Kalaburagi | ನೂತನ ಪೊಲೀಸ್ ಕಮಿಷನರ್ ಆಗಿ ಕುಲದೀಪ್ ಕುಮಾರ್ ಆರ್.ಜೈನ್ ನೇಮಕ

ಕುಲದೀಪ್ ಕುಮಾರ್ ಆರ್.ಜೈನ್
ಕಲಬುರಗಿ: ಕಲಬುರಗಿ ನಗರದ ನೂತನ ಪೊಲೀಸ್ ಕಮಿಷನರ್ ಆಗಿ 2011ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ಸೇವೆಗಳು) ಸರ್ಕಾರದ ಜಂಟಿ ಕಾರ್ಯದರ್ಶಿ ಅಕ್ಷಯ್ ಶ್ರೀಧರ್ ಅವರು ಬುಧವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಕಲಬುರಗಿ ನಗರ ಪೊಲೀಸ್ ಕಮಿಷನರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಶರಣಪ್ಪ ಎಸ್.ಡಿ. ಅವರನ್ನು ರೈಲ್ವೆ ಇಲಾಖೆಯ ಪೊಲೀಸ್ ಉಪ ಮಹಾನಿರೀಕ್ಷಕರ (ಡಿಐಜಿ) ಹುದ್ದೆಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.
2011ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರ ನೇಮಕ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Next Story




