ಕಲಬುರಗಿ: ಶಾಲೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಲೋಕಾಯುಕ್ತ ಎಸ್ಪಿ ಸಿದ್ದರಾಜು
ಕಲಬುರಗಿ: ಇಲ್ಲಿನ ಬಾಪು ನಗರದಲ್ಲಿರುವ ಕರ್ನಾಟಕ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕರುಣೇಶ್ವರ ನಗರದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕರ್ನಾಟಕ ಲೋಕಾಯುಕ್ತ ಕಲಬುರಗಿ ಎಸ್ಪಿ ಸಿದ್ದರಾಜು ಅವರು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಶಾಲೆಗಳಲ್ಲಿನ ಮೂಲಸೌಲಭ್ಯಗಳಾದ ಶೌಚಾಲಯ, ಕುಡಿಯುವ ನೀರು, ದವಸ ಧಾನ್ಯ, ಆಹಾರದ ಗುಣಮಟ್ಟ ಸೇರಿದಂತೆ ವಿವಿಧ ಅನುಕೂಲತೆಗಳ ಬಗ್ಗೆ ಪರಿಶೀಲನೆ ನಡೆಸಿ, ಅಲ್ಲಿನ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಗೀತಾ ಬೆನಾಳ, ಪೊಲೀಸರು ಮತ್ತು ಶಿಕ್ಷಕರು ಇದ್ದರು.
Next Story







