ಕಲಬುರಗಿ | ಸೋಮಣ್ಣ ಬೇವಿನಮರದ ಅವರಿಗೆ ಕಾಯಕ ರತ್ನ ಪ್ರಶಸ್ತಿ ಪ್ರದಾನ

ಕಲಬುರಗಿ : ಗಡಿ ಸಮಸ್ಯೆಗಳಿಗೆ ಸ್ಪಂದಿಸುವ ಗುಣ ಹೊಂದಿರುವ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ಅವರಿಗೆ ರವಿವಾರ ನಗರದ ಸುಲಫಲ ಮಠದಲ್ಲಿ ನಡೆದ ಸಮಾರಂಭದಲ್ಲಿ ಕಾಯಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ನಂತರ ಮಾತನಾಡಿದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರು, ಕಲ್ಯಾಣ ಕರ್ನಾಟಕ ಭಾಗದ ಗಡಿ ಪ್ರದೇಶಗಳ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ ಅವರು, ಸಮಾಜದಲ್ಲಿ ಸಾಮರಸ್ಯ ಮೂಡಿಸುತ್ತಿರುವ ಸುಲಫಲ ಮಠವು ತಮ್ಮ ಮಠದ ವತಿಯಿಂದ ಸಾಂಸ್ಕೃತಿಕವಾಗಿ ವಿಶೇಷ ಕೊಡುಗೆ ನಿರಂತರವಾಗಿ ನೀಡುತ್ತಾ ಬರುತ್ತಿದೆ. ನನ್ನ ವ್ಯಾಪ್ತಿಯಲ್ಲಿ ಸಾಧ್ಯ ಆದಷ್ಟು ಮಟ್ಟಿಗೆ ಅಭಿವೃದ್ಧಿ ಕಾರ್ಯ ಮಾಡುತ್ತೇನೆ ಎಂದು ಹೇಳಿದರು.
ಸಾರಂಗಮಠದ ಜಗದ್ಗುರು ಡಾ.ಸಾರಂಗಧರ ದೇಸಿಕೇಂದ್ರ ಮಹಾಸ್ವಾಮೀಜಿ, ನೆಲೋಗಿ ವಿರಕ್ತ ಮಠದ ದ್ಧಲಿಂಗ ಮಹಾಸ್ವಾಮೀಜಿ, ಶಾಸಕ ಅಲ್ಲಮಪ್ರಭು ಪಾಟೀಲ್, ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಸರಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ರಾಜು ಲೇಂಗಟಿ, ಹಾಗರಗುಂಡಗಿ ಮಠದ ಶ್ರೀ ಶಿವಾನಂದ ಮಹಾಸ್ವಾಮೀಜಿ ಸೇರಿದಂತೆ ಅನೇಕ ಗಣ್ಯರು ಹಾಜರಿದ್ದರು.





