Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಪತ್ರಕರ್ತರು ಸಮಾಜದ ಕಣ್ಣು...

ಕಲಬುರಗಿ | ಪತ್ರಕರ್ತರು ಸಮಾಜದ ಕಣ್ಣು ತೆರೆಸುವವರು : ಶಾಸಕ ಅಲ್ಲಮಪ್ರಭು ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ21 Sept 2025 7:12 PM IST
share
ಕಲಬುರಗಿ | ಪತ್ರಕರ್ತರು ಸಮಾಜದ ಕಣ್ಣು ತೆರೆಸುವವರು : ಶಾಸಕ ಅಲ್ಲಮಪ್ರಭು ಪಾಟೀಲ್‌
ಕಲ್ಯಾಣ ಕರ್ನಾಟಕ ಪ್ರಥಮ ಪತ್ರಕರ್ತರ ಸಮ್ಮೇಳನ

ಕಲಬುರಗಿ: ಪ್ರಜಾಪ್ರಭುತ್ವದ ನಾಲ್ಕು ಅಂಗಗಳಲ್ಲಿ ಪತ್ರಿಕಾ ಅಂಗ ಅತ್ಯಂತ ಪ್ರಮುಖವಾಗಿದ್ದು, ಜನಪ್ರತಿನಿಧಿಗಳು, ರಾಜಕಾರಣಿಗಳು ಹಾಗೂ ಅಧಿಕಾರಿಗಳ ಗಮನ ಸೆಳೆಯುವ ಮತ್ತು ಕಣ್ಣು ತೆರೆಸುವ ಕೆಲಸ ಪತ್ರಕರ್ತರು ಮಾಡುತ್ತಾರೆ ಎಂದು ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್‌ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಪ್ರಜಾ ಸುದ್ದಿ ಕನ್ನಡ ದಿನಪತ್ರಿಕೆಯ 15ನೇ ವರ್ಷದ ಸಂಭ್ರಮಾಚರಣೆ ಹಾಗೂ ಕಲ್ಯಾಣ ಕರ್ನಾಟಕ ಪ್ರಥಮ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರು ಸಮಾಜದ ರಕ್ಷಕರು, ನೇರವಾಗಿ ಹೇಳುವ ಛಾತಿ ಹಾಗೂ ಶಕ್ತಿ ಅವರಲ್ಲಿದೆ ಎಂದರು. ಸುದ್ದಿ ನೀಡಲು ಜೀವದ ಹಂಗು ತೊರೆದು ಪತ್ರಕರ್ತರು ಮಳೆ, ಬಿಸಿಲು, ಚಳಿ ಎನ್ನದೆ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

15 ವರ್ಷಗಳ ಕಾಲ ಕಷ್ಟಸಾಧ್ಯ ಪರಿಸ್ಥಿತಿಯಲ್ಲೂ ಪತ್ರಿಕೆ ನಡೆಸಿಕೊಂಡು ಬಂದಿರುವ ಸಂಪಾದಕ ಶರಣಬಸಪ್ಪ ಸೂಗೂರ ಅವರ ಕಾರ್ಯ ಶ್ಲಾಘನೀಯ ಎಂದು ಮೆಚ್ಚಿದರು. “ಪತ್ರಿಕೆಗಳಿಗೆ ಜಾಹೀರಾತು ಮೂಲಕ ಪ್ರತಿ ತಿಂಗಳು ಬೆಂಬಲ ನೀಡಬೇಕೆಂಬ ಬೇಡಿಕೆಯನ್ನು ಈಗಾಗಲೇ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಪತ್ರಕರ್ತರ ಧ್ವನಿಯಾಗಿ ಯಾವತ್ತೂ ನಿಲ್ಲುತ್ತೇನೆ” ಎಂದು ಭರವಸೆ ನೀಡಿದರು.

ಸಮ್ಮೇಳನದ ಅಧ್ಯಕ್ಷ ಡಾ. ಶಿವರಂಜನ ಸತ್ಯಂಪೇಟೆ ಮಾತನಾಡಿ, “ಇಂದಿನ ಪತ್ರಕರ್ತರಲ್ಲಿ ಅಧ್ಯಯನದ ಕೊರತೆ ಗಂಭೀರ ಸಂಗತಿ. ಬರವಣಿಗೆಯಲ್ಲಿ ವಿನಯ ಮುಖ್ಯವಾದುದು, ಆದರೆ ಈಗ ಅದು ಕಡಿಮೆಯಾಗುತ್ತಿದೆ. ಜೀವನದ ಅನುಭವದಿಂದ ಬರುವ ಬರವಣಿಗೆಯೇ ಶಾಶ್ವತ” ಎಂದು ಹೇಳಿದರು.

