Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಉಪನ್ಯಾಸಕರು ನಿರಂತರ...

Kalaburagi | ಉಪನ್ಯಾಸಕರು ನಿರಂತರ ಅಧ್ಯಯನಶೀಲರಾಗಿ ಜ್ಞಾನ ವೃದ್ಧಿಸಿಕೊಳ್ಳಬೇಕು: ದೇವಣಗೌಡ ಪಾಟೀಲ

ವಾರ್ತಾಭಾರತಿವಾರ್ತಾಭಾರತಿ1 Oct 2026 6:47 PM IST
share
Kalaburagi | ಉಪನ್ಯಾಸಕರು ನಿರಂತರ ಅಧ್ಯಯನಶೀಲರಾಗಿ ಜ್ಞಾನ ವೃದ್ಧಿಸಿಕೊಳ್ಳಬೇಕು: ದೇವಣಗೌಡ ಪಾಟೀಲ

ಕಲಬುರಗಿ: ಪದವಿ ಪೂರ್ವ ಶಿಕ್ಷಣದ ಹಂತವು ವಿದ್ಯಾರ್ಥಿಗಳ ಜೀವನ ರೂಪಿಸಿಕೊಳ್ಳುವಲ್ಲಿ ಅತ್ಯಂತ ಪ್ರಮುಖ ಘಟ್ಟವಾಗಿದ್ದು, ಅವರ ಭವಿಷ್ಯವನ್ನು ಉತ್ತಮವಾಗಿ ರೂಪಿಸುವ ಗುರುತರ ಜವಾಬ್ದಾರಿ ಉಪನ್ಯಾಸಕರ ಮೇಲಿದೆ. ಈ ಹಿನ್ನೆಲೆಯಲ್ಲಿ ಉಪನ್ಯಾಸಕರು ನಿರಂತರ ಅಧ್ಯಯನಶೀಲರಾಗಿ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದೇವಣಗೌಡ ಪಾಟೀಲ ಹೇಳಿದರು.

ನಗರದ ಕನ್ನಡ ಭವನದಲ್ಲಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಘಟಕ, ಕಲಬುರಗಿ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಉಪನ್ಯಾಸಕರ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಗುರುತಿಸಿ, ಅವರನ್ನು ಪರೀಕ್ಷೆಗೆ ಸಮರ್ಪಕವಾಗಿ ಸಿದ್ಧಪಡಿಸುವುದು ಉಪನ್ಯಾಸಕರ ಪ್ರಮುಖ ಜವಾಬ್ದಾರಿಯಾಗಿದೆ. ಕಲಬುರಗಿ ವಿಭಾಗದ ಪಿಯುಸಿ ಫಲಿತಾಂಶವನ್ನು ಮತ್ತಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳು ಹಾಗೂ ಉಪನ್ಯಾಸಕರು ಒಗ್ಗೂಡಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ವಯೋನಿವೃತ್ತಿ ಹೊಂದುತ್ತಿರುವ ಉಪನ್ಯಾಸಕರು ತಮ್ಮ ಸೇವಾವಧಿಯಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದು, ಇಂದಿನ ಉಪನ್ಯಾಸಕರಿಗೆ ಮಾದರಿಯಾಗಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಬೋಧನಾ ಕ್ಷೇತ್ರದಲ್ಲಿರುವವರು ತಮ್ಮ ಜ್ಞಾನವನ್ನು ನಿರಂತರವಾಗಿ ವೃದ್ಧಿಸಿಕೊಳ್ಳಲು ಅಧ್ಯಯನಶೀಲರಾಗಿರಬೇಕು ಎಂದು ಕಿವಿಮಾತು ಹೇಳಿದರು.

ನಿವೃತ್ತ ಉಪನ್ಯಾಸಕರಿಗೆ ಗೌರವ :

ಕಾರ್ಯಕ್ರಮದಲ್ಲಿ ನಿವೃತ್ತಿ ಹೊಂದುತ್ತಿರುವ ಉಪನ್ಯಾಸಕರನ್ನು ಗೌರವಪೂರ್ವಕವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ವಿವಿಧ ಸಂಘ-ಸಂಸ್ಥೆಗಳಿಂದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಉಪನ್ಯಾಸಕರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯ ಮಟ್ಟದ ಉತ್ತಮ ಉಪನ್ಯಾಸಕರ ಪ್ರಶಸ್ತಿಗೆ ಭಾಜನರಾದ ಶ್ರೀಮತಿ ಸವಿತಾ ಬಿ. ನಾಸಿ ಅವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್.ಟಿ. ರಂಗೋಲಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅರುಣಕುಮಾರ ಪಾಟೀಲ, ಡಾ. ಶರಣಗೌಡ ಪಾಟೀಲ, ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಧರ್ಮರಾಯ ಜವಳಿ, ಡಾ. ಸಿಲ್ವಿ ಎ. ದೇಶಮಾನೆ, ಮಲ್ಲಿಕಾರ್ಜುನ ಆನಂದಕರ ಹಾಗೂ ಶಿವರಾಜ ನಂದಗಾಂವ ಉಪಸ್ಥಿತರಿದ್ದರು.

ಅತಿಥಿಗಳಾಗಿ ಗುಂಡಯ್ಯ ಸ್ವಾಮಿ, ಡಾ. ಭಗವಂತರಾಯ ಬಳ್ಳುಂಡಗಿ, ನಾಗರಾಜ ಮೈಲ್ವಾರ, ಸವಿತಾ ಬಿ. ನಾಸಿ, ಪಾಂಡು ಎಲ್. ರಾಠೋಡ, ಶರಣು ಓಂಕಾರ, ನರಸಿಂಗರಾವ ಆರ್. ಕುಲಕರ್ಣಿ ಹಾಗೂ ಸಿದ್ದಲಿಂಗ ಬಿ. ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿವಿಧ ತಾಲೂಕುಗಳ ಅಧ್ಯಕ್ಷರಾದ ಉದಯಕುಮಾರ ಎಸ್., ಮುತ್ತಣ್ಣ ಎಲ್. ಬೇರೂಟಿ, ಡಾ. ಸುನೀಲಕುಮಾರ ಎಂ.ಎಸ್., ಡಾ. ಮಲ್ಲಿಕಾರ್ಜುನ ಪಾಲಮೂರ, ಪಂಡರೀನಾಥ ಕ್ಷೀರಸಾಗರ, ಸುರೇಶ ನಾಗೂರ, ಶಶಿಕಾಂತ ಮೇತ್ರಿ, ಡಾ. ದೇವೇಂದ್ರ ಗೂಡೂರ ಹಾಗೂ ಶ್ರೀಮತಿ ಸುಮಂಗಲಾ ಜಿ. ಸಂಗಾವಿ ಸೇರಿದಂತೆ ಜಿಲ್ಲೆಯ ವಿವಿಧ ಕಾಲೇಜುಗಳ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags

lecturersKalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X