ಕಲಬುರಗಿ | ಗುಲ್ಬರ್ಗಾ ವಿವಿಯಲ್ಲಿ ಜಗಜ್ಯೋತಿ ಬಸವೇಶ್ವರರ ಜಯಂತಿ ಆಚರಣೆ

ಕಲಬುರಗಿ: ಇಲ್ಲಿನ ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದ ಮಹಾತ್ಮ ಗಾಂಧಿ ಸಭಾಂಗಣದಲ್ಲಿಂದು ಜಗಜ್ಯೋತಿ ಬಸವೇಶ್ವರ ಅವರ 892ನೇ ಜಯಂತ್ಯೋತ್ಸವ ಆಚರಣೆ ಮಾಡಲಾಯಿತು.
ಗುಲ್ಬರ್ಗಾ ವಿವಿಯ ಕುಲಪತಿ ಪ್ರೊ.ಗೂರು ಶ್ರೀರಾಮುಲು ಅವರು ಬಸವೇಶ್ವರ ಅವರ ಭಾವಚಿತ್ರಕ್ಕೆ ಪುಷ್ಪಸಮರ್ಪಿಸಿ ಮಾತನಾಡಿದರು.
ಇದೇ ವೇಳೆಯಲ್ಲಿ ಶರಣಬಸವೇಶ್ವರ ಕಲಾ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸುರೇಶಕುಮಾರ ನಂದಗಾಂವ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಬಸವ ಜಯಂತಿ ಕಾರ್ಯಕ್ರಮ ಸಂಚಾಲಕ ಪ್ರೊ.ಎಸ್.ಎಂ.ಹನಗೋಡಿಮಠ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, 1994 ರಲ್ಲಿ ಈ ಕೇಂದ್ರವನ್ನು ಆರಂಭಿಸಲಾಯಿತು. 50 ಲಕ್ಷ ದತ್ತಿಯಿಂದ ಈ ಕೇಂದ್ರ ಕೆಲಸ ಮಾಡುತ್ತಿದೆ. ವಿಚಾರ ಸಂಕಿರಣ, ಉಪನ್ಯಾಸ ಮಾಲಿಕೆ, ಮೂರು ಸಾವಿರಕ್ಕೂ ಅಧಿಕ ಪುಸ್ತಕಗಳಿದ್ದು, ಬಸವಾದಿ ಶರಣರ ಕುರಿತು ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಉಪಯೋಗವಾಗಿದೆ ಎಂದರು.
ಗುಲ್ಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಡಾ.ಪೀರಜಾದ ಫಹೀಮುದ್ದೀನ್, ವಿದ್ಯಾವಿಷಯಕ ಪರಿಷತ್ ಸದಸ್ಯ ಡಾ.ಸುರೇಶ ಜಂಗೆ, ಮೌಲ್ಯಮಾಪನ ಕುಲಸಚಿವ ಡಾ.ಎನ್.ಜಿ.ಕಣ್ಣೂರು, ವಿತ್ತಾಧಿಕಾರಿ ಜಯಾಂಬಿಕಾ, ಕುಲಸಚಿವ ಪ್ರೊ.ರಮೇಶ್ ಲಂಡನ್‌ಕರ್ ವೇದಿಕೆಯ ಮೇಲೆ ಉಪಸ್ಥಿತರಿದ್ದರು.
ಕಾರ್ಯಕ್ರದಲ್ಲಿ ಪ್ರೊ.ಎ.ಪಿ.ಹೊಸಮನಿ, ಪ್ರೊ.ಜಿ.ಎಂ.ವಿದ್ಯಾಸಾಗರ್, ಪ್ರೊ.ಕೆರೂರು, ಪ್ರೊ.ಗಾಯಕವಾಡ, ಪ್ರೊ.ಸಣ್ಣಕ್ಕಿ ಬಸವರಾಜ್, ಪ್ರೊ.ಶಿವಣ್ಣ ಹಾಗೂ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಅತಿಥಿ ಸಹಾಯಕ ಪ್ರಾಧ್ಯಾಪಕರು, ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ಶಿಕ್ಷಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು. ಸಂಗೀತ ವಿಭಾಗದ ಅತಿಥಿ ಸಹಾಯಕ ಪ್ರಾಧ್ಯಾಪಕ ವೃಂದ ಪ್ರಾರ್ಥಿಸಿದರು.







