ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕಲಬುರಗಿ : ಕರ್ನಾಟಕ ಕ್ರೈಸ್ತ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಕ್ರೈಸ್ತ ಸಮುದಾಯದ ಆರ್ಥಿಕ ಮತ್ತು ಶೈಕ್ಷಣಿಕ ಸಬಲೀಕರಣಕ್ಕಾಗಿ ರೂಪಿಸಿರುವ 9 ಸಾಲ ಮತ್ತು ಸಹಾಯಧನ ಯೋಜನೆಗಳಡಿ ಸೌಲಭ್ಯ ಪಡೆಯಲು ಕ್ರೈಸ್ತ ಸಮುದಾಯದ ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಅರಿವು ಶಿಕ್ಷಣ ಸಾಲ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಶ್ರಮಶಕ್ತಿ ಯೋಜನೆ, ಶ್ರಮಶಕ್ತಿ ವಿಶೇಷ ಮಹಿಳಾ ಯೋಜನೆ, ಗಂಗಾ ಕಲ್ಯಾಣ ಯೋಜನೆ, ವ್ಯಾಪಾರ ಉದ್ದಿಮೆ/ ನೇರ ಸಾಲ ಯೋಜನೆ ಹಾಗೂ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಕ್ರೈಸ್ತ ಸಮುದಾಯದ ಅರ್ಹ ಫಲಾನುಭವಿಗಳು https://kccdclonline.karnataka.gov.in/Portal ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2025ರ ನವೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕ ಕಚೇರಿಗೆ ಹಾಗೂ ನಿಗಮದ ವೆಬ್‍ಸೈಟ್‍ನ್ನು ಸಂಪರ್ಕಿಸಲು ಕೋರಲಾಗಿದೆ.





