Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕೆಕೆಆರ್‌ಟಿಸಿ ಕೇಂದ್ರ...

Kalaburagi | ಕೆಕೆಆರ್‌ಟಿಸಿ ಕೇಂದ್ರ ಕಚೇರಿಗೆ ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ13 Aug 2026 9:09 PM IST
share
Kalaburagi | ಕೆಕೆಆರ್‌ಟಿಸಿ ಕೇಂದ್ರ ಕಚೇರಿಗೆ ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ ಭೇಟಿ

ಕಲಬುರಗಿ: ಕರ್ನಾಟಕ ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿಯ ಅಧ್ಯಕ್ಷ ಅತುಲ್ ಕುಮಾರ್ ತಿವಾರಿ ನೇತೃತ್ವದ ತಂಡ ಗುರುವಾರ ಕಲಬುರಗಿ ನಗರದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆಕೆಆರ್‌ಟಿಸಿ) ಕೇಂದ್ರ ಕಚೇರಿ, ವಿವಿಧ ಘಟಕಗಳು, ಕೇಂದ್ರ ಬಸ್ ನಿಲ್ದಾಣ ಹಾಗೂ ವಿಭಾಗೀಯ ಕಾರ್ಯಾಗಾರಗಳಿಗೆ ಭೇಟಿ ನೀಡಿ ಸುದೀರ್ಘ ಪರಿಶೀಲನೆ ನಡೆಸಿತು.

ಸಮಿತಿಯ ಸದಸ್ಯರಾದ ಸರ್ಕಾರದ ನಿವೃತ್ತ ಕಾರ್ಯದರ್ಶಿ ದ್ವಾರಕನಾಥ ಬಾಬು ಹಾಗೂ ಡಾ. ಅಬ್ದುಲ್ ಪಿಂಜರಿ ಅವರನ್ನು ಒಳಗೊಂಡ ತಂಡವು ಕೆಕೆಆರ್‌ಟಿಸಿಯ ಕೇಂದ್ರ ಕಚೇರಿ, ಕಲಬುರಗಿ ಘಟಕ-1, ಘಟಕ-2, ಘಟಕ-4, ಕೇಂದ್ರ ಬಸ್ ನಿಲ್ದಾಣ ಹಾಗೂ ವಿಭಾಗೀಯ ಕಾರ್ಯಾಗಾರಗಳಿಗೆ ಭೇಟಿ ನೀಡಿ ನಿಗಮದ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿತು.

ಕೇಂದ್ರ ಕಚೇರಿಯಲ್ಲಿ ಕೆಕೆಆರ್‌ಟಿಸಿಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಮಿತಿ, ನಿಗಮದ ಒಟ್ಟಾರೆ ಕಾರ್ಯಾಚರಣೆ, ಶಕ್ತಿ ಯೋಜನೆಯ ಅನುಷ್ಠಾನ ಹಾಗೂ ಆರ್ಥಿಕ ಸ್ಥಿತಿಗತಿ ಕುರಿತು ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದುಕೊಂಡಿತು.

ನಂತರ ವಿವಿಧ ಘಟಕಗಳು ಹಾಗೂ ಕಾರ್ಯಾಗಾರಗಳಿಗೆ ಭೇಟಿ ನೀಡಿದ ಸಮಿತಿಯ ಸದಸ್ಯರು ಬಸ್‌ಗಳ ನಿರ್ವಹಣೆ, ಸ್ವಚ್ಛತೆ, ಡಿಸಿಎಸ್ ತಂತ್ರಾಂಶ ಹಾಗೂ ಸ್ಮಾರ್ಟ್ ಇಟಿಎಂ ಬಳಕೆಯ ಕುರಿತು ಪರಿಶೀಲನೆ ನಡೆಸಿದರು. ಬಸ್‌ಗಳ ಕಾರ್ಯಕ್ಷಮತೆ, ಪ್ರಯಾಣಿಕರಿಗೆ ಒದಗಿಸಲಾಗುತ್ತಿರುವ ಸೇವೆ ಹಾಗೂ ತಾಂತ್ರಿಕ ವ್ಯವಸ್ಥೆಗಳ ಅನುಷ್ಠಾನದ ಬಗ್ಗೆಯೂ ಮಾಹಿತಿ ಪಡೆದರು.

ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಸಮಿತಿ ಸದಸ್ಯರು ಪ್ರಯಾಣಿಕರು ಹಾಗೂ ಚಾಲನಾ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿ, ಸಾರ್ವಜನಿಕ ಸಾರಿಗೆ ಸೇವೆಯ ಗುಣಮಟ್ಟ, ಪ್ರಯಾಣಿಕರ ಸಮಸ್ಯೆಗಳು ಹಾಗೂ ಸಿಬ್ಬಂದಿಯ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ಅಭಿಪ್ರಾಯಗಳನ್ನು ಆಲಿಸಿದರು.

ಈ ಸಂದರ್ಭದಲ್ಲಿ ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಡಾ. ಸುಶೀಲಾ ಬಿ., ಮುಖ್ಯ ಸಂಚಾರ ವ್ಯವಸ್ಥಾಪಕ ಸಂತೋಷಕುಮಾರ ವಿ.ಹೆಚ್., ಮುಖ್ಯ ಯಾಂತ್ರಿಕ ಅಭಿಯಂತರ ಸಂತೋಷ್ ಗೋಗೇರಿ, ಮುಖ್ಯ ಲೆಕ್ಕಾಧಿಕಾರಿ ಬಸವರಾಜ ಬೆಳಗಾವಿ, ಉಪಮುಖ್ಯ ಯೋಜನೆ ಮತ್ತು ಸಂಖ್ಯಾಧಿಕಾರಿ ಜಗದೀಶ ನಾಯಕ ಸೇರಿದಂತೆ ನಿಗಮದ ವಿವಿಧ ವಿಭಾಗಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.




Tags

KalaburagiKKRTC
share
ವಾರ್ತಾಭಾರತಿ
ವಾರ್ತಾಭಾರತಿ
Next Story
X