ಕಲಬುರಗಿ | ಲಾರಿ–ಆಟೋ ಮುಖಾಮುಖಿ ಢಿಕ್ಕಿ: ತಾಯಿ, ಮಗು ಮೃತ್ಯು

ವಾಡಿ: ಲಾರಿ ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ತಾಯಿ ಹಾಗೂ ಮೂರು ತಿಂಗಳ ಮಗು ಮೃತಪಟ್ಟ ಘಟನೆ ಲಾಡ್ಲಾಪುರ–ಹಲಕರ್ಟಿ ನಡುವಿನ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಬುಧವಾರ ಸಂಜೆ ನಡೆದಿದೆ.
ವಾಡಿ ಪಟ್ಟಣದ ಕಲ್ಕಂ ಏರಿಯಾ ನಿವಾಸಿ ಶರಣಮ್ಮ ಶರಣು ಸಿಂಗೆ (30) ಹಾಗೂ ಅವರ ಮೂರು ತಿಂಗಳ ಮಗು ರಾಘವೇಂದ್ರ ಶರಣು ಸಿಂಗೆ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಸಾಬಮ್ಮ ಸಿಂಗೆ (50) ಹಾಗೂ ಆಟೋ ಚಾಲಕ ಖಾಜಾ ಪಟೇಲ್ ಭಾಷಾ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ವಾಡಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ.
ಘಟನೆಯ ಮಾಹಿತಿ ತಿಳಿದು ವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
Next Story




