Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ವಿಶ್ವ ಛಾಯಾಗ್ರಹಣ ದಿನದ...

ಕಲಬುರಗಿ | ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಸಾಧಕರಿಗೆ ಕಾಯಕ ರತ್ನ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ19 Aug 2025 9:29 PM IST
share
ಕಲಬುರಗಿ | ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಸಾಧಕರಿಗೆ ಕಾಯಕ ರತ್ನ ಪ್ರಶಸ್ತಿ ಪ್ರದಾನ

ಕಲಬುರಗಿ: ಪ್ರತಿಯೊಬ್ಬರ ಜೀವನದಲ್ಲಿ ಕಲೆ ಪ್ರಮುಖ ಪಾತ್ರ ವಹಿಸುತ್ತದೆ. ಆ ಕಲೆ ನಮ್ಮ ವಾಸ್ತವ ಬದುಕಿನ ಪ್ರತಿಬಿಂಬವಾಗಿರುತ್ತದೆ. ಚಿತ್ರಕಲೆ ನಾವು ಬದುಕುವ ರೀತಿ ನೀತಿ ಮತ್ತು ಪರಂಪರೆಯನ್ನು ಎತ್ತಿ ತೋರಿಸುತ್ತದೆ ಮತ್ತು ಕಲಾಭಿರುಚಿ ಹೊಂದಿದ ವ್ಯಕ್ತಿ ಸುಂದರ ಬದುಕಿನ ಕ್ಷಣಗಳನ್ನು ಅನಾವರಣಗೊಳಿಸುತ್ತಾನೆ. ಅದರಂತೆಯೇ ಬದುಕು ಕಟ್ಟಿಕೊಂಡು ಮಾದರಿಯಾಗುತ್ತಾನೆ. ಅಂಥ ಶಕ್ತಿ ಕಲೆಗಳಿಗೆ ಇದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ ಯಡ್ರಾಮಿ ಹೇಳಿದರು.

186ನೇ ವಿಶ್ವ ಛಾಯಾಗ್ರಹಣ ದಿನದಂಗವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಚಿತ್ರಕಲಾವಿದ ಖಾಜಾ ಪಟೇಲ್ ಸಾರಥ್ಯದ ಪಟೇಲ್ ಫೋಟೋ ಮತ್ತು ಆರ್ಟ್ ವರ್ಕ್ಸ್‌ ಭಂಕೂರ ಜಂಟಿ ಆಶ್ರಯದಲ್ಲಿ ನಗರದ ಕನ್ನಡ ಭವನದ ಕಲಾ ಸೌಧದಲ್ಲಿ ಮಂಗಳವಾರ ಏರ್ಪಡಿಸಿದ ಛಾಯಾಚಿತ್ರಗಳ ಪ್ರದರ್ಶನ ಹಾಗೂ ಕಾಯಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಸಮಾಜದಲ್ಲಿ ಕಲಾವಿದರು ಉಳಿದರೆ ಕಲೆ ಉಳಿಯುತ್ತದೆ. ಅಂಥ ಚಿತ್ರಕಲಾವಿದರು ಈ ಭಾಗದಲ್ಲಿ ಸಾಕಷ್ಟು ಜನರಿದ್ದರೂ ಸೂಕ್ತ ವೇದಿಕೆಗಳಿಲ್ಲದೆ ವಂಚಿತರಾಗಿದ್ದಾರೆ. ಇಂದು ಕಲೆ ಸಾಹಿತ್ಯ, ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಕಲಾವಿದರ ಪಾತ್ರ ಹಿರಿದಾಗಿದೆ. ಅವರಿಗೆ ಸೂಕ್ತ ವೇದಿಕೆ ಕೊಟ್ಟು ಪ್ರೋತ್ಸಾಹಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತು ತಮ್ಮ ರಚನಾತ್ಮಕ ಕಾರ್ಯಕ್ರಮಗಳು ಹೊಸ ದಿಕ್ಕಿನೆಡೆಗೆ ಕೊಂಡೊಯ್ಯಲಾಗುತ್ತಿದೆ ಎಂದರು.

ವಿಶ್ವಖ್ಯಾತಿಯ ಚಿತ್ರಕಲಾವಿದ ಮಹ್ಮದ್ ಅಯಾಜೋದ್ದೀನ್ ಪಟೇಲ್, ಸಂಘಟಕ ಖಾಜಾ ಪಟೇಲ್ ಕಲ್ಲಬೇನೂರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಲಾ ಸೌಧ ಸಂಚಾಲಕ ಡಾ.ರೆಹಮಾನ್ ಪಟೇಲ್, ಜಿಲ್ಲಾ ಕಸಾಪ ಕಾರ್ಯದರ್ಶಿ ಶಿವರಾಜ ಅಂಡಗಿ, ಸಹ ಕಾರ್ಯದರ್ಶಿ ರಾಜೇಂದ್ರ ಮಾಡಬೂಳ ವೇದಿಕೆ ಮೇಲಿದ್ದರು.

ವಿವಿಧ ಕ್ಷೇತ್ರಗಳ ಪ್ರಮುಖರಾದ ನೀಲಕಂಠ ಮಾದುಗೋಳಕರ್, ವೀರಶೆಟ್ಟಿ ಪಾಟೀಲ, ಸೂರಜ್ ಪುರಾಣಿಕ್, ಅವಿನಾಶ ದೊಡ್ಮನಿ, ಚಂದ್ರಕಾಂತ, ಬಾಲರಾಜ ಮಾಚನೂರ, ಮಹ್ಮದ್ ಮೊಹಿಯೋದ್ದೀನ್, ಅಲಿಮೋದ್ದಿನ್ ಪಟೇಲ್, ಶಿವಕುಮಾರ ಕುಸಾಳೆ, ಅಮರೇಶ ಇಟಗಿಕರ್ ಅವರನ್ನು ಕಾಯಕ ರತ್ನ ಪ್ರಶಸ್ತಿ ನೀಡಿ ಸತ್ಕರಿಸಲಾಯಿತು.

ಪತ್ರಿಕಾ ಛಾಯಾಗ್ರಾಹಕರಾದ ತಾಜುದ್ದೀನ್ ಆಜಾದ್, ಆನಂದ ಸಿಂಗೆ, ರಾಜು ಕೋಷ್ಟಿ, ಸುನೀಲ್ ಭಗತ್ ಅವರನ್ನು ವಿಶೇಷವಾಗಿ ಸತ್ಕರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X