ಕಲಬುರಗಿ | ಕಲ್ಯಾಣ ಕರ್ನಾಟಕ ಚಿಂತನ ಸಭೆ

ಕಲಬುರಗಿ : ನಗರದ ಖಾಸಗಿ ಸಭಾಂಗಣದಲ್ಲಿ ನಮ್ಮ ಕರ್ನಾಟಕ ಸೇನೆಯ ಕರಾಜ್ಯಾಧ್ಯಕ್ಷರಾದ ಬಸವರಾಜ್ ಎಂ.ಪಡಕೋಟೆ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಪ್ರಧಾನ ಸಂಚಾಲಕ ಭೀಮಣ್ಣ ಶಕಾಪುರ್ ಹಾಗೂ ಕಲಬುರಗಿ ಜಿಲ್ಲಾಧ್ಯಕ್ಷ ಸುಧೀಂದ್ರ ಎಂ ಈಜೇರಿ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಚಿಂತನ ಸಭೆ ಜರುಗಿತು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಬಸವರಾಜ್ ಎಂ.ಪಡಕೋಟೆ ಮಾತನಾಡಿ, ಸಂಘಟನೆ ಚಟುವಟಿಕೆಗಳನ್ನು ಹೆಚ್ಚಿನ ರೀತಿಯಲ್ಲಿ ಬಲಪಡಿಸಬೇಕು, ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಕರ ನೇಮಕಾತಿ ಮಾಡಬೇಕು, ಈ ಭಾಗದ ಜ್ವಲಂತ ಸಮಸ್ಯೆಗಳಾದ ಮಲ್ಲಾಬಾದ್ ನೀರಾವರಿ ಸಂಪೂರ್ಣ ಜಾರಿಯಾಗಬೇಕು, ಜೇವರ್ಗಿ ಫುಟ್ ಪಾರ್ಕ್ ಪ್ರಾರಂಭ ಮಾಡಬೇಕು, ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳು ನಿರ್ಮಾಣ ಮಾಡಬೇಕು, ಸರ್ಕಾರ ಕೂಡಲೇ ಈ ಎಲ್ಲಾ ಬೇಡಿಕೆಗಳನ್ನು ಶೀಘ್ರವೇ ಜಾರಿ ಮಾಡಬೇಕು ನಿರ್ಲಕ್ಷ್ಯ ಮಾಡಿದರೆ ನಮ್ಮ ಕರ್ನಾಟಕ ಸೇನೆ ಹೋರಾಟ ಮಾಡಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕದ ಬಿದರ್ ಜಿಲ್ಲಾಧ್ಯಕ್ಷ ಗಣೇಶ್ ಪಾಟೀಲ್, ಯಾದಗಿರಿ ಅಧ್ಯಕ್ಷ ವಿಶ್ವರಾಜ ದಿಮ್ಮಿ, ರಾಯಚೂರ ಅಧ್ಯಕ್ಷ ಕೊಂಡಪ್ಪ ಕೆ. ಸೇರಿದಂತೆ ತಾಲೂಕು ಪದಾಧಿಕಾರಿಗಳು, ಮಹಿಳಾ ಪದಾಧಿಕಾರಿಗಳು, ಸಂಘಟನೆಯ ಕಾರ್ಯಕರ್ತರು ಇದ್ದರು.





