಸಮಸ್ಯೆ ಹುಟ್ಟಿಸುವುದಿಲ್ಲ. ಇದನ್ನು ತಡೆಗಟ್ಟಲು ಲಭ್ಯವಿರುವ ಈ ಉಚಿತ ಮಾತ್ರೆಯನ್ನು ಪ್ರತಿಯೊಬ್ಬರೂ ಸೇವಿಸಬೇಕು. ಆರೋಗ್ಯವೇ ಸಂಪತ್ತು ಎಂಬ ಅರಿವಿನಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಇಲಾಖೆಯ ಯೋಜನೆಯ ಜಿಲ್ಲಾ ಮೇಲ್ವಿಚಾರಕ ಶಫಿ ಪಟೇಲ್, ತಾಲೂಕು ಮೇಲ್ವಿಚಾರಕ ಸಂಜೀವ್, ತಾಲೂಕು ಹಿರಿಯ ಅಧಿಕಾರಿ ಅಬ್ದುಲ್ ರೌಫ್, ಆರೋಗ್ಯ ನಿರೀಕ್ಷಣಾಧಿಕಾರಿ ಕೈಲಾಶ್, ಆರೋಗ್ಯ ಸುರಕ್ಷಣಾಧಿಕಾರಿ ಶಿವಮ್ಮ, ಆರೋಗ್ಯ ಸುರಕ್ಷಣಾಧಿಕಾರಿ ಇಂದಿರಾ ಹಾಗೂ ಶಾಲಾ ಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X