Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಕುವೆಂಪು ಭಾಷಾ ಭಾರತಿ...

Kalaburagi | ಕುವೆಂಪು ಭಾಷಾ ಭಾರತಿ ಪ್ರಶಸ್ತಿ ಕಲ್ಯಾಣ ಕರ್ನಾಟಕ ಸಾಹಿತ್ಯ ಕ್ಷೇತ್ರಕ್ಕೆ ಸಂದ ಗೌರವ: ಬಸಣ್ಣ ಸಿಂಘೆ

ಡಾ.ಸೂರ್ಯಕಾಂತ ಎಸ್. ಸುಜ್ಯಾತ್‌ಗೆ ಅಭಿನಂದನಾ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ19 Sept 2026 7:12 PM IST
share
Kalaburagi | ಕುವೆಂಪು ಭಾಷಾ ಭಾರತಿ ಪ್ರಶಸ್ತಿ ಕಲ್ಯಾಣ ಕರ್ನಾಟಕ ಸಾಹಿತ್ಯ ಕ್ಷೇತ್ರಕ್ಕೆ ಸಂದ ಗೌರವ: ಬಸಣ್ಣ ಸಿಂಘೆ

ಕಲಬುರಗಿ : ಬಹುಭಾಷಾ ಜ್ಞಾನ, ಸಾಹಿತ್ಯಿಕ ಪ್ರತಿಭೆ ಹಾಗೂ ಅನುವಾದ ಕ್ಷೇತ್ರದಲ್ಲಿನ ನಿರಂತರ ಸಾಧನೆಯ ಮೂಲಕ ಡಾ. ಸೂರ್ಯಕಾಂತ ಎಸ್. ಸುಜ್ಯಾತ್ ಅವರು ಕಲ್ಯಾಣ ಕರ್ನಾಟಕದ ಸಾಹಿತ್ಯ ಕ್ಷೇತ್ರಕ್ಕೆ ಹೆಮ್ಮೆ ತಂದಿದ್ದಾರೆ. ಅವರಿಗೆ ಲಭಿಸಿರುವ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ವಾರ್ಷಿಕ ಪ್ರಶಸ್ತಿ ಇಡೀ ಕಲ್ಯಾಣ ಕರ್ನಾಟಕದ ಸಾಹಿತ್ಯ ಕ್ಷೇತ್ರಕ್ಕೆ ಸಂದ ಗೌರವವಾಗಿದೆ ಎಂದು ದಲಿತ ಚಿಂತಕ ಹಾಗೂ ಹೋರಾಟಗಾರ ಬಸಣ್ಣ ಸಿಂಘೆ ಹೇಳಿದರು.

ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಡಾ. ಸೂರ್ಯಕಾಂತ ಎಸ್. ಸುಜ್ಯಾತ್ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸುಜ್ಯಾತ್ ಅವರು ಸಾಹಿತ್ಯ ಕೃಷಿಯ ಜೊತೆಗೆ ಅನುವಾದ ಜ್ಞಾನ, ಬಹುಭಾಷಾ ವಿದ್ವತ್ತು ಹಾಗೂ ಬರವಣಿಗೆಯ ಕೌಶಲ್ಯವನ್ನು ಬೆಳೆಸಿಕೊಂಡಿದ್ದಾರೆ. ಕನ್ನಡ, ಹಿಂದಿ, ಮರಾಠಿ ಮತ್ತು ಉರ್ದು ಭಾಷೆಗಳ ಸಾಹಿತ್ಯವನ್ನು ಆಳವಾಗಿ ಅಧ್ಯಯನ ಮಾಡಿ ಅನುವಾದ ಸಾಹಿತ್ಯ ಕ್ಷೇತ್ರದಲ್ಲಿ ಗಮನಾರ್ಹ ಕೊಡುಗೆ ನೀಡಿದ್ದಾರೆ. ಅವರ ಸಾಹಿತ್ಯ ಸೇವೆಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಗೌರವಗಳು ದೊರೆಯಲಿ ಎಂದು ಶುಭ ಹಾರೈಸಿದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ವಿಕ್ರಮ ವಿಸಾಜಿ ಮಾತನಾಡಿ, ಸರಳ ವ್ಯಕ್ತಿತ್ವ, ಸ್ವಾಭಿಮಾನ, ಪರಿಶ್ರಮ ಹಾಗೂ ಪ್ರಾಮಾಣಿಕತೆಯ ಮೂಲಕ ಡಾ. ಸುಜ್ಯಾತ್ ಅವರು ಮಹತ್ವದ ಸಾಧನೆ ಮಾಡಿದ್ದಾರೆ ಎಂದರು.

