ಕಲಬುರಗಿ | ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮ

ಕಲಬುರಗಿ: ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಗುಲ್ಬರ್ಗಾ ನ್ಯಾಯವಾದಿಗಳ ಸಂಘ ಹಾಗೂ ತಾಲೂಕು ಪಂಚಾಯತ್ ಇವುಗಳ ಸಂಯುಕ್ತಾಶ್ರಯದಲ್ಲಿ ಕಲಬುರಗಿ ತಾಲೂಕು ಪಂಚಾಯತತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ಮಾನವ ಕಳ್ಳ ಸಾಗಾಣಿಕೆ ತಡೆ” ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವ್ಹಿಲ್ ನ್ಯಾಯಾಧೀಶರಾದ ಶ್ರೀನಿವಾಸ್ ನವಲೆ ಅವರು ಬುಧವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕಲಬುರಗಿ ಕ್ರೈಮ್ ಮತ್ತು ಟ್ರಾಫೀಕ್ ಡಿ.ಸಿ.ಪಿ.ರಾದ ಪ್ರವೀಣ ನಾಯಕ, ಕಲಬುರಗಿ ಉತ್ತರ ಉಪ ವಿಭಾಗ ಡಿ.ಸಿ.ಪಿ.ರಾದ ಚಂದ್ರಶೇಖರ ಜಿ., ಮಾನವ ಕಳ್ಳ ಸಾಗಾಣಿಕೆ ತಡೆ ಸಮಿತಿ ಸದಸ್ಯರು ಮತ್ತು ಸಿಪಿಐರಾದ ವಾಜೀದ್ ಪಟೇಲ್, ಕಲಬುರಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಂ.ಡಿ. ಸೈಯದ ಪಟೇಲ್, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ರೇವಣಸಿದ್ದಪ್ಪ ಗೌಡರ, ಲೆಕ್ಕಾಧಿಕಾರಿ ಕು.ಕವಿತಾ, ವ್ಯವಸ್ಥಾಪಕರಾದ ಬಸಮ್ಮ, ಕಲಬುರಗಿ ತಾಲೂಕಿನ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸೇರಿದಂತೆ ನರೇಗಾ ಐ.ಇ.ಸಿ.ರಾದ ಮೋಸಿನ್‍ಖಾನ್, ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.





