Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ರದ್ದೇವಾಡಗಿಯಲ್ಲಿ ‘ಖೇತ್...

Kalaburagi | ರದ್ದೇವಾಡಗಿಯಲ್ಲಿ ‘ಖೇತ್ ಬಚಾವೋ’ ಅಭಿಯಾನಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ23 Oct 2026 5:55 PM IST
share
Kalaburagi | ರದ್ದೇವಾಡಗಿಯಲ್ಲಿ ‘ಖೇತ್ ಬಚಾವೋ’ ಅಭಿಯಾನಕ್ಕೆ ಚಾಲನೆ

ಕಲಬುರಗಿ: ರೈತರಲ್ಲಿ ಬೆಳೆ ಸಂರಕ್ಷಣೆ, ವೈಜ್ಞಾನಿಕ ಕೃಷಿ ಪದ್ಧತಿಗಳು ಹಾಗೂ ಸುಸ್ಥಿರ ಕೃಷಿಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿರುವ ರಾಷ್ಟ್ರವ್ಯಾಪಿ ‘ಖೇತ್ ಬಚಾವೋ’ (ಕೃಷಿ ಭೂಮಿ ಉಳಿಸಿ) ಅಭಿಯಾನಕ್ಕೆ ಜೇವರ್ಗಿ ತಾಲೂಕಿನ ರದ್ದೇವಾಡಗಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಚಾಲನೆ ನೀಡಲಾಯಿತು.

ರದ್ದೇವಾಡಗಿ ಐಸಿಎಆರ್‌-ಕೃಷಿ ವಿಜ್ಞಾನ ಕೇಂದ್ರ ಕಲಬುರಗಿ-2 ಹಾಗೂ ಜೇವರ್ಗಿ ಕೃಷಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ಈ ಅಭಿಯಾನವು ಅಕ್ಟೋಬರ್ 22ರಿಂದ ನವೆಂಬರ್ 30ರವರೆಗೆ ನಡೆಯಲಿದೆ.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಪಿ. ವಾಸುದೇವ ನಾಯ್ಕ್, ಕೃಷಿ ಭೂಮಿಯ ಫಲವತ್ತತೆಯನ್ನು ಕಾಪಾಡಿಕೊಳ್ಳಲು ರಾಸಾಯನಿಕ ಗೊಬ್ಬರಗಳನ್ನು ಮಿತವಾಗಿ, ಸಮತೋಲಿತವಾಗಿ ಹಾಗೂ ವಿವೇಚನೆಯಿಂದ ಬಳಸುವುದು ಅತ್ಯಗತ್ಯ ಎಂದು ತಿಳಿಸಿದರು.

ಬೆಳೆ ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡುವುದರ ಜೊತೆಗೆ ಮಣ್ಣಿನ ಆರೋಗ್ಯವನ್ನು ಕಾಪಾಡಲು ಸಮಗ್ರ ಪೋಷಕಾಂಶ ನಿರ್ವಹಣೆ, ಸಮಗ್ರ ಕೀಟ ನಿರ್ವಹಣೆ, ಜೈವಿಕ ಗೊಬ್ಬರಗಳ ಬಳಕೆ ಹಾಗೂ ಜೈವಿಕ ಕೀಟ ನಿಯಂತ್ರಣ ಕ್ರಮಗಳಿಗೆ ರೈತರು ಹೆಚ್ಚಿನ ಆದ್ಯತೆ ನೀಡಬೇಕು. ಇಂತಹ ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದರಿಂದ ಕೃಷಿಯನ್ನು ಹೆಚ್ಚು ಲಾಭದಾಯಕ ಹಾಗೂ ಸುಸ್ಥಿರವಾಗಿಸಬಹುದು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ ಫರ್ಜಾನ ಎಂ. ಕೋರಬು ಅವರು, ಹವಾಮಾನ ವೈಪರೀತ್ಯದ ಸಂದರ್ಭದಲ್ಲಿ ಬೆಳೆಗಳನ್ನು ಸಂರಕ್ಷಿಸುವ ವಿಧಾನಗಳು, ಮಣ್ಣಿನ ಆರೋಗ್ಯದ ಮಹತ್ವ, ನೀರಿನ ಸಮರ್ಪಕ ಬಳಕೆ ಹಾಗೂ ಆಧುನಿಕ ವೈಜ್ಞಾನಿಕ ಕೃಷಿ ತಂತ್ರಜ್ಞಾನಗಳ ಅಳವಡಿಕೆ ಕುರಿತು ವಿವರಿಸಿದರು. ಬದಲಾಗುತ್ತಿರುವ ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಸುಸ್ಥಿರ ಕೃಷಿ ಉತ್ಪಾದನೆ ಸಾಧಿಸಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ 40ಕ್ಕೂ ಹೆಚ್ಚು ರೈತರು ಭಾಗವಹಿಸಿ ಕೃಷಿ ತಂತ್ರಜ್ಞಾನಗಳ ಕುರಿತು ಮಾಹಿತಿ ಪಡೆದುಕೊಂಡರು. ರೈತರಲ್ಲಿ ಮಣ್ಣಿನ ಸಂರಕ್ಷಣೆ ಹಾಗೂ ಪರಿಸರಸ್ನೇಹಿ ಕೃಷಿ ಪದ್ಧತಿಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಈ ಅಭಿಯಾನ ಮಹತ್ವದ ಪಾತ್ರ ವಹಿಸಲಿದೆ ಎಂದು ತಿಳಿಸಲಾಯಿತು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X