ಬಡತನದ ಕುಟುಂಬದಲ್ಲಿ ಬೆಳೆದ ಅವರು ಓದು, ಬರವಣಿಗೆ ಮತ್ತು ಅನುವಾದದ ಆಸಕ್ತಿಯಿಂದ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ನಿರ್ಲಕ್ಷ್ಯಕ್ಕೆ ಒಳಗಾದ ಹಲವು ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿ ಓದುಗರಿಗೆ ಪರಿಚಯಿಸಿದ್ದಾರೆ. ಭಾಷಾ ಮಡಿವಂತಿಕೆಯ ಈ ಕಾಲದಲ್ಲಿಯೂ ವಿವಿಧ ಭಾಷೆಗಳ ವೈಚಾರಿಕ ಸಾಹಿತ್ಯವನ್ನು ಕನ್ನಡಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮರಾಠಿ ಭಾಷೆಯ ‘ಗಾಡಗೆ ಮಹಾರಾಜ’, ‘ತೃತೀಯ ರತ್ನ’, ‘ಭೀಮಾ ಕೊರೆಗಾಂವ’ ಹಾಗೂ ಹಿಂದಿ ಭಾಷೆಯ ‘ದೀಕ್ಷೆ’ ಸೇರಿದಂತೆ ಹಲವು ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿರುವ ಅವರು, ಅನುವಾದದ ರಚನಾ ವಿಧಾನ, ಸವಾಲುಗಳು ಮತ್ತು ಸಾಧ್ಯತೆಗಳನ್ನು ಸಮರ್ಥವಾಗಿ ಅರ್ಥೈಸಿಕೊಂಡಿದ್ದಾರೆ. ಗ್ರಾಮೀಣ ಹಿನ್ನೆಲೆಯಿಂದ ಬಂದ ಪ್ರತಿಭೆಯಾಗಿ ಶಿಕ್ಷಣದಿಂದ ದೊರೆತ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಮಾದರಿ ಸಾಧನೆ ಮಾಡಿದ್ದಾರೆ ಎಂದು ಹೇಳಿದರು.

ಗುಲ್ಬರ್ಗಾ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಹಾಗೂ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಎಚ್.ಟಿ. ಪೋತೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣದ ಅವಕಾಶಗಳು ವಿಸ್ತಾರಗೊಂಡ ನಂತರ ಜ್ಯೋತಿಬಾ ಫುಲೆ, ಡಾ. ಬಿ.ಆರ್. ಅಂಬೇಡ್ಕರ್, ಗಾಡಗೆ ಬಾಬಾ ಮುಂತಾದವರು ಜ್ಞಾನಕ್ಕೆ ಮಹತ್ವ ನೀಡುವ ಮೂಲಕ ಸಮಾಜದಲ್ಲಿ ಬದಲಾವಣೆಗೆ ಕಾರಣರಾದರು ಎಂದು ಹೇಳಿದರು.

ಸಂಘರ್ಷ, ಅಪಮಾನ ಮತ್ತು ಅವಮಾನಗಳನ್ನು ಮೆಟ್ಟಿಲುಗಳನ್ನಾಗಿ ಮಾಡಿಕೊಂಡು ಸಾಧನೆ ಮಾಡಿದವರ ಇತಿಹಾಸ ನಮ್ಮ ಮುಂದಿದೆ. ಯುವಜನರು ಶಿಕ್ಷಣದ ಅವಕಾಶಗಳ ಮಹತ್ವವನ್ನು ಅರಿತುಕೊಂಡು ನಿರಂತರ ಅಧ್ಯಯನ, ಬರವಣಿಗೆ ಮತ್ತು ಪರಿಶ್ರಮದ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಬೇಕು ಎಂದು ಕರೆ ನೀಡಿದರು.

