Kalaburagi | ಸಫಾಯಿ ಕರ್ಮಚಾರಿಗಳ ಮಕ್ಕಳಿಗೆ ಲ್ಯಾಪ್‌ಟಾಪ್ ವಿತರಣೆ

ಕಲಬುರಗಿ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಲ್ಯಾಪ್‌ಟಾಪ್ ವಿತರಣೆ ಯೋಜನೆಯಡಿ ಆಯ್ಕೆಯಾದ ಸಫಾಯಿ ಕರ್ಮಚಾರಿ (ಪೌರಕಾರ್ಮಿಕ) ಹಾಗೂ ಮ್ಯಾನ್ಯುಯಲ್ ಅವರ ನಾಲ್ವರು ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅವರು ಬುಧವಾರ ತಮ್ಮ ಕಚೇರಿಯಲ್ಲಿ ಲ್ಯಾಪ್‌ಟಾಪ್ ವಿತರಿಸಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಸಫಾಯಿ ಕರ್ಮಚಾರಿಗಳ ರಾಜ್ಯ ಮೇಲ್ವಿಚಾರಣಾ ಸಮಿತಿಯ ಸದಸ್ಯರು, ನಿಗಮದ ಜಿಲ್ಲಾ ವ್ಯವಸ್ಥಾಪಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Next Story




