Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ರಿಟೇಲ್ ಆಪರೇಷನ್...

Kalaburagi | ರಿಟೇಲ್ ಆಪರೇಷನ್ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಹೆಚ್ಚಳ: ಡಾ. ಅಬ್ದುಲ್ ರೆಹಮಾನ್

ವಾರ್ತಾಭಾರತಿವಾರ್ತಾಭಾರತಿ25 Jun 2026 9:34 PM IST
share
Kalaburagi | ರಿಟೇಲ್ ಆಪರೇಷನ್ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಹೆಚ್ಚಳ: ಡಾ. ಅಬ್ದುಲ್ ರೆಹಮಾನ್
ಸರ್ಕಾರಿ ಮಹಾವಿದ್ಯಾಲಯದಲ್ಲಿ ಅಪ್ರೆಂಟಿಸ್‌ಶಿಪ್ ಸಂದರ್ಶನ ಕಾರ್ಯಕ್ರಮ

ಕಲಬುರಗಿ: ರಿಟೇಲ್ ಆಪರೇಷನ್ ಕ್ಷೇತ್ರವು ಇಂದಿನ ಉದ್ಯೋಗ ಮಾರುಕಟ್ಟೆಯಲ್ಲಿ ಅತ್ಯಂತ ಬೇಡಿಕೆಯ ವೃತ್ತಿಪರ ಕ್ಷೇತ್ರವಾಗಿದ್ದು, ಜಾಗತಿಕ ಮಟ್ಟದಲ್ಲಿಯೂ ಈ ಕ್ಷೇತ್ರಕ್ಕೆ ಉತ್ತಮ ಅವಕಾಶಗಳಿವೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಅಬ್ದುಲ್ ರೆಹಮಾನ್ ಎಂ. ಹೇಳಿದರು.

ನಗರದ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ ಬಿ.ಕಾಂ. ರಿಟೇಲ್ ಆಪರೇಷನ್ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಅಪ್ರೆಂಟಿಸ್‌ಶಿಪ್ ಸಂದರ್ಶನ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉದ್ಯೋಗಾಧಾರಿತ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯವಾಗಿದೆ. ಅಪ್ರೆಂಟಿಸ್‌ಶಿಪ್‌ಗಳಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಉದ್ಯಮ ಕ್ಷೇತ್ರದ ನೈಜ ಅನುಭವ ನೀಡುವುದರ ಜೊತೆಗೆ ಭವಿಷ್ಯದ ವೃತ್ತಿಜೀವನ ರೂಪಿಸಿಕೊಳ್ಳಲು ನೆರವಾಗುತ್ತವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ರಿಲಯನ್ಸ್ ಇಂಡಸ್ಟ್ರೀಸ್‌ನ ಮಾನವ ಸಂಪನ್ಮೂಲ ಅಧಿಕಾರಿ ಶ್ರೀಮತಿ ಫಾಲೇಶ್ವರಿ ಪಿ. ಬೆಳ್ಳಾರಿ, ಟಾಟಾ ಕ್ರೋಮಾದ ಮಾನವ ಸಂಪನ್ಮೂಲ ಅಧಿಕಾರಿ ಶರಣಪ್ಪ ಕಂದಗೂಳ ಹಾಗೂ ರಿಲಯನ್ಸ್ ಇಂಡಸ್ಟ್ರೀಸ್‌ನ ಸ್ಟೋರ್ ಮ್ಯಾನೇಜರ್ ಶಿವಕುಮಾರ್ ಅವರು ವಿದ್ಯಾರ್ಥಿಗಳಿಗೆ ಉದ್ಯೋಗ ಕ್ಷೇತ್ರದಲ್ಲಿನ ಅವಕಾಶಗಳು, ಅಗತ್ಯ ಕೌಶಲ್ಯಗಳು ಹಾಗೂ ಉದ್ಯಮದ ನಿರೀಕ್ಷೆಗಳ ಕುರಿತು ಮಾಹಿತಿ ನೀಡಿದರು.

ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ. ಸವಿತಾ ತಿವಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವೃತ್ತಿಪರ ಕೌಶಲ್ಯ ಅಭಿವೃದ್ಧಿಗೆ ಮಹಾವಿದ್ಯಾಲಯವು ನಿರಂತರವಾಗಿ ಉದ್ಯೋಗಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಪ್ರಾಸ್ತಾವಿಕವನ್ನು ಶಶಿಕಾಂತ ಕೊಳ್ಳಿ ನೆರವೇರಿಸಿದರು. ಡಾ. ಸಫಿಯಾ ಬೇಗಂ ಕಾರ್ಯಕ್ರಮ ನಿರೂಪಿಸಿದರೆ, ಡಾ. ಸುಜಾತ ದೊಡ್ಡಮನಿ ವಂದನಾರ್ಪಣೆ ಸಲ್ಲಿಸಿದರು.

ವೇದಿಕೆಯಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಡೀನ್ ಡಾ. ರಾಜಕುಮಾರ ಸಲಗರ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ. ಶ್ರೀಮಂತ ಹೊಳ್ಕರ್, ಐಕ್ಯೂಎಸಿ ಸಂಯೋಜಕ ಮಹೇಶ್, ಸಿಬ್ಬಂದಿ ಕಾರ್ಯದರ್ಶಿ ಡಾ. ರವೀಂದ್ರಕುಮಾರ ಭಂಡಾರಿ ಹಾಗೂ ಸಾಂಸ್ಕೃತಿಕ ಸಂಚಾಲಕ ಡಾ. ಬಲಭೀಮ ಸಾಂಗ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸುಜಾತ ದೊಡ್ಡಮನಿ, ಸಂಯೋಜಕ ಶಶಿಕಾಂತ ಕೊಳ್ಳಿ, ಪ್ರಾಧ್ಯಾಪಕರಾದ ಡಾ. ಮೀನಾಕ್ಷಿ ಎಂ. ಹುಗ್ಗಿ, ಡಾ. ಅರುಣಕುಮಾರ ಸಲಗರ, ಡಾ. ಸವಿತಾ ಪಾಟೀಲ, ಡಾ. ಸಫಿಯಾ ಬೇಗಂ, ಡಾ. ರವಿ ಬೌದ್ಧೆ ಸೇರಿದಂತೆ ಮಹಾವಿದ್ಯಾಲಯದ ಬೋಧಕ ವೃಂದ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X