Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಅತಿ ಹಿಂದುಳಿದ ಸಮುದಾಯಗಳು...

Kalaburagi | ಅತಿ ಹಿಂದುಳಿದ ಸಮುದಾಯಗಳು ರಾಜಕೀಯವಾಗಿ ಸಂಘಟಿತರಾಗಲಿ: ಬಿ.ಕೆ.ಮೋಹನ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ8 July 2026 6:20 PM IST
share
Kalaburagi | ಅತಿ ಹಿಂದುಳಿದ ಸಮುದಾಯಗಳು ರಾಜಕೀಯವಾಗಿ ಸಂಘಟಿತರಾಗಲಿ: ಬಿ.ಕೆ.ಮೋಹನ್ ಕುಮಾರ್

ಕಲಬುರಗಿ: ಅತಿ ಹಿಂದುಳಿದ ಸಮುದಾಯಗಳು ರಾಜಕೀಯವಾಗಿ ಸಂಘಟಿತರಾಗಿ ಸ್ವಾಭಿಮಾನದಿಂದ ನಾಯಕತ್ವ ವಹಿಸಿಕೊಳ್ಳಬೇಕು ಎಂದು ಕರ್ನಾಟಕ ವಿಕಾಸಶೀಲ ಇನ್ಸಾನ್ ಪಾರ್ಟಿ (ವಿಐಪಿ) ರಾಜ್ಯಾಧ್ಯಕ್ಷ ಬಿ.ಕೆ.ಮೋಹನ್ ಕುಮಾರ್ ಕರೆ ನೀಡಿದರು.

ನಗರದ ಯಾತ್ರಿಕ್ ನಿವಾಸದಲ್ಲಿ ವಿಐಪಿ ಪಕ್ಷ ಆಯೋಜಿಸಿದ್ದ ಸಂಘಟನಾ ಸಭೆಯಲ್ಲಿ ಮಾತನಾಡಿದ ಅವರು, “ನಮ್ಮ ಮತ ನಮಗೆ” ಎಂಬ ಘೋಷಣೆಯೊಂದಿಗೆ ಅತಿ ಹಿಂದುಳಿದ ಸಮುದಾಯಗಳ ರಾಜಕೀಯ ಹಕ್ಕುಗಳ ರಕ್ಷಣೆಗೆ ಪಕ್ಷ ಹೋರಾಟ ನಡೆಸುತ್ತಿದೆ ಎಂದು ತಿಳಿಸಿದರು.

ರಾಜ್ಯದ ಹಲವು ಕ್ಷೇತ್ರಗಳಲ್ಲಿ ಅತಿ ಹಿಂದುಳಿದ ಸಮುದಾಯಗಳ ಮತಗಳನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಈ ಪರಿಸ್ಥಿತಿಗೆ ತೆರೆ ಎಳೆಯುವ ಉದ್ದೇಶದಿಂದ ವಿಐಪಿ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಲಾಗುತ್ತಿದ್ದು, ಎಲ್ಲಾ ಅತಿ ಹಿಂದುಳಿದ ಸಮುದಾಯಗಳು ಪಕ್ಷವನ್ನು ಬೆಂಬಲಿಸಿ ತಮ್ಮ ರಾಜಕೀಯ ಅಸ್ತಿತ್ವವನ್ನು ಬಲಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಪಕ್ಷದ ಪ್ರಧಾನ ಕಾರ್ಯದರ್ಶಿ ಎಚ್.ಪ್ರಶಾಂತ್ ಮಾತನಾಡಿ, ಅತಿ ಹಿಂದುಳಿದ ಸಮುದಾಯಗಳ ದೌರ್ಬಲ್ಯವನ್ನು ದುರುಪಯೋಗಪಡಿಸಿಕೊಂಡು ಅವರ ಸಾಮಾಜಿಕ ಹಾಗೂ ರಾಜಕೀಯ ಹಕ್ಕುಗಳನ್ನು ನಿರಂತರವಾಗಿ ಕಡೆಗಣಿಸಲಾಗುತ್ತಿದೆ. ಸಂವಿಧಾನಬದ್ಧವಾಗಿ ದೊರೆಯಬೇಕಾದ ಅವಕಾಶಗಳಿಂದ ಅವರನ್ನು ವಂಚಿಸಲಾಗುತ್ತಿದೆ ಎಂದು ಆರೋಪಿಸಿದರು.

ಜಿಲ್ಲಾ ಸಂಚಾಲಕ ಶಾಂತಪ್ಪ ಕೂಡಿ ಮಾತನಾಡಿ, ಶೀಘ್ರದಲ್ಲೇ ಕಲಬುರಗಿಯಲ್ಲಿ ವಿಐಪಿ ಪಕ್ಷದ ಜಿಲ್ಲಾ ಕಚೇರಿ ಆರಂಭಿಸಲಾಗುವುದು. ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳುವುದರ ಜೊತೆಗೆ ವಿವಿಧ ಘಟಕಗಳ ಸಮಿತಿಗಳನ್ನು ರಚಿಸಲಾಗುವುದು. ಪಕ್ಷದ ಎಲ್ಲ ಸಮಿತಿಗಳಲ್ಲಿ ಅತಿ ಹಿಂದುಳಿದ ಸಮುದಾಯಗಳ ಮುಖಂಡರಿಗೆ ಆದ್ಯತೆ ನೀಡಿ ಸಾಮಾಜಿಕ ಹಾಗೂ ರಾಜಕೀಯ ನ್ಯಾಯ ಒದಗಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಕೋಲಿ–ಕಬ್ಬಲಿಗ ಸಮಾಜದ ಮುಖಂಡರು ಭಾಗವಹಿಸಿದ್ದರು. ಶಂಕು ಮ್ಯಾಕೇರಿ, ದೌಲಪ್ಪ ಚಿಂಚೋಳಿ, ಅಣ್ಣಪ್ಪ ಜಮಾದಾರ್, ಮೋಹನ್ ಪಾಟೀಲ್, ಈರಣ್ಣ ನಾಟೀಕರ್, ರವಿ ಡೋಂಗರಗಾಂವ್, ಧರ್ಮರಾಜ್ ನಾಟೀಕರ್, ಶಿವಾನಂದ ಅಣಜಗಿ, ಅನಿಲ್ ಕೂಡಿ, ಚಂದ್ರಕಾಂತ್ ಕಿರಸಾವಳಗಿ, ಚಂದ್ರಕಾಂತ್ ಜಮಾದಾರ್, ನಾಮದೇವ ಸರಸಾಂಭ, ದೇವು ತಳವಾರ್, ಗುರು ಜುಲ್ಫಿ, ಸಂತೋಷ್ ಬೆಣ್ಣೂರು, ನಿಂಗಪ್ಪ ದೇವಣಗಾಂವ್, ರಾಜು ಸೊನ್, ರಮೇಶ್ ಬಾದ್ನಳ್ಳಿ, ಪ್ರೇಮ್ ಕೋಳಿ, ಗುರು ನಾಟೀಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X