ಕಲಬುರಗಿ| ಯುವ ಸಂಸತ್ತು ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ: ನಗರದ ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಯುವ ಸಂಸತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ ಉದ್ಘಾಟಿಸಿದರು. ಸೋಮಶೇಖರ ಹಂಚಿನಾಳ ಅವರು ಜ್ಯೋತಿ ಬೆಳಗಿಸಿದರು.
ಮುಖ್ಯ ಅತಿಥಿಗಳಾಗಿ ಗುಲಬರ್ಗಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ವಿ. ಪಾಸರ್, ಕಲಬುರಗಿ ದಕ್ಷಿಣ ಕ್ಷೇತ್ರದ ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ ಜಮಖಂಡಿ, ಸಮಾಜ ಕಲ್ಯಾಣ ಇಲಾಖೆಯ ಅಧೀಕ್ಷಕ ಸುರೇಶ, ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಹೋಳ್ಕರ್, ಸುರೇಶ ಗುರುಲಿಂಗಯ್ಯ ಆರ್. ಬಿ ಮಠ ಹಾಗೂ ಸಂತೋಷ ಹೂಗಾರ ಪಾಲ್ಗೊಂಡಿದ್ದರು.
ಡಾ. ಮಾರುತಿ ಬೇಂದ್ರೆ ಸ್ವಾಗತಿಸಿದರು. ವಿದ್ಯಾಧರ ಕಾಂಬಳೆ ನಿರೂಪಿಸಿದರು. ಸಂತೋಷ್ ವಂದಿಸಿದರು.
Next Story




