Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಶರಣಬಸವ ವಿಶ್ವವಿದ್ಯಾಲಯದಲ್ಲಿ...

ಕಲಬುರಗಿ | ಶರಣಬಸವ ವಿಶ್ವವಿದ್ಯಾಲಯದಲ್ಲಿ ಉದ್ಯೋಗ ಆಧಾರಿತ ಕೋರ್ಸ್

ವಾರ್ತಾಭಾರತಿವಾರ್ತಾಭಾರತಿ24 May 2025 7:07 PM IST
share
ಕಲಬುರಗಿ | ಶರಣಬಸವ ವಿಶ್ವವಿದ್ಯಾಲಯದಲ್ಲಿ ಉದ್ಯೋಗ ಆಧಾರಿತ ಕೋರ್ಸ್

ಕಲಬುರಗಿ : ಶರಣಬಸವ ವಿಶ್ವವಿದ್ಯಾಲಯವು ತಂತ್ರಜ್ಞಾನದ ಉದಯೋನ್ಮುಖ ಕ್ಷೇತ್ರಗಳಲ್ಲಿ ಉದ್ಯೋಗ ಆಧಾರಿತ ಪದವಿಪೂರ್ವ ಕೋರ್ಸ್‍ನ ಮತ್ತೊಂದು ಹೊಸ ಮಾರ್ಗವನ್ನು ತೆರೆದಿದ್ದು, ಇಂಜಿನಿಯರಿಂಗ್‍ನಲ್ಲಿ ಪ್ರವೇಶ ಪಡೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ 2025-26 ಶೈಕ್ಷಣಿಕ ವರ್ಷದಿಂದ ಹೊಸ ಪದವಿಪೂರ್ವ ಮೂರು ವರ್ಷದ ವಿಜ್ಞಾನ ಪದವಿ (ಬಿ.ಎಸ್ಸಿ) ಮತ್ತು ನಾಲ್ಕು ವರ್ಷದ ಬಿ.ಎಸ್ಸಿ (Honors) ಪದವಿಯಲ್ಲಿ ವಿಶೇಷತೆಯಾಗಿ ತಮ್ಮ ಕನಸಿನ ಕೋರ್ಸ್ ಮುಂದುವರಿಸಲು ಎರಡನೇ ಅವಕಾಶವನ್ನು ಒದಗಿಸುತ್ತದೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದ 120 ವಿದ್ಯಾರ್ಥಿಗಳ ನೋಂದಣಿಯೊಂದಿಗೆ ಹೊಸ ಕೋರ್ಸ್ ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಅನಿಲಕುಮಾರ ಬಿಡವೆ ಮತ್ತು ವಿಜ್ಞಾನ ವಿಭಾಗದ ಡೀನ್ ಪ್ರೊ.ತ್ರಂಬಕ್ ಬಿರಾದಾರ್ ಶನಿವಾರ ನಗರದಲ್ಲಿ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶರಣಬಸವ ವಿಶ್ವ ವಿದ್ಯಾಲಯವು ಕೃತಕ ಬುದ್ಧಿಮತ್ತೆ, ಸೈಬರ್ ಸೆಕ್ಯುರಿಟಿ, ಡೇಟಾ ಸೈನ್ಸ್, ಮಲ್ಟಿಮೀಡಿಯಾ ಮತ್ತು ಆನಿಮೇಷನ್ ಟೆಕ್ನಾಲಜಿ, ಫ್ರೆನ್ಸಿಕ್ ಸೈನ್ಸಸ್, ಜಿಯಾಲಜಿ ಮತ್ತು ರಿಮೋಟ್ ಸೆನ್ಸಿಂಗ್ ಮುಂತಾದ ಉದಯೋನ್ಮುಖ ಕ್ಷೇತ್ರಗಳಲ್ಲಿ ವಿಶೇಷತೆಯೊಂದಿಗೆ ಬಿಎಸ್ಸಿ ಮತ್ತು ಬಿ. ಎಸ್ಸಿ (Honors) ಕೋಸ್ರ್ಗಳನ್ನು ನೀಡುವ ಪ್ರದೇಶದ ಮೊದಲ ಸಾಂಪ್ರದಾಯಿಕ ವಿಶ್ವವಿದ್ಯಾಲಯವಾಗಿದೆ.

ಹೊಸ ಕೋರ್ಸ್‍ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ತಮ್ಮ ಕೋರ್ಸ್ ಅವಧಿಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ಸೇರಿದಂತೆ ಬಿ.ಎಸ್ಸಿಯ ಪ್ರಧಾನ ವಿಷಯಗಳನ್ನು ಅಧ್ಯಯನ ಮಾಡಬೇಕಾಗುತ್ತದೆ ಎಂದು ಪ್ರೊ ಬಿಡವೆ ಮತ್ತು ಪ್ರೊ.ಬಿರಾದಾರ್ ತಿಳಿಸಿದ್ದಾರೆ.

