Kalaburagi | ಕುಡಾ ಸಾಮಾನ್ಯ ಸಭೆ : ನಗರಾಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆ

ಕಲಬುರಗಿ: ನಗರದ ಕುಡಾ ಸಭಾಂಗಣದಲ್ಲಿ ಶುಕ್ರವಾರ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ (ಕುಡಾ) ಅಧ್ಯಕ್ಷ ಮಜರ್ ಅಲಂಖಾನ್ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಜರುಗಿತು.
ಸಭೆಯಲ್ಲಿ ನಗರಾಭಿವೃದ್ಧಿಗೆ ಸಂಬoಧಿಸಿದ ವಿವಿಧ ಕಾಮಗಾರಿಗಳು, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.
ಸಭೆಯಲ್ಲಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಮಪ್ರಭು ಪಾಟೀಲ್, ಉತ್ತರ ಮತಕ್ಷೇತ್ರದ ಶಾಸಕಿ ಕನೀಝ್ ಫಾತಿಮಾ, ಎಂಎಲ್ಸಿ ಜಗದೇವ ಗುತ್ತೇದಾರ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.
ನಗರಾಭಿವೃದ್ಧಿ ಯೋಜನೆಗಳನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಸದಸ್ಯರು ಅಧಿಕಾರಿಗಳಿಗೆ ಸೂಚಿಸಿದರು.
Next Story




