Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕಲ್ಯಾಣ ಕರ್ನಾಟಕದಲ್ಲಿ...

Kalaburagi | ಕಲ್ಯಾಣ ಕರ್ನಾಟಕದಲ್ಲಿ ಪ್ಯಾಸೆಂಜರ್ ರೈಲು ಸೇವೆ ಪುನರಾರಂಭಕ್ಕೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ12 Sept 2026 8:14 PM IST
share
Kalaburagi | ಕಲ್ಯಾಣ ಕರ್ನಾಟಕದಲ್ಲಿ ಪ್ಯಾಸೆಂಜರ್ ರೈಲು ಸೇವೆ ಪುನರಾರಂಭಕ್ಕೆ ಒತ್ತಾಯ

ಕಲಬುರಗಿ: ಕೋವಿಡ್-19 ಸಂದರ್ಭದಲ್ಲಿ ಸ್ಥಗಿತಗೊಂಡಿರುವ ಪ್ಯಾಸೆಂಜರ್ ರೈಲುಗಳನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪುನರಾರಂಭಿಸಿ, ಗ್ರಾಮೀಣ ಭಾಗದ ಪ್ರಮುಖ ರೈಲು ನಿಲ್ದಾಣಗಳಲ್ಲಿ ನಿಲುಗಡೆ ನೀಡಬೇಕು ಎಂದು ಅಖಿಲ ಕರ್ನಾಟಕ ದಲಿತ ಸೇನೆ ಒತ್ತಾಯಿಸಿದೆ.

ಮುಂಬೈಯಿಂದ ಆಗಮಿಸಿದ್ದ ಸೆಂಟ್ರಲ್ ರೈಲ್ವೆಯ ಜನರಲ್ ಮ್ಯಾನೇಜರ್ ರಾಜೀವ್ ಶ್ರೀವಾಸ್ತವ ಅವರನ್ನು ಗಾಣಗಾಪುರ ರೈಲು ನಿಲ್ದಾಣದಲ್ಲಿ ಅಖಿಲ ಕರ್ನಾಟಕ ದಲಿತ ಸೇನೆಯ ರಾಜ್ಯಾಧ್ಯಕ್ಷ ದತ್ತಾತ್ರೇಯ ಕುಡಕಿ ನೇತೃತ್ವದ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತು.

ನಿಯೋಗದ ಮನವಿಯಲ್ಲಿ, ಸೆಂಟ್ರಲ್ ರೈಲ್ವೆ ಈ ಭಾಗದ ರೈತರು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ವ್ಯಾಪಾರಸ್ಥರಿಗೆ ಪ್ರಮುಖ ಸಾರಿಗೆ ವ್ಯವಸ್ಥೆಯಾಗಿದ್ದು, ಕುಲಾಲಿ, ಗೌಡಗಾಂವ, ಹುಣಸಿಹಡಗಿಲ, ಸಾವಳಗಿ, ಬಬಲಾದ, ನಂದೂರ, ಮರತೂರ ಸೇರಿದಂತೆ ಕರ್ನಾಟಕ ಹಾಗೂ ಮಹಾರಾಷ್ಟ್ರದ ಹಲವು ಗ್ರಾಮಗಳ ಜನರಿಗೆ ಪ್ಯಾಸೆಂಜರ್ ರೈಲು ಸೇವೆ ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಲಾಗಿದೆ.

ಕೋವಿಡ್‌ಗೂ ಮುನ್ನ ರಾಯಚೂರು, ಸೋಲಾಪುರ, ವಿಜಯಪುರ, ಗುಂತಕಲ್ ಹಾಗೂ ಫಲಕ್ನಾಮ ಮಾರ್ಗಗಳಲ್ಲಿ ಸಂಚರಿಸುತ್ತಿದ್ದ ಪ್ಯಾಸೆಂಜರ್ ರೈಲುಗಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಪುನರಾರಂಭವಾಗಿಲ್ಲ. ಇದರಿಂದ ಬಡ ಪ್ರಯಾಣಿಕರು ಹೆಚ್ಚುವರಿ ವೆಚ್ಚ ಮತ್ತು ತೊಂದರೆ ಅನುಭವಿಸುತ್ತಿದ್ದಾರೆ ಎಂದು ನಿಯೋಗ ಗಮನ ಸೆಳೆಯಿತು.