ಪತ್ರಿಕೆಗಳು ಸರಿಯಾಗಿ ಕಾರ್ಯನಿರ್ವಹಿಸದ ಕಾರಣವೇ ಸೋಷಿಯಲ್ ಮತ್ತು ಡಿಜಿಟಲ್ ಮಾಧ್ಯಮ ಬೆಳೆಯಲು ಕಾರಣವಾಯಿತು ಎಂದು ಅವರು ಮಾರ್ಮಿಕವಾಗಿ ಅಭಿಪ್ರಾಯಪಟ್ಟರು. ಪತ್ರಕರ್ತರು ಅಧ್ಯಯನಶೀಲರಾಗಬೇಕು, ಮೂಢನಂಬಿಕೆ ಹರಡುವ ಬದಲು ಜನರಲ್ಲಿ ವೈಚಾರಿಕತೆ ಬೆಳೆಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಮಾಡಬೇಕಾಗಿರುವುದು :

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯಲ್ಲಿ ಸ್ಥಳೀಯ ಪತ್ರಿಕೆಗಳು ಪ್ರಮುಖ ಪಾತ್ರ ವಹಿಸಬೇಕು. ಜನಪ್ರತಿನಿಧಿಗಳ ಗಮನ ಸೆಳೆದು ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸಬೇಕು. ಪತ್ರಕರ್ತರು ಸಾಹಿತ್ಯ ಹಾಗೂ ಪತ್ರಿಕೋದ್ಯಮದ ಹಲವು ಮಗ್ಗಲುಗಳನ್ನು ತಿಳಿಯುವ ಕುತೂಹಲ ಹೊಂದಬೇಕು. ಬಸವಾದಿ ಶರಣರು, ಸೂಫಿಗಳು, ತತ್ವಪದಕಾರರ ನೆಲವಾದ ಕಲ್ಯಾಣ ಕರ್ನಾಟಕದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಆಗಬೇಕಿರುವುದು :

ರಾಜ್ಯ ಮಟ್ಟದಲ್ಲಿ ಹಿರಿಯ ಪತ್ರಕರ್ತರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಬೇಕು. ಕೆಕೆಆರ್‌ಡಿಬಿಯಿಂದ ಸ್ಥಳೀಯ ಪತ್ರಿಕೆಗಳಿಗೆ ಅನುದಾನ ನೀಡಬೇಕು. ಪತ್ರಕರ್ತರು ಮತ್ತು ಅವರ ಕುಟುಂಬದ ಹಿತ ಕಾಪಾಡಲು ಸರ್ಕಾರ ವಿಶೇಷ ಯೋಜನೆಗಳನ್ನು ಘೋಷಿಸಬೇಕು. ಯುವ ಪತ್ರಕರ್ತರಿಗೆ ಓದು, ಬರಹ ಮತ್ತು ಭಾಷಾ ಬಳಕೆ ಕುರಿತ ತರಬೇತಿ ನೀಡಬೇಕು. ಕನ್ನಡ ಪತ್ರಿಕೆಗಳಲ್ಲಿ ಕನ್ನಡದ ಪದಗಳನ್ನು ಹೆಚ್ಚಾಗಿ ಬಳಸಬೇಕು ಎಂದು ಸಲಹೆ ನೀಡಿದರು.

“ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮದ ಮೇಲೆ ಸಾರ್ವಜನಿಕರು ವಿಶ್ವಾಸವಿಟ್ಟಿದ್ದಾರೆ. ಆ ವಿಶ್ವಾಸವನ್ನು ಉಳಿಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ” ಎಂದು ಅವರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ್ ತೇಗಲತಿಪ್ಪಿ, ಮಾಧ್ಯಮ ಸಂಶೋಧಕ ದಿಲೀಪ್ ನರಸಯ್ಯ (ಮೈಸೂರು), ಡಿಎಸ್ಎಸ್ ರಾಜ್ಯ ಸಂಚಾಲಕ ಮರಿಯಪ್ಪ ಹಳ್ಳಿ, ಸಂಪಾದಕರ ಸಂಘದ ಅಧ್ಯಕ್ಷ ಗುರುರಾಜ್ ಕುಲಕರ್ಣಿ, ಬಿ.ವಿ. ಚಕ್ರವರ್ತಿ, ಚಂದ್ರಶೇಖರ ಕವಲಗಾ, ರೇವಣಸಿದ್ದಪ್ಪ ಪಾಟೀಲ, ಸದಾನಂದ ಪೆರ್ಲಾ, ದೇವಿಂದ್ರಪ್ಪ ಅವಂಟಿ, ಬಸವರಾಜ ಚೀನಿವಾರ್, ಸೂರ್ಯಕಾಂತ ಜಮಾದಾರ್, ಅಜೀಜುಲ್ಲಾ ಸರ್ಮಸ್ತ್, ಬಸವರಾಜ ಪಾಸ್ವಾನ್, ರಾಜು ದೇಶಮುಖ್, ರಾಜಕುಮಾರ್ ಬೆಣ್ಣೂರ್, ಶಿವಪುತ್ರ ಹಾಗರಗಿ, ಸಿ.ಎಸ್. ಮಾಲಿಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಮ್ಮೇಳನದ ಅಂಗವಾಗಿ ಡಾ.ಶಿವರಂಜನ ಸತ್ಯಂಪೇಟೆಯವರ ಬದುಕು–ಬರಹ ಕುರಿತು ಹಿರಿಯ ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರು ಮಾತನಾಡಿದರು. ಪ್ರಭಾಕರ ಜೋಶಿ ಆಶಯ ನುಡಿಗಳನ್ನು ಹೇಳಿದರು. ಸುರೇಶ್ ಬಡಿಗೇರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಾಬುರಾವ್ ಕೋಬಾಳ ಪ್ರಾರ್ಥಿಸಿದರು. ಸಂಪಾದಕ ಶರಣಬಸಪ್ಪ ಸೂಗೂರ ಸ್ವಾಗತಿಸಿದರು. ರಾಜಕುಮಾರ್ ಮಾಳಗೆ ನಿರೂಪಣೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X