ಕಲಬುರಗಿ | ಕ್ಷುಲ್ಲಕ ಕಾರಣಕ್ಕೆ ಉಪನ್ಯಾಸಕನಿಗೆ ಚೂರಿ ಇರಿತ ; ಆಸ್ಪತ್ರೆಗೆ ದಾಖಲು

ಸಾಂದರ್ಭಿಕ ಚಿತ್ರ
ಕಲಬುರಗಿ : ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಉಪನ್ಯಾಸಕರೊಬ್ಬರಿಗೆ ಚೂರಿ ಇರಿದ ಘಟನೆ ನಗರದ ಎನ್.ವಿ.ಪಾಲಿಟೆಕ್ನಿಕ್ ಕಾಲೇಜ್ ಎದುರು ಸೋಮವಾರ ಮಧ್ಯಾಹ್ನ ನಡೆದಿದೆ.
ಎನ್.ವಿ.ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಶಿವಕುಮಾರ ಓಕಳಿ (45) ಎಂಬುವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಶಿವಕುಮಾರ್ ಅವರು ಮಧ್ಯಾಹ್ನ ತರಗತಿ ಮುಗಿಸಿಕೊಂಡು ಕಾಲೇಜಿನ ಎದುರುಗಡೆ ರಸ್ತೆಗೆ ಬರುತ್ತಿದಾಗ ಆಕಸ್ಮಿಕವಾಗಿ ವ್ಯಕ್ತಿಯೊಬ್ಬನಿಗೆ ಢಿಕ್ಕಿ ಹೊಡಿದಿದ್ದಾರೆ. ಆಗ ಆ ವ್ಯಕ್ತಿ ಜಗಳ ತೆಗೆದು ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಗಾಯಗೊಂಡ ಶಿವಕುಮಾರ ಸದ್ಯ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯವಿಲ್ಲವೆಂದು ತಿಳಿದು ಬಂದಿದೆ.
ಈ ಕುರಿತು ಶಿವಕುಮಾರ ಅವರು ಬ್ರಹ್ಮಪುರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಚಾಕು ಇರಿದ ವ್ಯಕ್ತಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.
Next Story





