ಕಲಬುರಗಿ | ಸಿಮೆಂಟ್ ಕಾರ್ಖಾನೆಯಲ್ಲಿ ಕೂಲಿ ಕಾರ್ಮಿಕ ಮೃತ್ಯು

ಕಲಬುರಗಿ: ಸಿಮೆಂಟ್ ಕಾರ್ಖಾನೆಯಲ್ಲಿ ಕ್ಲಿಂಕರ್ ಬೆಲ್ಟ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಸೇಡಂ ತಾಲ್ಲೂಕಿನ ಕೊಡ್ಲಾ ಸಮೀಪದ ಶ್ರೀ ಸಿಮೆಂಟ್ ಕಾರ್ಖಾನೆಯಲ್ಲಿ ರವಿವಾರ ಬೆಳಗಿನ ಜಾವ ನಡೆದಿದೆ.
ಸೇಡಂ ತಾಲ್ಲೂಕಿನ ದುಗನೂರ ಗ್ರಾಮದ ನಿವಾಸಿ ವಿನೋದ್ ಹಣಮಂತ (28) ಮೃತ ಕೂಲಿ ಕಾರ್ಮಿಕ ಎಂದು ತಿಳಿದುಬಂದಿದೆ.
ಕಾರ್ಮಿಕ ವಿನೋದ್, ಶ್ರೀ ಸಿಮೆಂಟ್ ಕಾರ್ಖಾನೆಯಲ್ಲಿ ಕ್ಲಿಂಕರ್ ಬೆಲ್ಟ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಬೆಲ್ಟ್ ಗೆ ಸಿಲುಕಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಮಿಕನ ಮೃತದೇಹ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸೇಡಂ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





