Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸಾಮಾಜಿಕ ಸತ್ಯ ಎತ್ತಿ...

Kalaburagi | ಸಾಮಾಜಿಕ ಸತ್ಯ ಎತ್ತಿ ಹಿಡಿದವರು ಕನಕದಾಸರು : ವಿಜಯಕುಮಾರ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ9 July 2026 6:58 PM IST
share
Kalaburagi | ಸಾಮಾಜಿಕ ಸತ್ಯ ಎತ್ತಿ ಹಿಡಿದವರು ಕನಕದಾಸರು : ವಿಜಯಕುಮಾರ ಪಾಟೀಲ್
ಕನಕ ದರ್ಶನ ಕಾರ್ಯಕ್ರಮ

ಕಲಬುರಗಿ: ಜಗತ್ತಿನ ಪ್ರತಿಯೊಬ್ಬ ಮನುಷ್ಯನ ಆತ್ಮ ಒಂದೇ ಎಂಬ ಪರಮ ಸತ್ಯವನ್ನು ಸಾರಿದ ಕನಕದಾಸರು, ಹುಟ್ಟಿನಿಂದ ಯಾರೂ ಶ್ರೇಷ್ಠರಲ್ಲ, ನಡತೆಯಿಂದ ಮಾತ್ರ ಶ್ರೇಷ್ಠರಾಗುತ್ತಾರೆ ಎಂಬ ಸಾಮಾಜಿಕ ಸಂದೇಶವನ್ನು ಜಗತ್ತಿಗೆ ನೀಡಿದ ಮಹಾನ್ ಸಂತ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ್ ತೇಗಲತಿಪ್ಪಿ ಹೇಳಿದರು.

ನಗರದ ಕನ್ನಡ ರತ್ನ ಡಿ ಕರಿಯರ್ ಅಕಾಡೆಮಿಯಲ್ಲಿ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕಲಾನಿಕೇತನ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ‘ಕನಕ ದರ್ಶನ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಕನಕದಾಸರ ಜೀವನ ಮೌಲ್ಯಗಳು ಹಾಗೂ ತತ್ವ-ಸಿದ್ಧಾಂತಗಳನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡಿದರೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ ಎಂದು ತಿಳಿಸಿದರು.

ವಿಜಯಪುರದ ಆಂಗ್ಲ ಮಾಧ್ಯಮ ಉಪನ್ಯಾಸಕ ಬಿ.ಎಸ್. ಪೂಜಾರಿ ಉಪನ್ಯಾಸ ನೀಡಿ, ಕನಕದಾಸರು ಸಮಾಜದಲ್ಲಿದ್ದ ಜಾತಿ ಹಾಗೂ ಜನ್ಮ ಆಧಾರಿತ ತಾರತಮ್ಯವನ್ನು ಕಟುವಾಗಿ ಖಂಡಿಸಿದ್ದರು. ಆತ್ಮಾವಲೋಕನ, ಅಂತರಂಗ ಶುದ್ಧಿ ಹಾಗೂ ಸತ್ಯಾನ್ವೇಷಣೆಯ ಸಂದೇಶಗಳು ಅವರ ಸಾಹಿತ್ಯದಲ್ಲಿ ಸ್ಪಷ್ಟವಾಗಿ ಕಾಣುತ್ತವೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ರತ್ನ ಡಿ ಕರಿಯರ್ ಅಕಾಡೆಮಿ ನಿರ್ದೇಶಕ ಡಾಕಪ್ಪ ಎಂ. ಮಾತನಾಡಿ, ತಮ್ಮ ಸಾಹಿತ್ಯದ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಸತ್ಯದ ಮಾರ್ಗವನ್ನು ತೋರಿದ ತತ್ವಜ್ಞಾನಿ ಕನಕದಾಸರ ಆದರ್ಶಗಳು ಇಂದಿನ ಪೀಳಿಗೆಗೆ ಸ್ಪೂರ್ತಿದಾಯಕವಾಗಿವೆ ಎಂದು ಹೇಳಿದರು.

ಸಮಾರಂಭದ ವೇದಿಕೆಯ ಮೇಲೆ ಶ್ರೀನಾಥ್ ಕಣ್ಣಿ,ಅತಿಥಿಗಳು ಹಾಗೂ ಮಾಜಿ ಸೈನಿಕರಾದ ಸಂತೋಷ್ ರಾಥೋಡ್,ಮಲ್ಲಿಕಾರ್ಜುನ್ ಪೂಜಾರಿ,ಸಾಹಿತಿ ಸಂತೋಷ ನಗನೂರ, ಸಾಹಿತಿ ಮತ್ತು ಪತ್ರಕರ್ತ ಬಸವರಾಜ ಶಿಣ್ಣೂರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X