ಕಲಬುರಗಿ | ಲೈನ್ ಮ್ಯಾನ್ ಆತ್ಮಹತ್ಯೆ : ಅಧಿಕಾರಿಗಳಿಂದ ಕಿರುಕುಳ ಆರೋಪ

ಕಲಬುರಗಿ: ಲೈನ್ ಮ್ಯಾನ್‌ವೊಬ್ಬರು ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲೂಕಿನ ಬಸವಪಟ್ಟಣ ಗ್ರಾಮದಲ್ಲಿ ನಡೆದಿದೆ.
ಪರಮೇಶ್ವರ್ ಆತ್ಮಹತ್ಯೆ ಮಾಡಿಕೊಂಡವರು. ಬಸವಪಟ್ಟಣ ಗ್ರಾಮದ ಜಮೀನಿನಲ್ಲಿ ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಪರಮೇಶ್ವರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನೆ ಫರಹತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಅಧಿಕಾರಿಗಳ ಕಿರುಕುಳ ಕಾರಣ ಎಂದು ಪರಮೇಶ್ವರ್ ಅವರ ಕುಟುಂಬಸ್ಥರು ಆರೋಪಿಸಿದ್ದಾರೆ.
Next Story