ಸಾಹಿತಿ ಡಾ. ಶ್ರೀಶೈಲ ನಾಗರಾಳ, ಅನುವಾದಕ ಡಾ. ಸೂರ್ಯಕಾಂತ ಎಸ್. ಸುಜ್ಯಾತ್ ಹಾಗೂ ಸಿದ್ದಲಿಂಗೇಶ್ವರ ಪ್ರಕಾಶನದ ಮಾಲೀಕ ಬಸವರಾಜ ಕೊನೆಕ್ ಮಾತನಾಡಿದರು. ಶ್ರೀಮತಿ ಶೀಲಾವತಿ ಸುಜ್ಯಾತ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಡಾ. ಸೂರ್ಯಕಾಂತ ಪಾಟೀಲ್, ಡಾ. ಎಚ್.ಎಸ್. ಹೊಸಮನಿ, ಸಿ.ಎಸ್. ಮಾಲಿ ಪಾಟೀಲ್, ಲಕ್ಷ್ಮೀಕಾಂತ ಹುಬ್ಬಳ್ಳಿ, ಡಾ. ಪ್ರದೀಪ್ ಕಡೂನ ಸೇರಿದಂತೆ ಹಲವರು ಭಾಗವಹಿಸಿದ್ದರು. ಕನ್ನಡ ಸಂಶೋಧನಾ ಸಂಘ ಹಾಗೂ ಕನ್ನಡ ಸಾಹಿತ್ಯ ಸಂಘದ ಪದಾಧಿಕಾರಿಗಳು, ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಂಗೀತ ವಿಭಾಗದ ಡಾ. ಲಕ್ಷ್ಮೀಶಂಕರ್ ಜೋಷಿ ಪ್ರಾರ್ಥಿಸಿದರು. ಡಾ. ಜಯ ದಾನಮ್ಮ ವಚನ ಗಾಯನ ಪ್ರಸ್ತುತಪಡಿಸಿದರು. ಡಾ. ಕಿರಣ್ ಗಣಪತಿ ಕಾರ್ಯಕ್ರಮ ನಿರ್ವಹಿಸಿದರು. ಡಾ. ಸಂತೋಷ ಕಂಬಾರ ವಂದಿಸಿದರು.

ಡಾ. ಸೂರ್ಯಕಾಂತ ಸುಜ್ಯಾತ್ ಅವರು ಬಡತನದ ಸವಾಲುಗಳನ್ನು ಚೈತನ್ಯವಾಗಿಸಿಕೊಂಡು ಸಾಹಿತ್ಯ ರಚನೆ ಹಾಗೂ ಅನುವಾದ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ನಿರ್ಮಿಸಿಕೊಂಡಿದ್ದಾರೆ. ದೇಗಾಂವದ ಗ್ರಾಮೀಣ ಪರಿಸರ, ಮರಾಠಿ ಹಾಗೂ ಹಿಂದಿ ಭಾಷೆಗಳ ಪ್ರಭಾವ ಮತ್ತು ಮಾತೃಭಾಷೆಯ ಸಂವೇದನೆಗಳು ಅವರ ಸಾಹಿತ್ಯ ಸಾಧನೆಗೆ ಬಲವಾಗಿವೆ. ಕುವೆಂಪು ಭಾಷಾ ಭಾರತಿ ಪ್ರಶಸ್ತಿ ಅವರ ಅನುವಾದ ಸಾಹಿತ್ಯ ಸೇವೆಗೆ ದೊರೆತ ಮಹತ್ವದ ಮಾನ್ಯತೆಯಾಗಿದೆ.

-ಪ್ರೊ.ಎಚ್.ಟಿ.ಪೋತೆ, ಡೀನರು ಕಲಾ ನಿಕಾಯ, ನಿರ್ದೇಶಕರು, ಕನ್ನಡ ಅಧ್ಯಯನ ಸಂಸ್ಥೆ

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X