Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕೆಬಿಎನ್ ಗೋಲ್ಡ್ ಕಪ್...

Kalaburagi | ಕೆಬಿಎನ್ ಗೋಲ್ಡ್ ಕಪ್ ಫುಟ್ಬಾಲ್ ಟೂರ್ನಿಗೆ ರಾಷ್ಟ್ರೀಯ ಮಟ್ಟದ ಮನ್ನಣೆ: ಡಾ.ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ

ಕೆಬಿಎನ್ ಗೋಲ್ಡ್ ಕಪ್ ಫುಟ್ಬಾಲ್: ಬೆಂಗಳೂರು ಮಾತೃ ಪ್ರತಿಷ್ಠಾನ ತಂಡಕ್ಕೆ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ7 Nov 2026 5:15 PM IST
share
Kalaburagi | ಕೆಬಿಎನ್ ಗೋಲ್ಡ್ ಕಪ್ ಫುಟ್ಬಾಲ್ ಟೂರ್ನಿಗೆ ರಾಷ್ಟ್ರೀಯ ಮಟ್ಟದ ಮನ್ನಣೆ: ಡಾ.ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ

ಕಲಬುರಗಿ : ದಿವಂಗತ ಹಜರತ್ ಡಾ.ಸೈಯದ್ ಶಾ ಗೆಸು ದರಾಜ್ ಖುಸ್ರೋ ಹುಸೇನಿ ಅವರು ಕ್ರೀಡಾ ಕ್ಷೇತ್ರದಲ್ಲಿ ಹೊಂದಿದ್ದ ದೂರದೃಷ್ಟಿ ಹಾಗೂ ಪರಿಶ್ರಮದ ಫಲವಾಗಿ ಕೆಬಿಎನ್ ಹೌಸ್ ಆಫ್ ಸ್ಪೋರ್ಟ್ಸ್ ಆಯೋಜಿಸುತ್ತಿರುವ ಕ್ರೀಡಾಕೂಟಗಳು ಇಂದು ರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಗಳಿಸಿವೆ ಎಂದು ಖ್ವಾಜಾ ಎಜುಕೇಶನ್ ಸೊಸೈಟಿ ಅಧ್ಯಕ್ಷ ಹಾಗೂ ಕೆಬಿಎನ್ ವಿಶ್ವವಿದ್ಯಾಲಯದ ಕುಲಪತಿ ಡಾ. ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ ಹೇಳಿದರು.

ನಗರದಲ್ಲಿ ನಡೆದ ಕೆಬಿಎನ್ ಗೋಲ್ಡ್ ಕಪ್ ಫುಟ್ಬಾಲ್ ಟೂರ್ನಮೆಂಟ್‌ನ ಫೈನಲ್ ಪಂದ್ಯದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, 2012ರಲ್ಲಿ ತಮ್ಮ ತಂದೆಯವರ ಆಶಯದಂತೆ ಈ ಟೂರ್ನಮೆಂಟ್ ಆರಂಭಿಸಲಾಗಿತ್ತು. ವಿವಿಧ ರಾಜ್ಯಗಳ ಯುವ ಆಟಗಾರರು, ತಂಡಗಳು ಹಾಗೂ ಫುಟ್ಬಾಲ್ ಅಕಾಡೆಮಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ವೇದಿಕೆ ಕಲ್ಪಿಸುವುದು ಇದರ ಉದ್ದೇಶವಾಗಿತ್ತು. ನಿರಂತರ ಪರಿಶ್ರಮ ಮತ್ತು ಯೋಜಿತ ಪ್ರಯತ್ನಗಳ ಫಲವಾಗಿ ಟೂರ್ನಮೆಂಟ್ ರಾಷ್ಟ್ರೀಯ ಮಟ್ಟದ ಮನ್ನಣೆ ಗಳಿಸಿದೆ ಎಂದರು.

