Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಹಿರಿಯರ ಸೇವೆ,...

Kalaburagi | ಹಿರಿಯರ ಸೇವೆ, ಆರೈಕೆಯಲ್ಲಿ ಮಾನವೀಯತೆ ಮೆರೆಯಲಿ: ಅಭಿನವ ಪರ್ವತೇಶ್ವರ ಶಿವಾಚಾರ್ಯರು

ವಾರ್ತಾಭಾರತಿವಾರ್ತಾಭಾರತಿ30 Oct 2026 9:41 PM IST
share
Kalaburagi | ಹಿರಿಯರ ಸೇವೆ, ಆರೈಕೆಯಲ್ಲಿ ಮಾನವೀಯತೆ ಮೆರೆಯಲಿ: ಅಭಿನವ ಪರ್ವತೇಶ್ವರ ಶಿವಾಚಾರ್ಯರು

ಕಲಬುರಗಿ: ಹಣ, ಆಸ್ತಿ, ಅಂತಸ್ತು ಮತ್ತು ಅಧಿಕಾರ ತಾತ್ಕಾಲಿಕ. ಆದರೆ ನಾವು ಹಂಚಿದ ಪ್ರೀತಿ, ಮಾಡಿದ ಸೇವೆ, ತೋರಿದ ಕರುಣೆ ಹಾಗೂ ಹಿರಿಯರಿಂದ ಪಡೆದ ಆಶೀರ್ವಾದ ಶಾಶ್ವತವಾಗಿ ಉಳಿಯುತ್ತವೆ ಎಂದು ಬೆಳಗುಂಪಿಯ ಅಭಿನವ ಪರ್ವತೇಶ್ವರ ಶಿವಾಚಾರ್ಯರು ಹೇಳಿದರು.

ನಗರದ ಚಿಂಚೋಳಿ ರಸ್ತೆಯ ಮಹಾದೇವಿ ವೃದ್ಧಾಶ್ರಮದಲ್ಲಿ ಜ್ಞಾನ ಶಿಕ್ಷಣ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ‘ಹಿರಿಯರನ್ನು ಗೌರವಿಸಿ, ಉತ್ತಮ ಸಮಾಜ ನಿರ್ಮಿಸಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಜೀವನದ ನಿಜವಾದ ಅರ್ಥ ಅರಿಯಲು, ಮಾನವೀಯ ಮೌಲ್ಯಗಳನ್ನು ಸ್ಮರಿಸಲು ಹಾಗೂ ಹಿರಿಯರ ಆಶೀರ್ವಾದ ಪಡೆಯಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ. ಹಿರಿಯರ ಸೇವೆ ಮತ್ತು ಆರೈಕೆಯ ಮೂಲಕ ಮಾನವೀಯತೆಯನ್ನು ಮೆರೆಯಬೇಕು ಎಂದರು.

ಜ್ಞಾನ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಸಂಗಮೇಶ್ವರ ಸರಡಗಿ ಮಾತನಾಡಿ, ವೃದ್ಧಾಶ್ರಮದಲ್ಲಿ ವಾಸಿಸುವ ಪ್ರತಿಯೊಬ್ಬ ಹಿರಿಯರ ಹಿಂದೆ ಅನುಭವದ ಕಥೆ, ತ್ಯಾಗದ ಇತಿಹಾಸ ಹಾಗೂ ಬದುಕಿನ ಪಾಠವಿದೆ. ಅವರು ನಮ್ಮ ಸಂಸ್ಕೃತಿಯ ಜೀವಂತ ವಿಶ್ವವಿದ್ಯಾಲಯಗಳಿದ್ದಂತೆ. ಹಸಿದವರಿಗೆ ಅನ್ನ ನೀಡುವಾಗ, ನೋವಿನಲ್ಲಿರುವವರಿಗೆ ಸಾಂತ್ವನ ಹೇಳುವಾಗ ಹಾಗೂ ಹಿರಿಯರಿಗೆ ಪ್ರೀತಿ ತೋರುವುದರಲ್ಲಿ ದೇವರನ್ನು ಕಾಣಬಹುದು ಎಂದು ಹೇಳಿದರು.

ಶಿಕ್ಷಕ ಶಿವಕಾಂತ ಚಿಮ್ಮಾ ಮಾತನಾಡಿ, ಹಿರಿಯರ ಕಣ್ಣೀರು ಒರೆಸುವ ಕೈಗಳು ದೇವರ ಸೇವೆ ಮಾಡಿದಂತೆ. ಅವರ ಮುಖದಲ್ಲಿ ನಗು ಮೂಡಿಸುವ ಹೃದಯ ನಿಜವಾದ ಪುಣ್ಯ ಸಂಪಾದಿಸುತ್ತದೆ ಎಂದರು.

ಬಾಲಕೃಷ್ಣ ಕುಲಕರ್ಣಿ ಹಾಗೂ ಬಸಮ್ಮ ಸ್ಥಾವರಮಠ ವೇದಿಕೆಯಲ್ಲಿದ್ದರು. ಶಿವರಾಜ ಬೀರಬಿಟ್ಟೆ ಪ್ರಾರ್ಥಿಸಿದರು. ಮಲ್ಲಿನಾಥ ಮುನ್ನೊಳ್ಳಿ ಸ್ವಾಗತಿಸಿದರು. ವೀರೇಶ ಬೋಳಶೆಟ್ಟಿ ನಿರೂಪಿಸಿದರು. ಸಮಾಜ ಸೇವಕ ಸಂಜೀವಕುಮಾರ ಶೆಟ್ಟಿ ವಂದಿಸಿದರು.

ಇದೇ ಸಂದರ್ಭದಲ್ಲಿ ಶಿಕ್ಷಣ ಪ್ರೇಮಿ ಸಂಗಮೇಶ್ವರ ಸರಡಗಿ ಅವರನ್ನು ಗೆಳೆಯರ ಬಳಗದ ವತಿಯಿಂದ ಸತ್ಕರಿಸಲಾಯಿತು. ವೃದ್ಧಾಶ್ರಮದಲ್ಲಿರುವ ಎಲ್ಲ ಹಿರಿಯರಿಗೆ ಉಡುಗೊರೆ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸರೋಜಾ ಸರಡಗಿ, ಶರಣು ಕಲಶಟ್ಟಿ, ಶರಣು ಸರಡಗಿ, ಸುಶೀಲಬಾಯಿ ಸರಡಗಿ, ಬಸವರಾಜ ಸಲಗರ, ಸಂಜೀವಕುಮಾರ ಸಲಗರ ಸೇರಿದಂತೆ ಕೆಎಚ್‌ಬಿ ಗ್ರೀನ್ ಪಾರ್ಕ್ ಬಡಾವಣೆಯ ನಿವಾಸಿಗಳು ಭಾಗವಹಿಸಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X