Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಬರ ಪರಿಹಾರ ಹೆಚ್ಚಳ, ಬೆಳೆ...

Kalaburagi | ಬರ ಪರಿಹಾರ ಹೆಚ್ಚಳ, ಬೆಳೆ ಸಾಲ ಮನ್ನಾಕ್ಕೆ ಕೆಪಿಆರ್‌ಎಸ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ28 Sept 2026 7:55 PM IST
share
Kalaburagi | ಬರ ಪರಿಹಾರ ಹೆಚ್ಚಳ, ಬೆಳೆ ಸಾಲ ಮನ್ನಾಕ್ಕೆ ಕೆಪಿಆರ್‌ಎಸ್ ಆಗ್ರಹ

ಕಲಬುರಗಿ: ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಗೆ ಸರ್ಕಾರ ಘೋಷಿಸಿರುವ ಪರಿಹಾರ ಮೊತ್ತ ಅವೈಜ್ಞಾನಿಕವಾಗಿದ್ದು, ಸಂಕಷ್ಟದಲ್ಲಿರುವ ರೈತರಿಗೆ ಸಮರ್ಪಕ ನೆರವು ನೀಡಬೇಕು. ರೈತರ ಸಂಪೂರ್ಣ ಬೆಳೆ ಸಾಲ ಮನ್ನಾ ಮಾಡಬೇಕು, ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನುಬದ್ಧ ಖಾತರಿ ನೀಡಬೇಕು ಹಾಗೂ ರೈತರ ಆತ್ಮಹತ್ಯೆ ತಡೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ಆಗ್ರಹಿಸಿದೆ.

ಈ ಕುರಿತು ಸಂಘದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಲಬುರಗಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ರೈತರು ಬಿತ್ತನೆ ಮಾಡಲು ಸಾಧ್ಯವಾಗದ ಸ್ಥಿತಿ ಎದುರಿಸುತ್ತಿದ್ದಾರೆ. ಕೆಲವೆಡೆ ಬಿತ್ತನೆ ಮಾಡಿದ ಬೆಳೆಗಳು ತೀವ್ರ ಬಿಸಿಲಿನಿಂದ ಒಣಗಿ ಹೋಗಿದ್ದು, ಬೋರ್‌ವೆಲ್‌ಗಳು ಮತ್ತು ಬಾವಿಗಳು ಬತ್ತಿವೆ. ಕಬ್ಬು ಸೇರಿದಂತೆ ವಿವಿಧ ಬೆಳೆಗಳು ಹಾನಿಗೊಳಗಾಗಿದ್ದು, ಕಬ್ಬು ಕಟಾವು ಕೂಡ ವಿಳಂಬವಾಗುವ ಆತಂಕ ಎದುರಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕೆಪಿಆರ್‌ಎಸ್ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ರೈತರಿಗೆ ಕೇವಲ 2,500 ರೂ. ಬರ ಪರಿಹಾರ ಘೋಷಿಸಿರುವುದು ಕೃಷಿ ವೆಚ್ಚಕ್ಕೆ ಹೋಲಿಸಿದರೆ ಅತ್ಯಂತ ಕಡಿಮೆಯಾಗಿದ್ದು, ಇದು ರೈತರ ನೈಜ ನಷ್ಟವನ್ನು ಭರಿಸಲು ಸಾಕಾಗುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಜಿಲ್ಲೆಯಲ್ಲಿ 22 ರೈತರ ಆತ್ಮಹತ್ಯೆ ಪ್ರಕರಣಗಳು ನಡೆದಿವೆ ಎಂದು ಆರೋಪಿಸಿದ ಅವರು, ಈ ಪೈಕಿ ಆರು ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿಲ್ಲ. ರೈತರ ಆತ್ಮಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸಂತ್ರಸ್ತ ಕುಟುಂಬಗಳಿಗೆ ನಿಯಮಾನುಸಾರ ಪರಿಹಾರ ಮತ್ತು ನೆರವು ಒದಗಿಸಬೇಕು ಎಂದು ಒತ್ತಾಯಿಸಿದರು.

ಬರ ಘೋಷಣೆಗಾಗಿ ಕಲಬುರಗಿ ಬಂದ್, ರಸ್ತೆ ತಡೆ ಹಾಗೂ ತಹಶೀಲ್ದಾರ್ ಕಚೇರಿಗಳ ಎದುರು ಪ್ರತಿಭಟನೆ ಸೇರಿದಂತೆ ನಿರಂತರ ಹೋರಾಟ ನಡೆಸಿದ ಬಳಿಕ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ. ಆದರೆ ಬರ ಘೋಷಣೆಗೆ ಮಾತ್ರ ಸೀಮಿತವಾಗದೆ, ರೈತರಿಗೆ ತಕ್ಷಣ ಪರಿಹಾರ ತಲುಪಿಸುವ ಕಾರ್ಯವಾಗಬೇಕು ಎಂದು ಸಂಘ ಆಗ್ರಹಿಸಿತು.

ಮುಖಂಡ ಕರೆಪ್ಪ ಕರಗೊಂಡ ಮಾತನಾಡಿ, ಪ್ರತಿ ಎಕರೆಗೆ ಕನಿಷ್ಠ 5,000 ರೂ. ಬರ ಪರಿಹಾರ ನೀಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ರೈತರ ಸಂಪೂರ್ಣ ಬೆಳೆ ಸಾಲ ಮನ್ನಾ ಮಾಡಬೇಕು. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಅಗತ್ಯ ನೆರವು ಒದಗಿಸಬೇಕು. ಬೆಂಬಲ ಬೆಲೆಗೆ ಕಾನೂನುಬದ್ಧ ಖಾತರಿ ನೀಡುವುದರ ಜೊತೆಗೆ ರೈತರ ಆತ್ಮಹತ್ಯೆ ತಡೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ತೊಗರಿ, ಕಬ್ಬು, ಈರುಳ್ಳಿ ಹಾಗೂ ಹತ್ತಿ ಬೆಳೆಗಳ ಬಿತ್ತನೆ ಮತ್ತು ನಾಟಿ ವೆಚ್ಚದ ವಿವರಗಳನ್ನು ಉಲ್ಲೇಖಿಸಿದ ರೈತ ಸಂಘದ ಮುಖಂಡರು, ಪ್ರಸಕ್ತ ಕೃಷಿ ವೆಚ್ಚಕ್ಕೆ ಹೋಲಿಸಿದರೆ ಸರ್ಕಾರ ಘೋಷಿಸಿರುವ ಪರಿಹಾರ ಮೊತ್ತ ಸಮರ್ಪಕವಾಗಿಲ್ಲ ಎಂದು ಅಭಿಪ್ರಾಯಪಟ್ಟರು.

ಪ್ರತಿಭಟನೆಯಲ್ಲಿ ಉಮಾಪತಿ ಪಾಟೀಲ, ದಿಲೀಪ್ ನಾಗೂರೆ, ಭೀಮಶಾ ಬಡದಾಳ, ಶರಣಬಸಪ್ಪ ಪೂಜಾರಿ, ಶರಣಗೌಡ ಪಾಟೀಲ ಸೇರಿದಂತೆ ರೈತ ಸಂಘಟನೆಗಳ ಪದಾಧಿಕಾರಿಗಳು ಹಾಗೂ ರೈತರು ಭಾಗವಹಿಸಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X