Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸೆ.8ರಂದು ಕಮಲಾಪುರ...

Kalaburagi | ಸೆ.8ರಂದು ಕಮಲಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ವಾರ್ತಾಭಾರತಿವಾರ್ತಾಭಾರತಿ3 Sept 2026 5:14 PM IST
share
Kalaburagi | ಸೆ.8ರಂದು ಕಮಲಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಕಲಬುರಗಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2026–27ನೇ ಸಾಲಿನ ಕಮಲಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 8ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಕ್ರೀಡಾಕೂಟದಲ್ಲಿ ಪುರುಷರು ಮತ್ತು ಮಹಿಳೆಯರಿಗಾಗಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್‌ಬಾಲ್, ಖೋಖೋ, ಕಬಡ್ಡಿ, ಥ್ರೋಬಾಲ್ ಹಾಗೂ ಯೋಗಾಸನ ಸ್ಪರ್ಧೆಗಳು ನಡೆಯಲಿವೆ.

ಸ್ಪರ್ಧೆಯಲ್ಲಿ ಭಾಗವಹಿಸಲು ಕ್ರೀಡಾಪಟುಗಳು dasaracmcup.in ವೆಬ್‌ಸೈಟ್ ಮೂಲಕ ಕಡ್ಡಾಯವಾಗಿ ಆನ್‌ಲೈನ್ ನೋಂದಣಿ ಮಾಡಿಕೊಳ್ಳಬೇಕು. ಆನ್‌ಲೈನ್ ನೋಂದಣಿ ಮಾಡದವರಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕದ ನಿವಾಸಿಗಳಿಗೆ ಮಾತ್ರ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದ್ದು, ರಕ್ಷಣಾ ಹಾಗೂ ಅರೆ ರಕ್ಷಣಾ ಪಡೆಗಳ ಕ್ರೀಡಾಪಟುಗಳಿಗೆ ಅವಕಾಶ ಇರುವುದಿಲ್ಲ.

ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ತಂಡಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಅರ್ಹತೆ ಪಡೆಯಲಿವೆ.

ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕ್ರೀಡಾಕೂಟದ ಸದುಪಯೋಗ ಪಡೆದುಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ.

ಹೆಚ್ಚಿನ ಮಾಹಿತಿಗಾಗಿ ಪ್ರವೀಣ್ ಪುಣೆ (ಮೊ. 88847 74416) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Tags

KamalpurKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X