Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಆದಿವಾಸಿ ತಾಂಡಾಗಳಿಗೆ ಲತಾ...

Kalaburagi | ಆದಿವಾಸಿ ತಾಂಡಾಗಳಿಗೆ ಲತಾ ಮೋಹನ್ ಭೇಟಿ

ಮನೆ, ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ22 Sept 2026 5:47 PM IST
share
Kalaburagi | ಆದಿವಾಸಿ ತಾಂಡಾಗಳಿಗೆ ಲತಾ ಮೋಹನ್ ಭೇಟಿ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ ಆದಿವಾಸಿ ಬುಡಕಟ್ಟು ಮಹಾಸಭೆಯ ರಾಜ್ಯ ಮಹಿಳಾ ಅಧ್ಯಕ್ಷೆ ಲತಾ ಮೋಹನ್ ಅವರು, ಸ್ಥಳೀಯ ಜನರ ಸಮಸ್ಯೆಗಳನ್ನು ಆಲಿಸಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಮಹಾಸಭೆಯ ಗೌರವ ಅಧ್ಯಕ್ಷ ಸಿ.ಎಸ್. ದ್ವಾರಕನಾಥ್ ಹಾಗೂ ರಾಜ್ಯಾಧ್ಯಕ್ಷ ಜಗ್ಗು ಅವರ ನಿರ್ದೇಶನದ ಮೇರೆಗೆ ಲತಾ ಮೋಹನ್ ಅವರು ಜಿಲ್ಲೆಯ ವಿವಿಧ ತಾಂಡಾಗಳಿಗೆ ಭೇಟಿ ನೀಡಿದರು. ಈ ವೇಳೆ ಮಹಾಸಭೆಯ ಜಿಲ್ಲಾಧ್ಯಕ್ಷ ಶ್ಯಾಮಸಿಂಗ ಕಾಳೆ, ಉಪಾಧ್ಯಕ್ಷ ಕಲ್ಲಪ್ಪ ಪವಾರ್ ಸೇರಿದಂತೆ ಲಗಮು ಕಾಳೆ, ಗೋವಿಂದ ಚವ್ಹಾಣ, ರಂಗನಾಥ್ ಪವಾರ್, ಸದಾನಂದ ಕಾಳೆ, ಮೀಟನಪ್ಪ ಕಾಳೆ ಹಾಗೂ ಕಲ್ಲು ಚವ್ಹಾಣ ಉಪಸ್ಥಿತರಿದ್ದರು.

ಕಲಬುರಗಿ ತಾಲೂಕಿನ ಸಿಂದಗಿ (ಬಿ), ಆಳಂದ ತಾಲೂಕಿನ ಝಳಕಿ (ಕೆ) ಗ್ರಾಮದ ಪಾರ್ದಿ ತಾಂಡಾ, ಮಾದನ ಹಿಪ್ಪರ್ಗಾ ಪಾರ್ದಿ ತಾಂಡಾ, ದರ್ಗಾಶಿರೂರ ತಾಂಡಾ, ಮೋಘಾ (ಬಿ), ಶಕಾಪುರ ತಾಂಡಾ, ಕಂಸರನಾಯಕ ತಾಂಡಾ ಹಾಗೂ ಆಳಂದ ಪಟ್ಟಣ ವ್ಯಾಪ್ತಿಯ ತಾಂಡಾಗಳಿಗೆ ಭೇಟಿ ನೀಡಿ ಜನರೊಂದಿಗೆ ಚರ್ಚೆ ನಡೆಸಲಾಯಿತು.

ತಾಂಡಾಗಳಲ್ಲಿ ಮನೆ, ರಸ್ತೆ, ಕುಡಿಯುವ ನೀರು, ಶಾಲೆ, ಅಂಗನವಾಡಿ, ಆಸ್ಪತ್ರೆ ಹಾಗೂ ಸಾರಿಗೆ ಸೇರಿದಂತೆ ಮೂಲಸೌಕರ್ಯಗಳ ಕೊರತೆಯಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡರು. ಉದ್ಯೋಗಾವಕಾಶಗಳ ಕೊರತೆಯಿಂದ ಕೂಲಿ ಕೆಲಸಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ಎದುರಾಗಿದೆ ಎಂದು ತಮ್ಮ ಸಮಸ್ಯೆಗಳನ್ನು ವಿವರಿಸಿದರು.

ಕೆಲವರು ಪೊಲೀಸ್ ಇಲಾಖೆಯಿಂದ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಆರೋಪಿಸಿದ್ದು, ತಮ್ಮ ಸಮಸ್ಯೆಗಳಿಗೆ ಸೂಕ್ತ ನ್ಯಾಯ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣೆಯ ನಂತರ ಜನಪ್ರತಿನಿಧಿಗಳು ತಾಂಡಾಗಳತ್ತ ಗಮನ ಹರಿಸುತ್ತಿಲ್ಲ ಎಂಬ ಆರೋಪವೂ ಕೇಳಿಬಂತು.

ಈ ಸಂದರ್ಭದಲ್ಲಿ ಮಾತನಾಡಿದ ಲತಾ ಮೋಹನ್, ಅನೇಕ ಕುಟುಂಬಗಳಿಗೆ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳಿಲ್ಲದ ಕಾರಣ ಸರ್ಕಾರಿ ಯೋಜನೆಗಳ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಹೇಳಿದರು. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸಿಗದೆ ಶಿಕ್ಷಣದಿಂದಲೂ ಅನೇಕ ಮಕ್ಕಳು ವಂಚಿತರಾಗಿದ್ದಾರೆ ಎಂದು ತಿಳಿಸಿದರು.

ಬೇರೆಯವರ ಜಾಗದಲ್ಲಿ ಟೆಂಟ್ ಹಾಕಿಕೊಂಡು ಜೀವನ ನಡೆಸುತ್ತಿರುವ ಕುಟುಂಬಗಳಿದ್ದು, ನೂರಾರು ಮಕ್ಕಳು ಮೂಲಭೂತ ಸೌಲಭ್ಯಗಳಿಂದ ದೂರವಾಗಿದ್ದಾರೆ. ಅಂಗನವಾಡಿ, ಶಾಲೆ, ಆಸ್ಪತ್ರೆ ಹಾಗೂ ಸಮರ್ಪಕ ಬಸ್ ವ್ಯವಸ್ಥೆಯ ಕೊರತೆಯಿದ್ದು, ಕುಡಿಯುವ ನೀರಿನ ಸಮಸ್ಯೆಯೂ ಗಂಭೀರವಾಗಿದೆ ಎಂದು ಅವರು ಹೇಳಿದರು.

ತಾಂಡಾಗಳಿಗೆ ನೇರವಾಗಿ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲಾಗಿದ್ದು, ಸಂಬಂಧಪಟ್ಟ ಇಲಾಖೆಗಳು ಮತ್ತು ಸರ್ಕಾರ ಈ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಮೂಲಸೌಕರ್ಯ ಹಾಗೂ ಸರ್ಕಾರಿ ಸೌಲಭ್ಯಗಳನ್ನು ತಕ್ಷಣ ಒದಗಿಸಬೇಕು ಎಂದು ಲತಾ ಮೋಹನ್ ಒತ್ತಾಯಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X