Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಸೋಲಾಪುರ–ವಾಡಿ ರೈಲು...

Kalaburagi | ಸೋಲಾಪುರ–ವಾಡಿ ರೈಲು ಮಾರ್ಗದಲ್ಲಿ ಮೊದಲ ಬಾರಿಗೆ ‘ಕವಚ್’ ಸುರಕ್ಷತಾ ವ್ಯವಸ್ಥೆ ಜಾರಿ

ವಾರ್ತಾಭಾರತಿವಾರ್ತಾಭಾರತಿ9 July 2026 7:08 PM IST
share
Kalaburagi | ಸೋಲಾಪುರ–ವಾಡಿ ರೈಲು ಮಾರ್ಗದಲ್ಲಿ ಮೊದಲ ಬಾರಿಗೆ ‘ಕವಚ್’ ಸುರಕ್ಷತಾ ವ್ಯವಸ್ಥೆ ಜಾರಿ
149.476 ಕಿ.ಮೀ. ಮಾರ್ಗದಲ್ಲಿ ಸ್ವಯಂಚಾಲಿತ ರೈಲು ರಕ್ಷಣಾ ತಂತ್ರಜ್ಞಾನ ಅನುಷ್ಠಾನ

ಕಲಬುರಗಿ: ಭಾರತೀಯ ರೈಲ್ವೆಯ ಸುರಕ್ಷತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಧ್ಯ ರೈಲ್ವೆಯ ಸೋಲಾಪುರ ವಿಭಾಗವು ಸೋಲಾಪುರ–ವಾಡಿ ರೈಲು ಮಾರ್ಗದಲ್ಲಿ ಮೊದಲ ಬಾರಿಗೆ ‘ಸ್ಟ್ಯಾಂಡರ್ಡ್ ಕವಚ್’ (KAVACH) ಸ್ವಯಂಚಾಲಿತ ರೈಲು ರಕ್ಷಣಾ (ATP) ವ್ಯವಸ್ಥೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ.

149.476 ಕಿಲೋಮೀಟರ್ ಉದ್ದದ ಈ ಮಾರ್ಗದಲ್ಲಿ ಕವಚ್ ವ್ಯವಸ್ಥೆ ಕಾರ್ಯಾರಂಭಗೊಂಡಿದ್ದು, ರೈಲ್ವೆ ಸುರಕ್ಷತೆಯ ಆಧುನೀಕರಣದ ಮಹತ್ವದ ಮೈಲಿಗಲ್ಲಾಗಿದೆ ಎಂದು ಮಧ್ಯ ರೈಲ್ವೆ ಸೋಲಾಪುರ ವಿಭಾಗದ ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

‘ಆತ್ಮನಿರ್ಭರ ಭಾರತ್’ ಉಪಕ್ರಮದಡಿ ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಕವಚ್ ವ್ಯವಸ್ಥೆಯು ರೈಲುಗಳ ಮುಖಾಮುಖಿ ಹಾಗೂ ಹಿಂಬದಿಯ ಡಿಕ್ಕಿಗಳನ್ನು ತಡೆಗಟ್ಟುವ ಸಾಮರ್ಥ್ಯ ಹೊಂದಿದೆ. ಬ್ಲಾಕ್ ವಿಭಾಗದಲ್ಲಿ ರೈಲು ಅಸಹಜವಾಗಿ ನಿಂತರೆ ಲೋಕೋ ಪೈಲಟ್‌ಗೆ ಸ್ವಯಂಚಾಲಿತ ಎಸ್‌ಒಎಸ್ (SOS) ಎಚ್ಚರಿಕೆ ರವಾನಿಸುವುದರ ಜೊತೆಗೆ, ಅಗತ್ಯವಿದ್ದಲ್ಲಿ ಲೋಕೋ ಪೈಲಟ್‌ನಿಂದಲೂ ಎಸ್‌ಒಎಸ್ ಸಂದೇಶ ಕಳುಹಿಸುವ ವ್ಯವಸ್ಥೆ ಇದರಲ್ಲಿ ಅಳವಡಿಸಲಾಗಿದೆ.

ಕವಚ್ ವ್ಯವಸ್ಥೆಯು ಸಿಗ್ನಲಿಂಗ್ ಆಧಾರಿತವಲ್ಲದ ತಂತ್ರಜ್ಞಾನವಾಗಿದ್ದು, ಕವಚ್ ಅಳವಡಿಸಿರುವ ಲೋಕೋಮೋಟಿವ್ ಮತ್ತು ರೈಲ್ವೆ ಮೂಲಸೌಕರ್ಯದ ನಡುವೆ ನಿರಂತರ ಸಂವಹನದ ಮೂಲಕ ಕಾರ್ಯನಿರ್ವಹಿಸುತ್ತದೆ. ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್ (RFID) ತಂತ್ರಜ್ಞಾನ ಬಳಸಿ ರೈಲಿನ ನಿಖರ ಸ್ಥಾನವನ್ನು ಗುರುತಿಸಿ ಸುರಕ್ಷಿತ ಸಂಚಾರವನ್ನು ಖಚಿತಪಡಿಸುತ್ತದೆ.

ಯೋಜನೆಯಡಿ ಸೋಲಾಪುರ–ವಾಡಿ ಮಾರ್ಗದಲ್ಲಿ ಒಟ್ಟು 1,234 RFID ಟ್ಯಾಗ್‌ಗಳನ್ನು ಅಳವಡಿಸಿ ಪ್ರೋಗ್ರಾಮ್ ಮಾಡಲಾಗಿದೆ. ವ್ಯವಸ್ಥೆ ಜಾರಿಗೂ ಮುನ್ನ ಹೆಡ್-ಆನ್ ಡಿಕ್ಕಿ ತಡೆ, ಹಿಂಬದಿ ಡಿಕ್ಕಿ ತಡೆ ಹಾಗೂ ಎಸ್‌ಒಎಸ್ ಕಾರ್ಯವಿಧಾನ ಸೇರಿದಂತೆ ವಿವಿಧ ಕಾರ್ಯಾಚರಣಾ ಪರೀಕ್ಷೆಗಳನ್ನು ಸಂಶೋಧನಾ ವಿನ್ಯಾಸ ಮತ್ತು ಮಾನದಂಡಗಳ ಸಂಸ್ಥೆ (RDSO) ಮಾರ್ಗಸೂಚಿಯಂತೆ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ.

ಸೋಲಾಪುರ ವಿಭಾಗದ ಯೋಜನಾ ಘಟಕದ ಸಿಗ್ನಲ್ ಮತ್ತು ದೂರಸಂಪರ್ಕ ಇಲಾಖೆ ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು, ಸ್ಥಳೀಯ ತಂತ್ರಜ್ಞಾನ ಆಧಾರಿತ ಕವಚ್ ವ್ಯವಸ್ಥೆಯು ರೈಲು ಸಂಚಾರದ ಸುರಕ್ಷತೆ, ಕಾರ್ಯಾಚರಣೆಯ ವಿಶ್ವಾಸಾರ್ಹತೆ ಹಾಗೂ ಪ್ರಯಾಣಿಕರು ಮತ್ತು ಸರಕು ಸಾಗಣೆ ಸೇವೆಯ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags

RailwayNewsWadiSolapurKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X