Kalaburagi | ಜಮೀನು ವಿವಾದ : ಅಣ್ಣನಿಂದಲೇ ತಮ್ಮನ ಹತ್ಯೆ

ಧನರಾಜ್ ಮೈಲಾರಿ ಶೆಳ್ಳಗಿ
ಕಲಬುರಗಿ : ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ-ತಮ್ಮಂದಿರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಕಲಬುರಗಿ ತಾಲೂಕಿನ ಭೂಪಾಲತೆಗನೂರ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಭೂಪಾಲತೆಗನೂರ ಗ್ರಾಮದ ಧನರಾಜ್ ಮೈಲಾರಿ ಶೆಳ್ಳಗಿ (34) ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಅವರ ಸಹೋದರ ಶಿವರಾಜ್ ಶೆಳ್ಳಗಿ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ.
ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಜಮೀನಿನಲ್ಲಿ ಊಟ ಮಾಡುತ್ತಿದ್ದ ವೇಳೆ ಉಳುಮೆ ಮಾಡುವ ವಿಚಾರವಾಗಿ ಸಹೋದರರ ನಡುವೆ ಮಾತಿನ ಚಕಮಕಿ ನಡೆದಿದೆ. ವಾಗ್ವಾದ ತೀವ್ರಗೊಂಡ ಸಂದರ್ಭದಲ್ಲಿ ಶಿವರಾಜ್ ಕಲ್ಲಿನಿಂದ ಧನರಾಜ್ ಅವರ ತಲೆಗೆ ಹೊಡೆದಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಧನರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಬಳಿಕ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.




