ಕಲಬುರಗಿ | ಫೆ.15 ರಂದು ವಿಕಲಚೇತನರ ಉದ್ಯೋಗ ಮೇಳ

ಕಲಬುರಗಿ ; ಜಿಲ್ಲಾಡಳಿತ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಖರಣ ಇಲಾಖೆ ಇವುಗಳ ಸಹಯೋಗದೊಂದಿಗೆ ಯುಥ್ 4ಜಾಬ್ಸ್ (Youth 4jobs) ವತಿಯಿಂದ ಇದೇ ಫೆ.15ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿಯಲ್ಲಿ ವಿಕಲಚೇತನರ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಈ ಮೇಲ್ಕಂಡ ದಿನದಂದು ನಡೆಯುವ ಉದ್ಯೋಗ ಮೇಳದಲ್ಲಿ ಕಲಬುರಗಿ ಜಿಲ್ಲೆಯ ವಿಕಲಚೇತನರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಿದ್ದರಾಮ ಮೊಬೈಲ್ ಸಂಖ್ಯೆ 9591487839 ಹಾಗೂ ಮಹ್ಮದ ಸೈಫುಲ್ಲಾ ಮೊಬೈಲ್ ಸಂಖ್ಯೆ 8088457545 ಅಥವಾ saif@youth4jobs.org ವೆಬ್ ಸೈಟ್ ಅನ್ನು ಸಂಪರ್ಕಿಸಲು ಕೋರಲಾಗಿದೆ.
Next Story





