ಕಲಬುರಗಿ: ಆಗಸ್ಟ್ 5 ರಂದು ಉದ್ಯೋಗ ಮೇಳ

ಕಲಬುರಗಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಕಲಬುರಗಿ ಸರ್ಕಾರಿ ಐ.ಟಿ.ಐ. ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಆಗಸ್ಟ್ 5ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸ್ವತಂತ್ರ ಮೈಕ್ರೋ ಫೈನಾನ್ಸ್‍ದಲ್ಲಿ ಫೀಲ್ಡ್ ಆಫೀಸರ್ ಹುದ್ದೆಗೆ ಎಸ್.ಎಸ್.ಎಲ್.ಸಿ./ ಪಿಯುಸಿ/ ಐಟಿಐ/ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು. ಕಲೆಕ್ಷನ್ ಆಫೀಸರ್ ಹುದ್ದೆಗೆ ಪಿಯುಸಿ/ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.
ಶ್ರೀರಾಮ ಲೈಫ್ ಇನ್ಸೂರನ್ಸ್ ನಲ್ಲಿ ಯೂನಿಟ್ ಮ್ಯಾನೇಜರ್, ಡೆವಲಪ್‍ಮೆಂಟ್ ಮ್ಯಾನೇಜರ್, ಸೇಲ್ಸ್ ಆಫೀಸರ್ ಹುದ್ದೆಗಳಿಗೆ ಪಿಯುಸಿ, ಡಿಪ್ಲೋಮಾ, ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.
ಆಧ್ಯಾಶ್ರೀ ಗ್ರೂಪ್ ಸೋಲಾರ್ ಸಿಸ್ಟಮ್‍ದಲ್ಲಿ ಸೆಲ್ಸ್ ಮಾರ್ಕೇಟಿಂಗ್ ಮ್ಯಾನೇಜರ್ ಹುದ್ದೆಗೆ ಎಸ್.ಎಸ್.ಎಲ್.ಸಿ/ ಪಿಯುಸಿ/ ಐಟಿಐ/ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 25 ವರ್ಷದೊಳಗಿರಬೇಕು.
ಶ್ರೀಫಿನ್ ಕ್ರೆಡಿಟ್ ಫೈ.ಲೀ.ದಲ್ಲಿ ಕಸ್ಟಮರ್ ಸರ್ವಿಸ್ ಮ್ಯನೇಜರ್, ಎಸ್.ಆರ್. ಸಿ.ಎಸ್.ಎಮ್, ಬ್ರ್ಯಾಂಚ್ ಮ್ಯಾನೇಜರ್ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ/ ಪಿಯುಸಿ/ ಐಟಿಐ/ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು.
ಫ್ರಿಚಾರ್ಜ್ ಪೆಮೇಂಟ್ ಟೆಕ್ನಾಲಾಜಿಸ್‍ದಲ್ಲಿ ಫೀಲ್ಡ್ ಆಫೀಸರ್ ಹುದ್ದೆಗೆ ಪಿಯುಸಿ / ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.
ಎಸ್.ಡಿ.ಡಿ.ಓ.ಎಮ್. ಚೀಟ್ ಫಂಡ್ ಪ್ರೈ.ಲೀ.ದಲಿ ್ಲ ಟೀಮ್ ಲೀಡರ್ ಬಿಜನೆಸ್ ಡೆವಲಪ್‍ಮೇಂಟ್ ಆಫೀಸರ್ ಹುದ್ದೆಗೆ ಎಸ್.ಎಸ್.ಎಲ್.ಸಿ/ ಪಿಯುಸಿ/ಐಟಿಐ/ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.
ಪೂಜ್ಯ ಶ್ರೀ ವಿ.ಎಲ್. ಭಟ್ಟ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂಗ್ಲೀಷ ಮತ್ತು ಗಣಿತ ಶಿಕ್ಷಕರ ಹುದ್ದೆಗೆ ಎಮ್.ಎ. ಬಿ.ಎಡ್., ಎಮ್.ಎಸ್.ಸಿ. ಬಿ.ಎಡ್ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡೆಟಾ) ಭಾವಚಿತ್ರಗಳು ಹಾಗೂ ಆಧಾರ್‍ಕಾರ್ಡ್‍ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಉದ್ಯೋಗಮೇಳದಲ್ಲ್ಲಿ ಭಾಗವಹಿಸಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846, ಮೊಬೈಲ್ ಸಂಖ್ಯೆ 9620095270 ಗೆ ಸಂಪರ್ಕಿಸಲು ಕೋರಲಾಗಿದೆ.