ಕ್ರೀಡೆಯು ದೈಹಿಕ ಮತ್ತು ಮಾನಸಿಕ ಸದೃಢತೆಯ ಜತೆಗೆ ಆತ್ಮವಿಶ್ವಾಸ, ಪರಿಶ್ರಮ, ಶಿಸ್ತು ಹಾಗೂ ಪರಸ್ಪರ ಗೌರವದ ಮನೋಭಾವವನ್ನು ಬೆಳೆಸುತ್ತದೆ. ಗೆಲುವಿನ ಉತ್ಸಾಹದಷ್ಟೇ ಎದುರಾಳಿ ತಂಡದ ಆಟಗಾರರನ್ನು ಗೌರವಿಸುವ ಕ್ರೀಡಾಸ್ಫೂರ್ತಿಯೂ ಮುಖ್ಯ. ಉತ್ತಮ ಪ್ರದರ್ಶನ ನೀಡುವ ಆಟಗಾರರಿಂದ ಕಲಿಯುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಫೈನಲ್‌ನಲ್ಲಿ ವಿಜೇತವಾದ ಬೆಂಗಳೂರು ಮಾತೃ ಪ್ರತಿಷ್ಠಾನ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಅವರು, ರನ್ನರ್ ಅಪ್ ಸ್ಥಾನ ಪಡೆದ ಗೋವಾದ ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ತಂಡದ ಪ್ರದರ್ಶನವನ್ನೂ ಶ್ಲಾಘಿಸಿದರು. ಕರ್ನಾಟಕ ರಾಜ್ಯ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಎನ್.ಎ. ಹ್ಯಾರಿಸ್, ಕಾರ್ಯದರ್ಶಿ, ರೆಫರಿಗಳು, ಅಧಿಕಾರಿಗಳು, ತರಬೇತುದಾರರು ಹಾಗೂ ತಂಡಗಳ ವ್ಯವಸ್ಥಾಪಕರಿಗೆ ಕೃತಜ್ಞತೆ ಸಲ್ಲಿಸಿದರು. ಎಲ್ಲ ತಂಡಗಳು ವಯೋಮಿತಿ ಸೇರಿದಂತೆ ಕ್ರೀಡಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.

ಖ್ವಾಜಾ ಎಜುಕೇಶನ್ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಪ್ರೊ. ಎ.ಎಂ. ಪಠಾಣ್ ಮಾತನಾಡಿ, ದಿವಂಗತ ಸಜ್ಜಾದಾ ನಶೀನ್ ಅವರ ಕ್ರೀಡಾ ಕ್ಷೇತ್ರದ ದೂರದೃಷ್ಟಿಯನ್ನು ಸ್ಮರಿಸಿದರು. ಕೆಬಿಎನ್ ವಿವಿಯ ಪ್ರೊ-ವೈಸ್ ಚಾನ್ಸಲರ್ ಪ್ರೊ. ಅಶ್ಫಾಕ್ ಅಹ್ಮದ್ ಸ್ವಾಗತಿಸಿದರು. ಕುಲಸಚಿವ ಮೀರ ವಿಲಾಯತ ಅಲಿ ವಂದಿಸಿದರು.

ಹಜರತ್ ಕ್ಯಾಂಪಸ್ ನಿರ್ದೇಶಕ ಡಾ. ಸೈಯದ್ ಮುಸ್ತಫಾ ಅಲ್ ಹುಸೇನಿ, ಕೆಇಎಸ್ ಪ್ರಧಾನ ಕಾರ್ಯದರ್ಶಿ ಬೆನ್ನಿ ಕೊರಿಯಾಕೋಸ್, ಡಾ. ಫಿರೋಜ್, ಐಕ್ಯೂಎಸಿ ನಿರ್ದೇಶಕ ಡಾ. ಅಬ್ದುಲ್ ಬಶೀರ್, ಹಬೀಬ್ ಮೌಜಂ, ಸೈಯದ್ ಮಜರ್ ಹುಸೇನ್, ಮೌಲ್ವಿ ಅಬ್ದುಲ್ ವಾಹಿದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Football TournamentKBNKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X