ಸೋಲಾಪುರ–ಫಲಕ್ನಾಮ, ಫಲಕ್ನಾಮ–ಕಲಬುರಗಿ, ಸೋಲಾಪುರ–ಗುಂತಕಲ್, ಕಲಬುರಗಿ–ಸೋಲಾಪುರ ಹಾಗೂ ಹೈದರಾಬಾದ್–ಕಲಬುರಗಿ ಮಾರ್ಗಗಳ ಪ್ಯಾಸೆಂಜರ್ ರೈಲುಗಳನ್ನು ಮರುಪ್ರಾರಂಭಿಸಬೇಕು ಎಂದು ಆಗ್ರಹಿಸಲಾಯಿತು.

ಗಾಣಗಾಪುರ ರೈಲು ನಿಲ್ದಾಣದಲ್ಲಿ ಎಲ್‌ಟಿಟಿ–ವಿಶಾಖಪಟ್ಟಣ, ಹೈದರಾಬಾದ್–ಪುಣೆ, ಸೋಲಾಪುರ–ಹಾಸನ, ಸಾಯಿನಗರ ಶಿರಡಿ ಹಾಗೂ ಮುಂಬೈ–ಕೋನಾರ್ಕ್ ಎಕ್ಸ್‌ಪ್ರೆಸ್ ರೈಲುಗಳಿಗೆ ನಿಲುಗಡೆ ನೀಡುವಂತೆ ಗ್ರಾಮಸ್ಥರ ಪರವಾಗಿ ಮನವಿ ಸಲ್ಲಿಸಲಾಯಿತು.

ಮನವಿಗೆ ಸ್ಪಂದಿಸಿದ ಜನರಲ್ ಮ್ಯಾನೇಜರ್ ರಾಜೀವ್ ಶ್ರೀವಾಸ್ತವ, ಈ ಬೇಡಿಕೆಗಳನ್ನು ಮುಂದಿನ ಸಭೆಯಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇದೇ ವೇಳೆ, ಮುಂಬೈ–ಬೆಂಗಳೂರು ನಡುವೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ಹಾಗೂ ಕಲಬುರಗಿಯಿಂದ ದೆಹಲಿಗೆ ಹೊಸ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸುವಂತೆ ದತ್ತಾತ್ರೇಯ ಕುಡಕಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಡಾ. ಹಣಮಂತರಾವ ಹೊಳಕುಂದಿ, ವೀರಯ್ಯ ಸ್ವಾಮಿ, ದಸ್ತಯ್ಯ ಗುತ್ತೇದಾರ, ಪ್ರಕಾಶ ಹಡಪಾದ, ಶರಣು ನೀಲೂರು, ಶರೀಫ್ ಚೌದರಿ, ಮಹಿಬೂಬ್ ಶೇಖ್, ಮಹಿಬೂಬ್‌ಗೌಸ್, ಮಹೇಶ್ ಗುತ್ತೇದಾರ, ಬಾಬು ಸಿಂಗೆ, ಸಿದ್ಧಪ್ಪ ನಾಡಗಿರಿ, ರಮೇಶ್ ನಾಡಗಿರಿ, ಶರಣು ಮೇಲಿನಕೇರಿ, ಕೃಷ್ಣ ಕಾನಳ್ಳಿ, ರಾಜ್ಯ ಗೌರವಾಧ್ಯಕ್ಷ ಆನಂದರಾಯ ಗಾಯಕವಾಡ, ಆಳಂದ ತಾಲೂಕಾಧ್ಯಕ್ಷ ಭೋಜರಾಜ ಜುಭ್ರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X