ಬಿ.ಎಸ್ಸಿ (Honors) ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಲು ತಮ್ಮ ಕೊನೆಯ ವರ್ಷದ ಅಧ್ಯಯನದಲ್ಲಿ, ತಮ್ಮ ಆಯ್ಕೆಯ ವಿಶೇಷ ಕ್ಷೇತ್ರದಲ್ಲಿ, ಸಂಶೋಧನಾ ಕಾರ್ಯವನ್ನು ಕೈಗೊಳ್ಳುವ ಅವಕಾಶವನ್ನು ಹೊಂದಿರುತ್ತಾರೆ. ಹೆಚ್ಚುವರಿಯಾಗಿ, ಬಿ.ಎಸ್ಸಿ (Honors) ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳು ಎಂ.ಎಸ್ಸಿ ಸ್ನಾತಕೋತ್ತರ ಕೋರ್ಸ್‍ನಲ್ಲಿ ಎರಡು ವರ್ಷಗಳ ಬದಲು ಒಂದು ವರ್ಷದಲ್ಲಿ ತಮ್ಮ ಆಯ್ಕೆಯ ವಿಶೇಷ ಕ್ಷೇತ್ರದಲ್ಲಿ ಸ್ನಾತಕೋತ್ತರ ಕೋರ್ಸ್ ಮುಗಿಸುವ ಪ್ರಯೋಜನವನ್ನು ಹೊಂದಿರುತ್ತಾರೆ. ವಿಶ್ವವಿದ್ಯಾಲಯದಲ್ಲಿ, ಹಲವಾರು ಕಾರಣಗಳಿಂದ ಮತ್ತು ಸೀಟುಗಳ ಕೊರತೆಯಿಂದಾಗಿ ಇಂಜಿನಿಯರಿಂಗ್‍ ನಲ್ಲಿ ಪ್ರವೇಶ ಪಡೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಅನುಗುಣವಾಗಿ ಈ ಹೊಸ ಕೋರ್ಸ್‍ಗಳು ರೂಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೋರ್ಸ್‍ನಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳು ತಮ್ಮ ಪಠ್ಯಕ್ರಮದ ಭಾಗವಾಗಿ ಈ ಕೇಂದ್ರಗಳಲ್ಲಿನ ಪ್ರಯೋಗಾಲಯಗಳು ಮತ್ತು ಇತರ ಸೌಲಭ್ಯಗಳನ್ನು ಪಡೆಯಲು ಪ್ರತಿಷ್ಠಿತ ವಿಧಿವಿಜ್ಞಾನ ಪ್ರಯೋಗಾಲಯಗಳು, ವಿಧಿವಿಜ್ಞಾನ ವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಕೇಂದ್ರಗಳೊಂದಿಗೆ ತಿಳುವಳಿಕೆ ಪತ್ರವನ್ನು ಮಾಡಿಕೊಳ್ಳಲು ವಿಶ್ವವಿದ್ಯಾಲಯವು ಪ್ರಸ್ತಾಪಿಸಿದೆ ಎಂದು ತಿಳಿಸಲಾಗಿದೆ.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಅನಿಲಕುಮಾರ ಬಿಡವೆ, ಕುಲಸಚಿವ ಡಾ ಎಸ್ ಜಿ ಡೊಳ್ಳೇಗೌಡರ್, ಡೀನ್ ಡಾ ಲಕ್ಷ್ಮಿ ಪಾಟೀಲ್ ಮಾಕಾ, ಹಣಕಾಸು ಅಧಿಕಾರಿ ಪ್ರೊ. ಕಿರಣ್ ಮಾಕಾ, ವಿಜ್ಞಾನ ವಿಭಾಗದ ಡೀನ್ ಪ್ರೊ. ತ್ರಂಬಕ ಬಿರಾದಾರ್, ಚೇರ್‍ಪರ್ಸನ್ ಡಾ. ನಾಗಬಸವಣ್ಣ ಗುರಗೋಳ್ ಮತ್ತಿತರರು ಸೇರಿಕೊಂಡು, ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‍ಪರ್ಸನ್ ಮಾತೋಶ್ರೀ ಪೂಜ್ಯ ಡಾ.ದಾಕ್ಷಾಯಿಣಿ ಅವ್ವಾಜಿ, ಶರಣಬಸವೇಶ್ವರ ಸಂಸ್ಥಾನದ 9ನೇ ಮಹಾದಾಸೋಹ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿ ಸನ್ಮಾನಿಸಿದರು.

ಪೂಜ್ಯ ಅಪ್ಪಾಜಿ ಮತ್ತು ಮಾತೋಶ್ರೀ ಡಾ ಅವ್ವಾಜಿ ಅವರು ಈ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಎರಡು ಹೊಸ ಉದ್ಯೋಗ ಆಧಾರಿತ ಕೋರ್ಸ್‍ಗಳ ಸೇರ್ಪಡೆಗಾಗಿ ಮತ್ತು ಈ ಹೊಸ ಕೋರ್ಸ್‍ಗಳನ್ನು ಸೇರಿಸಲು ಶ್ರಮಿಸಿದ ವಿಶ್ವವಿದ್ಯಾಲಯದ ಅಧಿಕಾರಿಗಳನ್ನು ಆಶೀರ್ವದಿಸಿ ಅಭಿನಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X